ಬೆಂಗಳೂರು: ಕೊರೊನಾ ವಾರ್ ರೂಮ್ ಹಾಗೂ ಕಾಲ್ ಸೆಂಟರ್ ನಿರ್ವಹಣೆಯಲ್ಲಿ ಸುಧಾರಣೆ ಮಾಡಲು ವಿವಿಧ ಇಲಾಖೆಗಳ ನಡುವೆ ಸಮನ್ವಯ ರೂಪಿಸುವ ಕುರಿತು ಇಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಸಭೆ ನಡೆಸಿದರು.
ಮಾಗಡಿ ರಸ್ತೆಯ ಆರೋಗ್ಯ ಸೌಧದಲ್ಲಿ ನಡೆದ ಸಭೆಯಲ್ಲಿ ಆರೋಗ್ಯಾಧಿಕಾರಿಗಳು, ಆಯುಕ್ತರು ಭಾಗಿಯಾಗಿದರು. ಬೆಂಗಳೂರು ನಗರದಲ್ಲಿರುವ ಕೋವಿಡ್ ಬೆಡ್‌ಗಳ ಪ್ರಮಾಣ, ಹಂಚಿಕೆ ಹಾಗೂ ಅವುಗಳ ಲೈವ್ ಸ್ಟೇಟಸ್, ಆಕ್ಸಿಜನ್ ಬೆಡ್‌ಗಳ ಮಾಹಿತಿ ಹಾಗೂ ಅವುಗಳ ಲಭ್ಯತೆ, ಆಪ್ತಮಿತ್ರ, ಔಷಧ ವಿತರಣೆ, ಲಸಿಕೆ ಅಭಿಯಾನ, 108, 102 ನಿಯಂತ್ರಣ ಕೊಠಡಿ ಮಾಹಿತಿ ಬಗ್ಗೆ ಜನರಿಗೆ ಸುಲಭವಾಗಿ ತಿಳಿಯುವಂತೆ ಮಾಡುವುದು ಹೇಗೆ ಎಂಬುದರ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.