ETV Bharat / city

ರೋಗ ಉಲ್ಬಣಗೊಂಡು ಬರುವುದರಿಂದ ಸಾವಿನ ಸಂಖ್ಯೆ ಹೆಚ್ಚಳ: ಕೋಟ ಶ್ರೀನಿವಾಸ ಪೂಜಾರಿ

ರೋಗ ಉಲ್ಬಣಗೊಂಡು ಕೊನೆಯ ಹಂತದಲ್ಲಿ ಬರುವವರ ಸಂಖ್ಯೆ ಹೆಚ್ಚಿರುವ ಕಾರಣ ದ.ಕ. ಜಿಲ್ಲೆಯಲ್ಲಿ ಮೃತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Minister Kota Srinivasa Poojary Statement
ರೋಗ ಉಲ್ಬಣಗೊಂಡು ಬರುವುದರಿಂದ ಸಾವಿನ ಸಂಖ್ಯೆ ಹೆಚ್ಚುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ
author img

By

Published : Jul 25, 2020, 11:27 PM IST

ಮಂಗಳೂರು: ನಗರದಲ್ಲಿ ವೆನ್ಲಾಕ್ ಕೋವಿಡ್ ಆಸ್ಪತ್ರೆ ಸೇರಿ 8 ಮೆಡಿಕಲ್ ಕಾಲೇಜು ಆಸ್ಪತ್ರೆಗಳಿರುವ ಕಾರಣ, ಬೇರೆ-ಬೇರೆ ಜಿಲ್ಲೆಗಳಿಂದ ಕೋವಿಡ್ ಚಿಕಿತ್ಸೆಗೆಂದು ಬರುವವರ ಸಂಖ್ಯೆ ಅಧಿಕವಿದೆ. ಅಲ್ಲದೆ, ರೋಗ ಉಲ್ಬಣಗೊಂಡು ಕೊನೆಯ ಹಂತದಲ್ಲಿ ಬರುವವರ ಸಂಖ್ಯೆ ಹೆಚ್ಚಿರುವ ಕಾರಣ ದ.ಕ.ಜಿಲ್ಲೆಯಲ್ಲಿ ಮೃತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ರೋಗ ಉಲ್ಬಣಗೊಂಡು ಬರುವುದರಿಂದ ಸಾವಿನ ಸಂಖ್ಯೆ ಹೆಚ್ಚುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

ಸಾಕಷ್ಟು ಆಸ್ಪತ್ರೆಗಳಿದ್ದರೂ ದ.ಕ.ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಡುವವರ ಸಂಖ್ಯೆ ಅಧಿಕವಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದೀಗ ಇಡೀ ರಾಜ್ಯದಲ್ಲಿ ಕೋವಿಡ್ ಸೋಂಕಿತ ಎಪಿಎಲ್, ಬಿಪಿಎಲ್ ಕಾರ್ಡುದಾರರಿಗೆ ವೆನ್ಲಾಕ್ ಆಸ್ಪತ್ರೆ ಮಾತ್ರವಲ್ಲ, ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲೂ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಸಾವಿನ ಸಂಖ್ಯೆಯಲ್ಲಿ ಹೆಚ್ಚಳದ ಬಗ್ಗೆ ವೈದ್ಯಕೀಯ ತಜ್ಞರಲ್ಲಿ ಚರ್ಚೆ ನಡೆಸಲಾಗಿದೆ. ಅವರು ಹೇಳುವಂತೆ, ಸೋಂಕಿತರು ಗಂಭೀರ ಸ್ಥಿತಿಯಲ್ಲಿರುವಾಗ ಆಸ್ಪತ್ರೆಗೆ ಬಂದಲ್ಲಿ ಎಷ್ಟೇ ಗುಣಮಟ್ಟದ ಚಿಕಿತ್ಸೆ ನೀಡಿದರೂ ಉಳಿಸುವ ಸಾಧ್ಯತೆ ಕಡಿಮೆ.

ಅಲ್ಲದೆ, ಜಿಲ್ಲೆಯಲ್ಲಿ ಕೋವಿಡ್​ನಿಂದ 46ನೇ ಸಾವು ಸಂಭವಿಸಿದಾಗ ಮತ್ತೊಮ್ಮೆ ವೈದ್ಯಕೀಯ ತಜ್ಞರೊಂದಿಗೆ ಚರ್ಚೆ ನಡೆಸಿದಾಗ, ಅಷ್ಟು ಸಾವಿನಲ್ಲಿ ಕೇವಲ ಐವರು ಮಾತ್ರ ಕೋವಿಡ್​ನಿಂದ ಮೃತಪಟ್ಟಿದ್ದಾರೆ. ಉಳಿದ 41 ಸಾವು ಇತರ ರೋಗದಿಂದ ಬಳಲುತ್ತಿರುವವರು ಕೊನೆಯ ಹಂತದಲ್ಲಿ ಚಿಕಿತ್ಸೆಗೆ ಆಸ್ಪತ್ರೆಗೆ ಬಂದಿರುವುದರಿಂದ ಆಗಿದೆ ಎಂಬ ಅಭಿಪ್ರಾಯ ದೊರಕಿದೆ. ಕೋವಿಡ್ ಸೋಂಕಿನ ವಿಚಾರದಲ್ಲಿ ದ.ಕ.ಜಿಲ್ಲೆಯಲ್ಲಿ ಎಲ್ಲರೂ ತಂಡವಾಗಿ ಕೆಲಸ ಮಾಡುತ್ತಿದ್ದು, ಇಡೀ ರಾಜ್ಯದಲ್ಲಿ ದ.ಕ.ಜಿಲ್ಲೆಯು ಅತ್ಯಂತ ಎಚ್ಚರಿಕೆಯಿಂದ ಕೆಲಸ ಮಾಡುತ್ತಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ನಿನ್ನೆ ಹೇಳಿದ್ದಾರೆ.

ಕೋವಿಡ್ ನಿಯಂತ್ರಣ ಮಾಡುವ ವಿಚಾರದಲ್ಲಿ ಜಿಲ್ಲಾಡಳಿತ ಅತ್ಯಂತ ಸಫಲವಾಗಿದೆ. ಬಡವ, ಶ್ರೀಮಂತರೆನ್ನದೆ ಖಾಸಗಿ ಆಸ್ಪತ್ರೆಗಳಲ್ಲಿ ಕೂಡಾ ಉಚಿತ ಚಿಕಿತ್ಸೆ ನೀಡುತ್ತಿದೆ. ಆದರೆ, ಅನಿವಾರ್ಯವಾಗಿ ಕಾಂಗ್ರೆಸ್ ಟೀಕೆ ಮಾಡಲು ಆರಂಭಿಸಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.