ETV Bharat / city

ಕಾಮಗಾರಿಗಳ ಗುಣಮಟ್ಟ ಕಾಪಾಡುವುದು ಗುತ್ತಿಗೆದಾರರ ಆದ್ಯ ಕರ್ತವ್ಯ - ಸಚಿವ ಗೋಪಾಲಯ್ಯ

ಮಹಾಲಕ್ಷ್ಮಿ ಲೇಔಟ್ ವ್ಯಾಪ್ತಿಯ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಪರಿಶೀಲಿಸಿದ ಸಚಿವ ಗೋಪಾಲಯ್ಯ, ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಗುತ್ತಿಗೆದಾರರು, ಇಂಜಿನಿಯರ್ ಈ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಬೇಕೆಂದು ಸೂಚಿಸಿದರು.

minister gopalaya visited Mahalaxmi Layout to check road work
ಮಹಾಲಕ್ಷ್ಮಿ ಲೇಔಟ್ ವ್ಯಾಪ್ತಿಯ ರಸ್ತೆ ಡಾಂಬರೀಕರಣ ಕಾಮಗಾರಿ ಪರಿಶೀಲಿಸಿದ ಸಚಿವ ಗೋಪಾಲಯ್ಯ
author img

By

Published : Feb 5, 2022, 12:39 PM IST

ಬೆಂಗಳೂರು: ನಗರದ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ. 75ರ ಕುರುಬರಹಳ್ಳಿಯಲ್ಲಿ ಕೈಗೊಂಡಿರುವ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಶಾಸಕ, ಅಬಕಾರಿ ಸಚಿವ ಕೆ.ಗೋಪಾಲಯ್ಯ ಇಂದು ಬೆಳಗ್ಗೆ ವೀಕ್ಷಿಸಿದರು.

ಕಾಮಗಾರಿ ಪರಿಶೀಲಿಸಿ ಮಾತನಾಡಿದ ಗೋಪಾಲಯ್ಯ, ಜನರ ತೆರಿಗೆ ಹಣದಲ್ಲಿ ನಡೆಯುತ್ತಿರುವ ಸರ್ಕಾರದ ಎಲ್ಲ ಅಭಿವೃದ್ಧಿ ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಗುತ್ತಿಗೆದಾರರು, ಇಂಜಿನಿಯರ್ ಈ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಬೇಕೆಂದು ಸೂಚಿಸಿದರು.

ಇದನ್ನೂ ಓದಿ: ಭೂಮಿಯಲ್ಲಿ ಗಾಳಿ ಸ್ಫೋಟಗೊಳ್ಳುವುದು ಮನೆ ಕುಸಿತಕ್ಕೆ ಕಾರಣ: ಪ್ರೊಟೆಕ್ಟ್ ಗ್ರೂಪ್ ಅಧ್ಯಕ್ಷ ರಘುನಾಥ್

ಸ್ಥಳೀಯರು ಕೂಡ ತಮ್ಮ ಬಡಾವಣೆಗಳಲ್ಲಿ ನಡೆಯುತ್ತಿರುವ ಸಾರ್ವಜನಿಕ ಕಾಮಗಾರಿಗಳು ಎಷ್ಟರ ಮಟ್ಟಿಗೆ ಗುಣಮಟ್ಟದಿಂದ ಕೂಡಿರುತ್ತವೆ ಎನ್ನುವುದರ ಮೇಲೆ ನಿಗಾ ಇರಿಸಬೇಕು. ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಗುತ್ತಿಗೆದಾರರು, ಇಂಜಿನಿಯರ್​ಗಳು ಕಾಮಗಾರಿ ಮಾಡಿಕೊಂಡು ಹೋಗುತ್ತಾರೆ ಎಂದು ಕೈ ಕಟ್ಟಿಕೊಂಡು ಕುಳಿತುಕೊಳ್ಳದೇ, ತಮ್ಮ ಬಡಾವಣೆಯ ಅಭಿವೃದ್ಧಿ ಕಾಮಗಾರಿ ತನ್ನ ಮನೆಯ ಕಾರ್ಯ ಎಂಬ ಭಾವನೆ ಎಲ್ಲರಿಗೂ ಬಂದರೆ ಕಾಮಗಾರಿಗಳು ದೀರ್ಘ ಬಾಳಿಕೆ‌ ಬರಲು ಸಾಧ್ಯವಾಗುತ್ತದೆ ಎಂದು ಕರೆ ನೀಡಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.