ETV Bharat / city

ಕಾಂಗ್ರೆಸ್ , ಬಿಜೆಪಿ ಪರಸ್ಪರ ಕೆಸರೆರಚಾಟ ಅಕ್ಟೋಬರ್ 30ಕ್ಕೆ ಎಂಡ್: ಸಚಿವ ಆರ್​. ಅಶ್ವತ್ಥ್ ನಾರಾಯಣ

author img

By

Published : Oct 22, 2021, 2:27 AM IST

ಉದ್ಯಮಗಳ ಈಗಿನ ಬೇಡಿಕೆಗೆ ತಕ್ಕಂತೆ ಹೊಸ ಪಠ್ಯಕ್ರಮ ರೂಪಿಸಲಾಗಿದೆ. ಅಡ್ವಾನ್ಸ್ಡ್ ಸಿ.ಎನ್.ಸಿ. ಮಷಿನಿಂಗ್, ಬೇಸಿಕ್ಸ್ ಆಫ್ ಡಿಜೈನ್ ಅಂಡ್ ವರ್ಚ್ಯುಯಲ್ ವೆರಿಫಿಕೇಷನ್ ಮುಂತಾದವುಗಳನ್ನು ಪಠ್ಯಕ್ರಮದಲ್ಲಿ ಸೇರಿಸಲಾಗಿದೆ.

ಕಾಂಗ್ರೆಸ್ , ಬಿಜೆಪಿ ಪರಸ್ಪರ ಕೆಸರೆರಚಾಟ ಅಕ್ಟೋಬರ್ 30ಕ್ಕೆ ಎಂಡ್: ಸಚಿವ ಆರ್​.  ಅಶ್ವತ್ಥ್ ನಾರಾಯಣ
ಕಾಂಗ್ರೆಸ್ , ಬಿಜೆಪಿ ಪರಸ್ಪರ ಕೆಸರೆರಚಾಟ ಅಕ್ಟೋಬರ್ 30ಕ್ಕೆ ಎಂಡ್: ಸಚಿವ ಆರ್​. ಅಶ್ವತ್ಥ್ ನಾರಾಯಣ

ಬೆಂಗಳೂರು: ಕಾಂಗ್ರೆಸ್, ಬಿಜೆಪಿ ಪರಸ್ಪರ ನಿಂದನೆ ಅಕ್ಟೋಬರ್ 30ಕ್ಕೆ ಅಂತ್ಯಗೊಳ್ಳಲಿದ್ದು, ಈ ಜಗಳವನ್ನು ಉಪಚುನಾವಣೆ ನಡೆಯುತ್ತಿರುವ ಕ್ಷೇತ್ರಗಳ ಜನ ನೋಡಿ ತಮಗೆ ಯಾರು ಬೇಕು ಎಂಬುದನ್ನು ನಿರ್ಣಯಿಸುತ್ತಾರೆ ಎಂದು ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಬೆಂಗಳೂರು ನಗರದ ಪೀಣ್ಯದಲ್ಲಿ ಮೇಲ್ದರ್ಜೆಗೇರಿಸಿರುವ ಸರ್ಕಾರಿ ಐಟಿಐ ಕೇಂದ್ರವನ್ನು ಪರಿಶೀಲಿಸಿ ಮಾತನಾಡಿದ ಅವರು ಚುನಾವಣೆಯ ಸಮಯ ಎಂದ ಮೇಲೆ ಇದೆಲ್ಲಾ ನಡೆಯುತ್ತದೆ. ಪ್ರತಿಯೊಬ್ಬರೂ ಅವರವರ ಶೈಲಿಯಲ್ಲಿ ಮಾತನಾಡುತ್ತಾರೆ. ಉಪಚುನಾವಣೆ ಮುಗಿದ ಮೇಲೆ ಇದೆಲ್ಲಾ ನಿಂತುಹೋಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಒಟ್ಟು 4,636 ಕೋಟಿ ಯೋಜನಾ ವೆಚ್ಚದ ಪೈಕಿ ಕರ್ನಾಟಕ ಸರ್ಕಾರ ಶೇಕಡಾ 12ರಷ್ಟನ್ನು ಹಾಗೂ ಟಾಟಾ ಟೆಕ್ನಾಲಜೀಸ್ ಲಿಮಿಟೆಡ್ ಶೇಕಡಾ 88ರಷ್ಟನ್ನು ಭರಿಸುತ್ತಿವೆ. ಜೊತೆಗೆ ರಾಜ್ಯ ಸರ್ಕಾರವು ಭೌತಿಕ ಮೂಲಸೌಕರ್ಯಗಳಿಗಾಗಿ 220 ಕೋಟಿ ವೆಚ್ಚ ಮಾಡುತ್ತಿದೆ. ತಾಂತ್ರಿಕ ಉನ್ನತೀಕರಣಕ್ಕಾಗಿ ಆಧುನಿಕ ಸಿಎನ್​​ಸಿ ಯಂತ್ರ, ಲೇಸರ್ ಕಟಿಂಗ್ ಯಂತ್ರ, ಆಡಿಟೀವ್ ಮ್ಯಾನುಫ್ಯಾಕ್ಟರಿಂಗ್, 3 ಡಿ ಪ್ರಿಂಟಿಂಗ್ ಮಷಿನ್, ಕೈಗಾರಿಕಾ ರೊಬೋಟ್, ವಿನೂತನ ತಂತ್ರಾಂಶಗಳು ಐಟಿಐ ಗಳಿಗೆ ಸೇರ್ಪಡೆಯಾಗಲಿವೆ ಎಂದು ಸ್ಪಷ್ಟನೆ ನೀಡಿದ್ದಾರೆ.

