ETV Bharat / city

ನೆರೆ ಪರಿಹಾರ ವಿತರಣೆ ವಿಳಂಬಕ್ಕೆ ಸಚಿವ ಕಾರಜೋಳ ಆಕ್ಷೇಪ.. ಶೀಘ್ರ ಕ್ರಮಕೈಗೊಳ್ಳುವಂತೆ ಸಿಎಂ ಸೂಚನೆ - ಶೀಘ್ರವೇ ಪ್ರವಾಹ ಪರಿಹಾರ ವಿತರಿಸಲು ಆಗ್ರಹ

ಬಸ್ ಶೆಲ್ಟರ್ ಮತ್ತು ಸಮುದಾಯ ಭವನಗಳಲ್ಲಿ ಇನ್ನೂ ಸಂತ್ರಸ್ತರು ವಾಸಿಸುತ್ತಿದ್ದು, ಅಂಥವರಿಗೆ ಪರಿಹಾರ ನೀಡಲು ತಕ್ಷಣ ಕ್ರಮ ಕೈಗೊಳ್ಳಲು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಜಿಲ್ಲಾಧಿಕಾರಿಗಳ ಜತೆಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದರು..

flood relief
ಸಿಎಂ ಸೂಚನೆ
author img

By

Published : Dec 31, 2021, 5:31 PM IST

ಬೆಂಗಳೂರು : ಪ್ರವಾಹ ಮತ್ತು ಮಳೆಯಿಂದಾಗಿ ಆಗಿರುವ ನಷ್ಟ ಪರಿಹಾರವನ್ನು ತಕ್ಷಣವೇ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳ ಜೊತೆಗೆ ನಡೆಯುತ್ತಿರುವ ಸಭೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಬೆಳಗಾವಿ, ಬಾಗಲಕೋಟೆ ಮತ್ತು ಕಾರವಾರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಹಾನಿ ಉಂಟಾಗಿದೆ.

ಬಸ್ ಶೆಲ್ಟರ್ ಮತ್ತು ಸಮುದಾಯ ಭವನಗಳಲ್ಲಿ ಇನ್ನೂ ಸಂತ್ರಸ್ತರು ವಾಸಿಸುತ್ತಿದ್ದು, ಅಂಥವರಿಗೆ ಪರಿಹಾರ ನೀಡಲು ತಕ್ಷಣ ಕ್ರಮ ಕೈಗೊಳ್ಳಲು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಜಿಲ್ಲಾಧಿಕಾರಿಗಳ ಜತೆಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಈ ವೇಳೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಇಂಥ ಪ್ರಕರಣಗಳಿಗೆ ತಕ್ಷಣ ಪರಿಹಾರ ನೀಡುವಂತೆ ಸೂಚಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ಜಿಲ್ಲಾಧಿಕಾರಿಗಳ ಸಮ್ಮೇಳನದಲ್ಲಿ ಬೆಳಗಾವಿ ಪ್ರಕರಣಗಳ ಬಗ್ಗೆ ಸಚಿವ ಕಾರಜೋಳ ಪ್ರಸ್ತಾಪಿಸಿದರು.

ವಿವರಗಳನ್ನು ಒದಗಿಸಿದ ಬೆಳಗಾವಿ ಜಿಲ್ಲಾಧಿಕಾರಿ 7,600 ಪ್ರಕರಣಗಳ ಪುನರ್ ಪರಿಶೀಲನೆ ಮತ್ತು 4 ರಿಂದ 5 ಸಾವಿರ ಪ್ರಕರಣಗಳಲ್ಲಿ ಮೇಲ್ವಿಚಾರಣೆ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ತಿಳಿಸಿದರು. ಈ ವೇಳೆ ತಕ್ಷಣ ಪರಿಹಾರ ನೀಡಲು ಅಗತ್ಯ ಕ್ರಮಕೈಗೊಳ್ಳಲು ಸಚಿವ ಕಾರಜೋಳ ಸೂಚಿಸಿದರು.

ಇದನ್ನೂ ಓದಿ: ಬಾಸಿಸಂ ಬಿಟ್ಟು ಜನರ ಕೆಲಸ ಮಾಡಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಪಾಠ ಹೀಗಿತ್ತು..

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.