ಬೆಂಗಳೂರು: ಪ್ರಸ್ತುತ ರಾಜ್ಯದ ಮುಂಗಾರು ಮತ್ತು ಪ್ರವಾಹದ ಸ್ಥಿತಿಗತಿಯ ಕುರಿತು ಕಂದಾಯ ಸಚಿವ ಆರ್.ಅಶೋಕ್, 19 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಸಂಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಡಿಸಿಗಳ ಜೊತೆ ವಿಡಿಯೋ ಸಂವಾದದ ಮೂಲಕ ಚರ್ಚೆ ನಡೆಸಿದ ಸಚಿವರು, ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಪ್ರವಾಹ ಮತ್ತು ಭೂ ಕುಸಿತದ ಬಗ್ಗೆ ಮುಂದೆ ತೆಗೆದುಕೊಳ್ಳಬಹುದಾದ ಹಾಗೂ ಈಗಾಗಲೇ ತೆಗೆದುಕೊಂಡಿರುವ ಕ್ರಮಗಳ ಕುರಿತಾಗಿ ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ.