ಬೆಂಗಳೂರು: ಭ್ರಷ್ಟಾಚಾರವನ್ನು ಹುಟ್ಟುಹಾಕಿದ್ದೇ ಕಾಂಗ್ರೆಸ್. ಕಾಂಗ್ರೆಸ್ ಸಂಸ್ಕೃತಿಯೇ ಭ್ರಷ್ಟಾಚಾರದಿಂದ ಕೂಡಿದೆ. ಅದನ್ನು ನಿರ್ನಾಮ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ವಿಚಾರ ಕುರಿತು ನನಗೆ ಹೆಚ್ಚು ಮಾಹಿತಿ ಇಲ್ಲ. ಮಾಹಿತಿ ಪಡೆದು ಹೇಳುತ್ತೇನೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜ್ಯ ಸರ್ಕಾರದ ಮೇಲೆ 40% ಆರೋಪ ಮಾಡಿದ್ದಾರೆ. ಸುರ್ಜೇವಾಲಾ ಅವರಿಗೆ ನಮ್ಮ ಸರ್ಕಾರದ ಬಗ್ಗೆ ಮಾಹಿತಿ ಇಲ್ಲ. ಮೊದಲ ಕಾಂಗ್ರೆಸ್ನಲ್ಲಿನ ಭ್ರಷ್ಟಾಚಾರ ಸಂಸ್ಕೃತಿಯನ್ನು ಅಳಿಸಲಿ ಎಂದರು.
ಭ್ರಷ್ಟಾಚಾರ, ಪರ್ಸಂಟೇಜ್ ಬಿಜೆಪಿ ಸರ್ಕಾರದಲ್ಲಿ ನಡೆಯಲ್ಲ. ಪದೇ ಪದೇ ಆಪಾದನೆ ಮಾಡುವುದು ಸರಿಯಲ್ಲ. ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ನಿಲ್ಲಿಸಲಿ. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರ ಪ್ರಾಥಮಿಕ ವರದಿ ಬರಲಿ. ವರದಿಯಲ್ಲಿ ಏನು ಸತ್ಯಾಂಶ ಬರಲಿದೆ ಅನ್ನೋದು ನೋಡೋಣ ಎಂದು ಸಚಿವರು ಹೇಳಿದರು.
ಇದನ್ನೂ ಓದಿ: ಗುತ್ತಿಗೆದಾರ ಆತ್ಮಹತ್ಯೆ ಕೇಸ್.. ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಯುವ ಕಾಂಗ್ರೆಸ್ನಿಂದ ಸಚಿವರ ಮನೆ ಮುತ್ತಿಗೆ