ETV Bharat / city

ರಾಜ್ಯದಲ್ಲಿಯೂ ಪರಿಣಾಮಕಾರಿಯಾಗಿ ಗೋಹತ್ಯೆ ನಿಷೇಧ ಜಾರಿ : ಸಚಿವ ಪ್ರಭು ಚೌಹಾಣ್

ನಾನು ಪಕ್ಷದ ಶಿಸ್ತಿನ ಸಿಪಾಯಿ ಆಗಿ ಕೆಲಸ ಮಾಡುತ್ತಿದ್ದೇನೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ ಎಂದು ಸ್ಪಷ್ಟಪಡಿಸಿದರು. ನಾನು ಇದೇ ಇಲಾಖೆಯಲ್ಲೇ ಇರಬೇಕೆಂಬ ಆಸೆ. ನನಗೆ ಬೇರೆ ಇಲಾಖೆಗಳು ಬೇಕಿಲ್ಲ. ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ಧನಿದ್ದೇನೆ. ಪ್ರತಿವರ್ಷ 2 ಲಕ್ಷ ಗೋ ರಕ್ಷಣೆ ಮಾಡಬೇಕು, ಇನ್ನು ಎರಡು ವರ್ಷ ಇದೇ ಇಲಾಖೆಯಲ್ಲಿ ಇರುತ್ತೇನೆ..

minister-prabhu-chwahan-talk
ಸಚಿವ ಪ್ರಭು ಚವ್ಹಾಣ್
author img

By

Published : Jun 22, 2021, 9:06 PM IST

ಬೆಂಗಳೂರು : ರಾಜ್ಯದಲ್ಲಿಯೂ ಪರಿಣಾಮಕಾರಿ ಗೋಹತ್ಯೆ ನಿಷೇಧ ಜಾರಿ ಮಾಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ತಿಳಿಸಿದರು. ವಿಕಾಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಗೋವುಗಳ ಸಂರಕ್ಷಣೆಗೆ ಕಾಯ್ದೆ ಸಹಕಾರಿಯಾಗಿದೆ. 2020-21ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಆದಂತೆ ಪ್ರತಿ ಜಿಲ್ಲೆಗೆ ಒಂದು ಗೋಶಾಲೆ ತೆರೆಯಲು ಕ್ರಮ ವಹಿಸಲಾಗುತ್ತಿದೆ. ಈಗಾಗಲೇ, 22 ಜಿಲ್ಲೆಗಳಲ್ಲಿ ಗೋಶಾಲೆಗೆ ಸ್ಥಳ ಗುರುತಿಸಲಾಗಿದೆ. ಸಂರಕ್ಷಿಸಿದ ಗೋವುಗಳ ರಕ್ಷಣೆಗೆ ಗೋಶಾಲೆ ಮಾಡಲಾಗುತ್ತಿದೆ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.

ಓದಿ: ಡಕಾಯಿತಿ ಆರೋಪ ಪ್ರಕರಣ: ಮೂವರು ನೇಪಾಳಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ರಾಜ್ಯದಲ್ಲಿ 188 ಖಾಸಗಿ ಗೋಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಒಟ್ಟು 49,629 ಗೋವುಗಳ ರಕ್ಷಣೆ ಆಗಿರುತ್ತದೆ. ಪಿಂಜರಾಪೋಲ್ ಮತ್ತು ಇತರ ಗೋಶಾಲೆ ಅನುದಾನದ ಅಡಿಯಲ್ಲಿ ಸಹಾಯಧನ ನೀಡಲಾಗುತ್ತಿದೆ ಎಂದರು.

ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಮಾತನಾಡಿರುವುದು..

ಪ್ರಾಣಿ ಕಲ್ಯಾಣ ಸಹಾಯವಾಣಿ (ವಾರ್‌ರೂಂ) ಚಾಲನೆ: ಪಶುಸಂಗೋಪನೆ ಇಲಾಖೆ ರೈತರಿಗೆ ಜಾನುವಾರು ಸಾಕಾಣೆದಾರರಿಗೆ ಉತ್ಪಾದಕತೆ ಹೆಚ್ಚಿಸಲು ಹಾಗೂ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ರೈತರಿಗೆ ಮತ್ತಷ್ಟು ಹತ್ತಿರವಾಗಲು ಪ್ರಾಣಿ ಕಲ್ಯಾಣ ಸಹಾಯವಾಣಿಗೆ(ವಾರ್‌ರೂಂ) ಚಾಲನೆ‌ ನೀಡಲಾಗುವುದು ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.