100 ಕೋಟಿ ಲಸಿಕೆ ಭಾರತೀಯರಿಗೆ ಹೆಮ್ಮೆ: ಭಾರತದ ಕೋವಿಡ್ ಲಸಿಕೆ ಸಾಧನೆ ವಿಚಾರವಾಗಿ ಸಚಿವ ಅಶ್ವಥ್ ನಾರಾಯಣ್ ಮಾಧ್ಯಮಗಳ ಜೊತೆ ಮಾತನಾಡಿ 100 ಕೋಟಿ ಲಸಿಕೆ ಹಂಚಿಕೆಯಾಗಿರುವುದು ಭಾರತೀಯರಾದ ನಾವು ಹೆಮ್ಮೆ ಪಡುವ ವಿಚಾರ. ಇದೊಂದು ದೊಡ್ಡ ಸಾಧನೆ. ಲಸಿಕೆ ನೀಡಲು ಸಹಕರಿಸಿದ ವೈದ್ಯಕೀಯ ಸಿಬ್ಬಂದಿಗೂ ಧನ್ಯವಾದಗಳು ಎಂದರು.

ಲಸಿಕೆ ಪಡೆಯುತ್ತಿರುವ ಜನರಿಗೂ ಧನ್ಯವಾದ ಹೇಳುತ್ತೇನೆ. ಉಚಿತವಾಗಿ ಲಸಿಕೆ ಕೊಟ್ಟ ಪ್ರಧಾನಿ ಮೋದಿಗೂ ಅಭಿನಂದನೆ ಸಲ್ಲಿಸುತ್ತೇನೆ. ಶೇಕಡಾ 100ರಷ್ಟು ಲಸಿಕೆ ಎರಡು ಡೋಸ್ ಜನರಿಗೆ ‌ಕೊಡುವ ಕೆಲಸ ಮಾಡುತ್ತೇವೆ. ಎಲ್ಲರೂ ಎರಡು ಡೋಸ್ ಲಸಿಕೆ ಪಡೆಯಬೇಕು ಎಂದು ಸಚಿವ ಅಶ್ವಥ್ ನಾರಾಯಣ ಹೇಳಿದರು.

ಉದ್ಯೋಗ ಕಾರ್ಯಕ್ರಮ: ಉದ್ಯೋಗ ಕಾರ್ಯಕ್ರಮದಡಿ ಟಾಟಾ ಕಂಪನಿಯ ಸಹಯೋಗದಲ್ಲಿ 4,636 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲಾಗಿರುವ 150 ಕೈಗಾರಿಕಾ ತರಬೇತಿ ಸಂಸ್ಥೆಗಳು (ಐಟಿಟಿ) ಇನ್ನೆರಡು ವಾರದಲ್ಲಿ ಉದ್ಘಾಟನೆಯಾಗಲಿದ್ದು, ಆಧುನಿಕ ಕೋರ್ಸ್ ಗಳನ್ನು ಒಳಗೊಂಡ ತರಬೇತಿಯು ಈ ಕೇಂದ್ರಗಳಲ್ಲಿ ನವೆಂಬರ್ 1ರಿಂದ ಆರಂಭವಾಗಲಿದೆ ಎಂದು ಕೌಶಾಲಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಹೇಳಿದರು.

ಉದ್ಯಮಗಳ ಈಗಿನ ಬೇಡಿಕೆಗೆ ತಕ್ಕಂತೆ ಹೊಸ ಪಠ್ಯಕ್ರಮ ರೂಪಿಸಲಾಗಿದೆ. ಅಡ್ವಾನ್ಸ್ಡ್ ಸಿ.ಎನ್.ಸಿ. ಮಷಿನಿಂಗ್, ಬೇಸಿಕ್ಸ್ ಆಫ್ ಡಿಜೈನ್ ಅಂಡ್ ವರ್ಚ್ಯುಯಲ್ ವೆರಿಫಿಕೇಷನ್, ಆರ್ಟಿಸಾನ್ ಯೂಸಿಂಗ್ ಅಡ್ವಾನ್ಸ್ಡ್ ಟೂಲ್ಸ್, ಇಂಡಸ್ಟ್ರಿಯಲ್ ರೊಬೊಟಿಕ್ಸ್ ಅಂಡ್ ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್, ಮ್ಯಾನುಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಅಂಡ್ ಆಟೋಮೇಷನ್ ಮತ್ತು ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್ ಇವುಗಳಲ್ಲಿ ಸೇರಿವೆ ಎಂದು ವಿವರಿಸಿದರು.

