ETV Bharat / city

ಪಲ್ಸ್ ಪೋಲಿಯೋ ಮಾದರಿಯಲ್ಲಿ ಜಾನುವಾರುಗಳ ಕಾಲುಬಾಯಿ ರೋಗಕ್ಕೆ ಲಸಿಕೆ: ಸಚಿವ ಪ್ರಭು ಚವ್ಹಾಣ್

ಕಾಲುಬಾಯಿ ರೋಗದಿಂದ ರಾಜ್ಯದಲ್ಲಿ 57 ರಾಸುಗಳು ಇಲ್ಲಿಯವರೆಗೆ ಮೃತಪಟ್ಟಿದ್ದು, 4,066 ಜಾನುವಾರುಗಳು ಚಿಕಿತ್ಸೆಯಿಂದ ಗುಣಮುಖವಾಗಿವೆ ಎಂದು ಸಚಿವ ಚವ್ಹಾಣ್ ತಿಳಿಸಿದ್ದಾರೆ.

minister-prabhu-chavan-on-foot-and-mouth-disease
ಪಲ್ಸ್ ಪೋಲಿಯೋ ಮಾದರಿಯಲ್ಲಿ ಜಾನುವಾರುಗಳ ಕಾಲುಬಾಯಿ ರೋಗಕ್ಕೆ ಲಸಿಕೆ: ಸಚಿವ ಪ್ರಭು ಚವ್ಹಾಣ್
author img

By

Published : Sep 24, 2021, 3:19 AM IST

ಬೆಂಗಳೂರು: ಕರ್ನಾಟಕದಲ್ಲಿ ಪಲ್ಸ್ ಪೋಲಿಯೋ ಮಾದರಿಯಲ್ಲಿ ಜಾನುವಾರುಗಳ ಕಾಲುಬಾಯಿ ರೋಗಕ್ಕೆ ವ್ಯವಸ್ಥಿತ ಲಸಿಕಾ ಅಭಿಯಾನ ನಡೆಸಲಾಗುವುದು ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ 78 ತಾಲೂಕುಗಳ 419 ಹಳ್ಳಿಗಳಲ್ಲಿ ಕಾಲು ಬಾಯಿ ರೋಗ 4,475 ಜಾನುವಾರುಗಳಲ್ಲಿ ಕಂಡುಬಂದಿದೆ. ಉಳಿದ ಜಾನುವಾರುಗಳು ಚಿಕಿತ್ಸೆಯಿಂದ ಗುಣಮುಖ ಆಗಿವೆ. ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ರೋಗ ಕಂಡುಬಂದ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ತೀವ್ರ ನಿಗಾ ವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ 57 ರಾಸುಗಳು ಇಲ್ಲಿಯವರೆಗೆ ಮೃತಪಟ್ಟಿದ್ದು, 4,066 ಜಾನುವಾರುಗಳು ಚಿಕಿತ್ಸೆಯಿಂದ ಗುಣಮುಖವಾಗಿವೆ ಎಂದು ಸಚಿವ ಚವ್ಹಾಣ್ ತಿಳಿಸಿದ್ದಾರೆ.

ಆದ್ಯತೆಯ ಮೇಲೆ ರೋಗ ನಿಯಂತ್ರಣಕ್ಕೆ ಶ್ರಮವಹಿಸಿ: ಕಾಲುಬಾಯಿ ರೋಗ ಕಂಡುಬಂದ 5 ಕಿ.ಮೀ ವ್ಯಾಪ್ತಿಯಲ್ಲಿ ರಿಂಗ್ ವ್ಯಾಕ್ಸಿನ್ ನಡೆಸಲಾಗುತ್ತಿದೆ. ಸದ್ಯ 4 ಲಕ್ಷಕ್ಕೂ ಹೆಚ್ಚು ಜಾನುವಾರುಗಳಿಗೆ ಲಸಿಕೆಯನ್ನು ನೀಡಲಾಗಿದೆ. ಇಲಾಖೆಯ ಉಪನಿರ್ದೇಶಕರು, ಸಹಾಯಕ ನಿರ್ದೇಶಕರು ರೋಗ ನಿಯಂತ್ರಣಕ್ಕೆ ಶ್ರಮವಹಿಸಲು ಸಚಿವರು ತಿಳಿಸಿದ್ದಾರೆ.

ಅಧಿಕಾರಿಗಳಿಗೆ ಎಚ್ಚರಿಕೆ: ಪಶು ವೈದ್ಯಾಧಿಕಾರಿಗಳು ಕಾಲುಬಾಯಿ ರೋಗವನ್ನು ಇಲಾಖೆಯ ಸಭೆ ನಡೆಸಿ ರೋಗ ಉಲ್ಬಣಗೊಳ್ಳದಂತೆ ನೋಡಿಕೊಳ್ಳಲು ಕಟ್ಟುನಿಟ್ಟಿನ ಸೂಚನೆ ಈಗಾಗಲೇ ನೀಡಲಾಗಿದೆ. ರೈತರ ಜೀವನಾಧಾರವಾಗಿರುವ ರಾಸುಗಳ ಆರೋಗ್ಯಕ್ಕೆ ಯಾವುದೇ ಸಂದರ್ಭಗಳಲ್ಲಿ ವೈದ್ಯರು ಸನ್ನದ್ಧರಿದ್ದು ಆದ್ಯತೆ ಮೇಲೆ ಚಿಕಿತ್ಸೆ ನೀಡಲು ತಿಳಿಸಲಾಗಿದೆ.

ಚಿಕಿತ್ಸೆ ನೀಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚವ್ಹಾಣ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.