ಇಂದು ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಕಲ್ಯಾಣಕ್ಕಾಗಿ ಪಶುಸಂಗೋಪನೆ ಇಲಾಖೆ ಸಾಕಷ್ಟು ಶ್ರಮವಹಿಸುತ್ತಿದೆ ಎಂದು ಹೇಳಿದರು. ನಾಳೆ ಪಶು ಸಂಗೋಪನೆ ಇಲಾಖೆಯ ಬಹು ನಿರೀಕ್ಷಿತ ಪ್ರಾಣಿ ಕಲ್ಯಾಣ ಸಹಾಯವಾಣಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಹೈನೋದ್ಯಮಕ್ಕೆ ಪ್ರಾಣಿ ಕಲ್ಯಾಣ ಸಹಾಯವಾಣಿ ಸಾಕಷ್ಟು ಸಹಕಾರಿಯಾಗಲಿದೆ. ವಾರ್‌ ರೂಂ ಮೂಲಕ ರೈತರು, ಜಾನುವಾರು ಸಾಕಣೆದಾರರು ಎಲ್ಲ ಅಗತ್ಯ ಮಾಹಿತಿ ಪಡೆಯಬಹುದಾಗಿದೆ ಎಂದರು.

ಪ್ರಾಣಿ ಕಲ್ಯಾಣ ಸಹಾಯವಾಣಿ (ವಾರ್‌ರೂಂ) ದಿನದ 24 ಗಂಟೆ ಕಾರ್ಯನಿರ್ವಹಿಸುತ್ತದೆ. ಕರೆ ಮಾಡಿದ ಕೆಲವೇ ಗಂಟೆಗಳಲ್ಲಿ ಕ್ರಮವಹಿಸಲಾಗುತ್ತದೆ. ಜಾನುವಾರು ಸಾಕಣೆದಾರರು, ರೈತರಿಗೆ ಅನುಕೂಲವಾಗುತ್ತದೆ. ಸ್ವಂತ ಉದ್ಯೋಗಕ್ಕೆ ಬೇಕಾದ ಎಲ್ಲ ಮಾಹಿತಿ ದೊರೆಯುತ್ತದೆ. ಆರೋಗ್ಯ, ಲಸಿಕೆ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ವಿವರಿಸಿದರು.

ಹೈಕಮಾಂಡ್ ನಿರ್ಧಾರಕ್ಕೆ ಬದ್ಧ : ಸಂಪುಟ ಪುನಾರಚನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಪಕ್ಷದ ಶಿಸ್ತಿನ ಸಿಪಾಯಿ ಆಗಿ ಕೆಲಸ ಮಾಡುತ್ತಿದ್ದೇನೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ ಎಂದು ಸ್ಪಷ್ಟಪಡಿಸಿದರು. ನಾನು ಇದೇ ಇಲಾಖೆಯಲ್ಲೇ ಇರಬೇಕೆಂಬ ಆಸೆ. ನನಗೆ ಬೇರೆ ಇಲಾಖೆಗಳು ಬೇಕಿಲ್ಲ. ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ಧನಿದ್ದೇನೆ. ಪ್ರತಿವರ್ಷ 2 ಲಕ್ಷ ಗೋ ರಕ್ಷಣೆ ಮಾಡಬೇಕು, ಇನ್ನು ಎರಡು ವರ್ಷ ಇದೇ ಇಲಾಖೆಯಲ್ಲಿ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.

ಪಶು ವೈದ್ಯರ ಕೊರತೆ : ಪಶುಸಂಗೋಪನೆ ಇಲಾಖೆಯಲ್ಲಿ ವೈದ್ಯರ ಕೊರತೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, 1200 ಮಂದಿ ಪಶು ವೈದ್ಯರ ಅವಶ್ಯಕತೆ ಇದೆ ಎಂದು ತಿಳಿಸಿದರು. 300 ಮಂದಿಯ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆರ್ಥಿಕ ಇಲಾಖೆಯಿಂದ ಗ್ರೀನ್ ಸಿಗ್ನಲ್ ಸಿಕ್ಕ ಕೂಡಲೇ ನೇಮಕಾತಿ ಮಾಡುತ್ತೇವೆ ಅಂತಾ ಪ್ರಭು ಚೌಹಾಣ್ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.