ETV Bharat / city

ಕೆಲ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಸಚಿವ ಸಿ.ಸಿ ಪಾಟೀಲ್

author img

By

Published : Feb 23, 2022, 6:23 PM IST

ಸಚಿವ ಸಿ.ಸಿ. ಪಾಟೀಲ್ ಇಂದು ಬೆಂಗಳೂರಿನ ಕೆ.ಆರ್. ವೃತ್ತದಲ್ಲಿರುವ ಲೋಕೋಪಯೋಗಿ ಇಲಾಖೆಯ ಕಚೇರಿ, ಕೆಷಿಪ್ ಮತ್ತು ರಾಷ್ಟ್ರೀಯ ಹೆದ್ದಾರಿ ಕಚೇರಿಗಳಿಗೆ ಭೇಟಿ ನೀಡಿದರು.

Minister CC Patil visited government offices today
ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಸಚಿವ ಸಿ.ಸಿ ಪಾಟೀಲ್

ಬೆಂಗಳೂರು: ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ್ ಇಂದು ಬೆಂಗಳೂರಿನ ಕೆ.ಆರ್. ವೃತ್ತದಲ್ಲಿರುವ ಲೋಕೋಪಯೋಗಿ ಇಲಾಖೆ ಕಚೇರಿ, ಕೆಷಿಪ್ ಮತ್ತು ರಾಷ್ಟ್ರೀಯ ಹೆದ್ದಾರಿ ಕಚೇರಿಗಳಿಗೆ ಭೇಟಿ ನೀಡಿದರು. ಅಲ್ಲಿನ ಕಚೇರಿ ನಿರ್ವಹಣೆ ಮತ್ತು ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಪರಿಶೀಲನೆ ನಡೆಸಿದರು.‌

ಲೋಕೋಪಯೋಗಿ ಇಲಾಖೆಯು ಮತ್ತಷ್ಟು ಜನಸ್ನೇಹಿಯಾಗಿ ಕೆಲಸ ಮಾಡುವಂತಾಗಲು ಕೆಲವು ವಿಭಾಗಗಳಲ್ಲಿ ಡಿಜಿಟಲೀಕರಣ ಕೈಗೊಳ್ಳಲು ಹಾಗೂ ಸಾಫ್ಟ್​​​​ವೇರ್​ಗಳನ್ನು ಉನ್ನತೀಕರಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಕಳೆದ ತಿಂಗಳು ಈ ಕಚೇರಿಗಳಿಗೆ ತಾವು ಭೇಟಿ ನೀಡಿದಾಗ ನೀಡಲಾದ ಸೂಚನೆಗಳನ್ನು ಪಾಲಿಸಲಾಗಿದೆಯೇ ಎಂಬುದನ್ನು ಖುದ್ದಾಗಿ ತಪಾಸಣೆ ಕೈಗೊಂಡ ಸಚಿವರು, ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ, ಇಲಾಖೆಯ ಹಲವು ಸಿಬ್ಬಂದಿಯೊಂದಿಗೆ ಸಚಿವರು ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು.

ಇದನ್ನೂ ಓದಿ: ಮತಾಂಧ ಶಕ್ತಿಗಳು ಹರ್ಷನ ಹತ್ಯೆ ಮಾಡಿವೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಬಿ.ಹೆಚ್. ಅನಿಲ್ ಕುಮಾರ್, ಕಾರ್ಯದರ್ಶಿ ಡಾ. ಕೆ.ಎಸ್. ಕೃಷ್ಣಾರೆಡ್ಡಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.