ETV Bharat / city

'Ride for Appu' ಬೈಕ್​ ಮೆರವಣಿಗೆಗೆ ಚಾಲನೆ ನೀಡಿದ ಸಚಿವ ಅಶ್ವತ್ಥ್‌ ನಾರಾಯಣ - ಬೆಂಗಳೂರಿನಲ್ಲಿ ಬೈಕ್ ಮೆರವಣಿಗೆ

ಇಂದು ಬೆಂಗಳೂರಿನಲ್ಲಿ ಆರೋಜಿಸಲಾಗಿದ್ದ 'Ride for Appu' ಬೈಕ್ ಮೆರವಣಿಗೆಗೆ ಸಚಿವ ಅಶ್ವತ್ಥ್‌ ನಾರಾಯಣ ಚಾಲನೆ ನೀಡಿದರು..

'' Ride for Appu '' bike parade
‘ರೈಡ್ ಫಾರ್ ಅಪ್ಪು’ ಬೈಕ್ ಮೆರವಣಿಗೆಗೆ ಸಚಿವ ಅಶ್ವತ್ಥನಾರಾಯಣ ಚಾಲನೆ
author img

By

Published : Nov 28, 2021, 3:14 PM IST

ಬೆಂಗಳೂರು : ಟೀಂ ದ್ವಿಚಕ್ರ ಮತ್ತು ಇಂಚರ ಸ್ಟುಡಿಯೋ ವತಿಯಿಂದ ಅಪ್ಪು ಅಗಲಿದ ಒಂದು ತಿಂಗಳ ನೆನಪಿನಲ್ಲಿ ಇಂದು ‘ರೈಡ್ ಫಾರ್ ಅಪ್ಪು’ ಬೈಕ್ ಮೆರವಣಿಗೆ ಆಯೋಜಿಸಲಾಗಿತ್ತು. ಈ ಮೆರವಣಿಗೆಗೆ ಮಲ್ಲೇಶ್ವರ ಕ್ಷೇತ್ರದ ಶಾಸಕ, ಸಚಿವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ ಚಾಲನೆ ನೀಡಿದರು.

‘ರೈಡ್ ಫಾರ್ ಅಪ್ಪು’ ಬೈಕ್ ಮೆರವಣಿಗೆಗೆ ಸಚಿವ ಅಶ್ವತ್ಥ್‌ ನಾರಾಯಣ ಚಾಲನೆ..

ಫ್ರೀಡಂ ಪಾರ್ಕ್‌ನಿಂದ ಅಪ್ಪು ಸಮಾಧಿಯವರೆಗೆ ನಡೆದ ಮೆರವಣಿಗೆಯಲ್ಲಿ ಸುಮಾರು 200 ಬೈಕ್ ಸವಾರರು ಪಾಲ್ಗೊಂಡಿದ್ದರು. ಪುನೀತ್ ಅವರು ಹೆಲ್ಮೆಟ್ ಧರಿಸುವುದರ ಮಹತ್ವ ಮನಗಾಣಿಸುವ ಜಾಹೀರಾತಿನ ಮೂಲಕ ರಸ್ತೆ ಸುರಕ್ಷತೆಯ ಅರಿವು ಮೂಡಿಸಿದ್ದನ್ನು ನೆನೆದರು.

ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಎಲ್ಲರೂ ಹೆಲ್ಮೆಟ್ ಧರಿಸಿದ್ದರು. ಸಚಿವ ಅಶ್ವತ್ಥ್‌ ನಾರಾಯಣ ಕೂಡ ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸುವ ಮೂಲಕವೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇದನ್ನೂ ಓದಿ: ''MeToo'' ಕೇಸ್​ನಲ್ಲಿ ಅರ್ಜುನ್ ಸರ್ಜಾಗೆ ರಿಲೀಫ್​?.. ಶ್ರುತಿ ಹರಿಹರನ್​ಗೆ ನೋಟಿಸ್!

ನಂತರ ಮಾತನಾಡಿದ ಸಚಿವರು, ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅಭಿನಯದ ಜೊತೆಗೆ ತಮ್ಮ ಸಮಾಜಮುಖಿ ಕಾರ್ಯಗಳ ಮೂಲಕ ಜನ ಸೇವೆಯಲ್ಲಿ ತೊಡಗಲು ಸದಾ ಪ್ರೇರಕ ಶಕ್ತಿಯಾಗಿ ಚಿರಾಯುವಾಗಿರುತ್ತಾರೆ. ಪುನೀತ್ ಅವರ ಸಾಧನೆ ದಿನ ದಿನಕ್ಕೆ ಹೆಚ್ಚೆಚ್ಚು ಜನರನ್ನು ತಲುಪುತ್ತಿದೆ.

ಇದು ನಮ್ಮ ವಿದ್ಯಾರ್ಥಿ ಸಮೂಹ ಸೇರಿದಂತೆ ಎಲ್ಲರಿಗೂ ಸ್ಫೂರ್ತಿಯಾಗಬೇಕು. ಪ್ರತಿಯೊಬ್ಬರೂ ತಮ್ಮ ಕ್ಷೇತ್ರದಲ್ಲಿ ಸ್ವಂತಿಕೆ ಹಾಗೂ ಸಮಾಜಪರ ಮನೋಭಾವದೊಂದಿಗೆ ಕೆಲಸ ಮಾಡಬೇಕು ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.