ETV Bharat / city

ಜನರ ಜೊತೆ ವಾಗ್ವಾದಕ್ಕಿಂತ ತಿಳಿವಳಿಕೆ ಮೂಡಿಸುವ ಕೆಲಸ ಅಧಿಕಾರಿಗಳಿಂದ ಆಗಬೇಕು: ಸಚಿವ ನಾರಾಯಣಗೌಡ

author img

By

Published : Apr 23, 2021, 11:00 PM IST

ವೀಕೆಂಡ್ ಲಾಕ್ ಡೌನ್ ಸಂದರ್ಭದಲ್ಲಿ ಸಾರ್ವಜನಿಕರೊಂದಿಗೆ ಪೊಲೀಸರು ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು. ಆಸ್ಪತ್ರೆಗಳಲ್ಲಿಯೂ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಸೂಚನೆ ನೀಡಿದರು.

minister narayanagouda meeting with mandya officials

ಬೆಂಗಳೂರು : ಸಾರ್ವಜನಿಕರೊದಿಗೆ ವಾಗ್ವಾದ ಮಾಡುವುದಕ್ಕಿಂತ ತಿಳಿವಳಿಕೆ ಮೂಡಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಕೋವಿಡ್ ವಾರಿಯರ್ಸ್ ಸೌಹಾರ್ಧಯುತವಾಗಿ ನಡೆದುಕೊಳ್ಳಬೇಕು. ಎಲ್ಲಕ್ಕಿಂತ ಪ್ರಮುಖವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ಕ್ರೀಡಾ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹೇಳಿದ್ದಾರೆ.

ಕೊರೊನಾ ನಿಯಂತ್ರಣ ಸಂಬಂಧ ಮಂಡ್ಯ ಜಿಲ್ಲೆಯ ಮತ್ತು ತಾಲೂಕು ಅಧಿಕಾರಿಗಳ ಜೊತೆ ವಿಕಾಸಸೌಧದಿಂದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಚಿವರು, ಆಕ್ಸಿಜನ್ ವ್ಯವಸ್ಥೆ ಇರುವ ಆಂಬ್ಯುಲೆನ್ಸ್ ಪ್ರತಿ ತಾಲೂಕಿನಲ್ಲೂ ಲಭ್ಯವಿರಬೇಕು. ಕೊರೊನಾ ಟೆಸ್ಟಿಂಗ್ ಮಾಡಿಸಿದವರು ಫಲಿತಾಂಶ ಬರುವ ತನಕ ಕ್ವಾರಂಟೈನ್ ಆಗಿರುವಂತೆ ನೋಡಿಕೊಳ್ಳಬೇಕು. ಅಲ್ಲದೇ ಆಸ್ಪತ್ರೆಗಳಿಗೆ ಅಗತ್ಯವಿರುವ ವಸ್ತುಗಳನ್ನು ಎರಡು ದಿನಗಳಲ್ಲಿ ಖರೀದಿಸಬೇಕು ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಶ್ರಮವಹಿಸಿ, ಪ್ರತಿ ತಾಲೂಕಿನಲ್ಲೂ ಚಿಕಿತ್ಸೆಗೆ ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಿ. ಯಾವುದೇ ಪರಿಸ್ಥಿತಿಯಲ್ಲೂ ಜಿಲ್ಲೆಯಲ್ಲಿ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಜನರ ಜೊತೆ ಪೊಲೀಸರು ಸೌಹಾರ್ದಯುತವಾಗಿ ನಡೆದುಕೊಳ್ಳಿ: ವೀಕೆಂಡ್ ಲಾಕ್ ಡೌನ್ ಸಂದರ್ಭದಲ್ಲಿ ಸಾರ್ವಜನಿಕರೊಂದಿಗೆ ಪೊಲೀಸರು ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು. ಆಸ್ಪತ್ರೆಗಳಲ್ಲಿಯೂ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ನೋಡಿಕೊಳ್ಳಬೇಕು. ಎಲ್ಲ ತಾಲೂಕು ಆಸ್ಪತ್ರೆಯಲ್ಲಿ ಹಾಗೂ ಹಾಸ್ಟೆಲ್​​​​ಗಳಲ್ಲಿ ಚಿಕಿತ್ಸೆಗೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಳ್ಳಿ ಎಂದು ಸಚಿವರು ಸೂಚನೆ ನೀಡಿದರು.

ಹೆಚ್ಚುವರಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿ : ಜಿಲ್ಲಾ ಕೇಂದ್ರ ಮಂಡ್ಯದಲ್ಲಿ ಹೆಚ್ಚುವರಿಯಾಗಿ ಎರಡು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು. ಅಲ್ಲದೇ ಪ್ರತಿ ತಾಲೂಕು ಕೇಂದ್ರದಲ್ಲೂ ಎರಡಕ್ಕಿಂತ ಹೆಚ್ಚು ಸುಸಜ್ಜಿತ ಆ್ಯಂಬುಲೆನ್ಸ್ ವ್ಯವಸ್ಥೆ ಇರಬೇಕು. ಜಿಲ್ಲೆಯಲ್ಲಿ ಪಿಪಿಇ ಕಿಟ್, ಗ್ಲೌಸ್, ಸ್ಯಾನಿಟೈಸರ್ ಸೇರಿದಂತೆ ಯಾವುದು ಕೂಡ ಕೊರತೆ ಆಗಬಾರದು. ಸ್ಟೆಪ್ ಅಪ್ ಆಸ್ಪತ್ರೆಗಳು, ಸಂಪೂರ್ಣ ವ್ಯವಸ್ಥೆಯೊಂದಿಗೆ ಎರಡು ದಿನಗಳಲ್ಲಿ ಸಿದ್ದವಾಗಿರಬೇಕು ಎಂದು ಸಚಿವರು ಹೇಳಿದರು.

ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಂಗಡಿಗಳನ್ನು ಮುಚ್ಚಿಸಿ: ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸುವಾಗ ಸ್ನೇಹಪೂರ್ವಕವಾಗಿ , ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಂಗಡಿಗಳನ್ನು ಮುಚ್ಚಿಸಿ ಎಂದು ಪೊಲೀಸರಿಗೆ ಸಲಹೆ ಮಾಡಿದರು.

ಆಟೋ ಮೂಲಕ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ: ಗ್ರಾಮಪಂಚಾಯಿತಿಯ ಪಿ.ಡಿ.ಒ, ಅಧ್ಯಕ್ಷರು, ಉಪಾಧ್ಯಕ್ಷರು, ಅಲ್ಲಿನ ಅಧಿಕಾರಿಗಳು ಜವಾಬ್ದಾರಿವಹಿಸಿಕೊಂಡು ಕೊರೊನಾ ನಿಯಂತ್ರಣಕ್ಕೆ ಕ್ರಮವಹಿಸಲು ಗ್ರಾಮ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿ ಎಂದು ಜಿಲ್ಲಾ ಪಂಚಾಯತ್ ನ ಸಿ.ಇ.ಒ ಗೆ ಸೂಚಿಸಿದ ಸಚಿವರು, ಗ್ರಾಮ ಮಟ್ಟದಲ್ಲಿ ಆಟೋ ಪ್ರಚಾರದ ಮೂಲಕ ಜನಜಾಗೃತಿ ಮೂಡಿಸಿ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.