ಬೆಂಗಳೂರು: ಹೊಸಕೋಟೆ ಮತ್ತು ಮಹದೇವಪುರ ಕ್ಷೇತ್ರದ ಹೂಡಿಯಲ್ಲಿರುವ ಆಹಾರ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಗೋದಾಮಿಗೆ ಭೇಟಿ ನೀಡಿದ ಸಚಿವ ಗೋಪಾಲಯ್ಯ, ಕಳಪೆ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡಿದ ಅಧಿಕಾರಿಗಳನ್ನ ತೀವ್ರ ತರಾಟೆಗೆ ತೆಗೆದುಕೊಂಡರು.
ಜನರಿಗೆ ವಿತರಿಸುವ ಆಹಾರ ಧಾನ್ಯಗಳು ಕಳಪೆ ಗುಣಮಟ್ಟ ಹೊಂದಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭೇಟಿ ನೀಡಿದ ಸಚಿವರು, ಇದರ ಹಿಂದೆ ಯಾರೇ ಇದ್ದರೂ ಯಾವುದೇ ಒತ್ತಡಕ್ಕೆ ಮಣಿಯದೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಬೆಂಗಳೂರು ನಗರ ಜಿಲ್ಲಾ ಆಹಾರ ಇಲಾಖೆಯ ಜಂಟಿ ನಿರ್ದೇಶಕಿ ಗಿರಿಜಾ ದೇವಿ, ಬೆಂಗಳೂರು ಪೂರ್ವ ತಾಲೂಕು ಆಹಾರ ನಿರೀಕ್ಷಕ ರಾಜಪ್ಪ ಸೇರಿದಂತೆ ಇತರರು ಇದ್ದರು.