ಈ ಸಂಸ್ಥೆಗಳಲ್ಲಿ ಜೆಟಿಒಗಳಿಗೆ ಹೊಸ ತಾಂತ್ರಿಕತೆಗಳಲ್ಲಿ ತರಬೇತಿ ನೀಡಲಾಗುತ್ತದೆ. ಇದರಿಂದ ಪ್ರತಿವರ್ಷ 20,000 ಜೆಟಿಒಗಳಿಗೆ ಅನುಕೂಲವಾಗುತ್ತದೆ. ಇದರ ಜೊತೆಗೆ ಐಟಿಐ, ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಾಲೇಜುಗಳ ಸುಮಾರು 1 ಲಕ್ಷ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಪ್ರಯೋಜನವಾಗುತ್ತದೆ ಎಂದರು.

ಟಾಟಾ ಕಂಪನಿಯೊಂದಿಗೆ ದೀರ್ಘಾವಧಿ ಸಹಭಾಗಿತ್ವ ಹೊಂದುವ ಉದ್ದೇಶವಿದ್ದು ಮೊದಲ ಎರಡು ವರ್ಷಗಳಿಗಾಗಿ 300 ಹಾಗೂ ಮೂರನೇ ವರ್ಷಕ್ಕಾಗಿ 150 ವಿಷಯ ಪರಿಣತರನ್ನು ನಿಯೋಜಿಸಲಾಗುತ್ತದೆ. ಇದರಿಂದ ಜೆಟಿಒ ಗಳಿಗೆ ಹಾಗೂ ಐಟಿಐ ಬೋಧಕ ಸಿಬ್ಬಂದಿಗೆ ಹೊಸ ರೀತಿಯ ತರಬೇತಿಗಳ ಬಗ್ಗೆ ಮಾರ್ಗದರ್ಶನ ನೀಡಲು ಸಾಧ್ಯವಾಗುತ್ತದೆ ಎಂದು ಸಚಿವರು ಹೇಳಿದರು.

ಯಂತ್ರೋಪಕರಣಗಳನ್ನು ಸುಸಜ್ಜಿತ ಸ್ಥಿತಿಯಲ್ಲಿ ಇರಿಸುವುದಕ್ಕಾಗಿ 5 ವರ್ಷಗಳ ನಿರ್ವಹಣಾ ಒಪ್ಪಂದವನ್ನು ಇದು ಒಳಗೊಂಡಿದೆ. ಅಗತ್ಯಬಿದ್ದರೆ ಇದನ್ನು ಇನ್ನೂ 5 ವರ್ಷಗಳಿಗೆ ಹೆಚ್ಚಿಸಲಾಗುತ್ತದೆ. ಹಾಗೆಯೇ ಈ 150 ಸಂಸ್ಥೆಗಳಿಗೆ ಅಳವಡಿಸಿರುವ 11 ದೀರ್ಘಾವಧಿ ತರಬೇತಿ ಹಾಗೂ 23 ಅಲ್ಪಾವಧಿ ತರಬೇತಿ ಕೋರ್ಸ್ ಗಳನ್ನು ಕ್ರಮೇಣ ಎಲ್ಲಾ ಐ.ಟಿ.ಐ.ಗಳಿಗೆ ವಿಸ್ತರಿಸಲಾಗುತ್ತದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.

ಪ್ರಯೋಗಾಲಯ ವೀಕ್ಷಣೆ: ಸಚಿವರು ಸಂಸ್ಥೆಯಲ್ಲಿ ಹೊಸದಾಗಿ ಸ್ಥಾಪಿಸಿರುವ ಪ್ರಯೋಗಾಲಯವನ್ನು ವೀಕ್ಷಿಸಿದರು. ಎಲೆಕ್ಟ್ರಿಕ್ ವಾಹನವನ್ನು ನೋಡಿದ್ದಷ್ಟೇ ಅಲ್ಲದೆ ಚಾಲನೆಯನ್ನೂ ಮಾಡಿದರು. ಆಧುನಿಕ ವೆಲ್ಡಿಂಗ್ ವಿಧಾನದ ಬಗ್ಗೆ ಖುದ್ದು ವೀಕ್ಷಿಸಿ ಮಾಹಿತಿ ಪಡೆದರು. ಇದೇ ವೇಳೆ, ವಿದ್ಯಾರ್ಥಿಗಳು ಮತ್ತು ಉದ್ಯಮಿಗಳ ಜತೆ ಸಂವಾದ ನಡೆಸಿದರು.

ಇದನ್ನೂ ಓದಿ: ಸಿಂದಗಿ, ಹಾನಗಲ್ ಉಪಸಮರ: ಮುಂದಿನ ಫಲಿತಾಂಶಕ್ಕೆ ಜನರೇ ನಿರ್ಣಾಯಕ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.