ETV Bharat / city

ರೈತರ ಪರವಾಗಿ ಕೆಲಸ ಮಾಡುವುದಕ್ಕೆ ನಾನು ಸಿದ್ಧ : ಸಚಿವ ಆರ್. ಶಂಕರ್ - Minister R. Shankar

ರೈತರು ಕೈಗೊಂಡಿರುವ ಹೋರಾಟವನ್ನು ಕೈ ಬಿಡಬೇಕು. ಹೋರಾಟಕ್ಕೆ ನಾವು ಬೆಂಬಲ ಕೊಡುವುದಿಲ್ಲ. ಯಾರದ್ದೋ ಮಾತು ಕೇಳಿ ಪ್ರತಿಭಟನೆ ಮಾಡೋದು ಸರಿಯಲ್ಲ. ರೈತರ ಪರ ಕೆಲಸ ಮಾಡುವುದಕ್ಕೆ ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಬದ್ಧವಾಗಿದೆ ಎಂದು ಸಚಿವ ಆರ್. ಶಂಕರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಆರ್. ಶಂಕರ್
ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಆರ್. ಶಂಕರ್
author img

By

Published : Jan 25, 2021, 1:50 PM IST

ಬೆಂಗಳೂರು : ರೈತರ ಸಮಸ್ಯೆ ಪರಿಹಾರಕ್ಕೆ ನಾನು ಮತ್ತು ಕೃಷಿ ಸಚಿವರು ಒಟ್ಟಾಗಿ ಕೆಲಸ ಮಾಡುತ್ತೇವೆ. ರೈತರ ಪರವಾಗಿ ಕೆಲಸ ಮಾಡುವುದಕ್ಕೆ ನಾವು ಸಿದ್ಧ ಎಂದು ನೂತನ ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಆರ್. ಶಂಕರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಆರ್. ಶಂಕರ್

ವಿಧಾನಸೌಧದ ಮೂರನೇ ಮಹಡಿಯಲ್ಲಿ ಇಂದು ಕಚೇರಿ ಪೂಜೆ ನೆರವೇರಿಸಿ, ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರು ಕೈಗೊಂಡಿರುವ ಹೋರಾಟವನ್ನು ಕೈಬಿಡಬೇಕು. ಹೋರಾಟಕ್ಕೆ ನಾವು ಬೆಂಬಲ ಕೊಡುವುದಿಲ್ಲ. ಯಾರದ್ದೋ ಮಾತು ಕೇಳಿ ಪ್ರತಿಭಟನೆ ಮಾಡೋದು ಸರಿಯಲ್ಲ. ರೈತರ ಪರ ಕೆಲಸ ಮಾಡೋಕೆ ನಮ್ಮ ಇಲಾಖೆ ಇದೆ ಎಂದರು.

ಬಿಜೆಪಿ ಸರ್ಕಾರದಲ್ಲಿ ತೋಟಗಾರಿಕೆ ಮತ್ತು ರೇಷ್ಮೆ ಸಚಿವನಾಗಿ ಅಧಿಕಾರ ಸ್ವೀಕರಿಸಿದ ಮೇಲೆ ಇಂದು ಸಭೆ ಮಾಡಿದ್ದೇನೆ. ತೋಟಗಾರಿಕೆ ಅವಲಂಬಿತ ರೈತರ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ರೈತರು ಮತ್ತು ಸರ್ಕಾರದ ಮಧ್ಯೆ ಉತ್ತಮ ಬಾಂಧವ್ಯ ಇಟ್ಟುಕೊಂಡು ಇಲಾಖೆ ಕೆಲಸ ಮಾಡುತ್ತದೆ. ಬೆಳೆಗಳ ಮಾರಾಟ, ಸಂಗ್ರಹಣೆ, ಸೇರಿದಂತೆ ಎಲ್ಲಾ ವಿಚಾರವಾಗಿ ಸಭೆ ಮಾಡಿದ್ದೇನೆ. ರೇಷ್ಮೆ ಇಲಾಖೆ ಅಧಿಕಾರಿಗಳ ಜೊತೆಯೂ ಸಭೆ ಮಾಡಿದ್ದೇನೆ. ರೇಷ್ಮೆ ಬೆಳೆಗಾರರ ಸಂಕಷ್ಟ, ಅವರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ. ಕೃಷಿ ದೇವೋಭವ ಆಗುವಂತೆ ನಾವು ಕೆಲಸ ಮಾಡಬೇಕು ಎಂದು ಹೇಳಿದರು.

ರೈತರ ಜೀವದ ಜೊತೆ ಚೆಲ್ಲಾಟ ಆಡದೇ ರೈತರ ಪರ ಅಭಿವೃದ್ಧಿ ಕೆಲಸ ಮಾಡುತ್ತೇವೆ. ಇಲಾಖೆಗೆ ಬೇಕಾದ ಯೋಜನೆಗೆ ಅನುದಾನ ಕೊಡುವಂತೆ ಸಿಎಂಗೆ ಮನವಿ ಮಾಡುತ್ತೇನೆ. ರೈತರ ಆದಾಯ ದ್ವಿಗುಣ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ. ಕೇಂದ್ರದ ಜೊತೆಯೂ ಸಂಪರ್ಕದಲ್ಲಿದ್ದು, ಅಭಿವೃದ್ಧಿಗೆ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ರೈತರ ಆತ್ಮಹತ್ಯೆಗೆ ಕಾರಣ ಏನೆಂಬುದರ ಕುರಿತು ತಿಳಿದು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡುತ್ತೇವೆ ಎಂದ ಸಚಿವರು, ಕೊರೊನಾ ಹಿನ್ನೆಲೆಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್​ಗಳು ತೋಟಗಾರಿಕೆ ಕಡೆ ಮುಖ ಮಾಡಿದ್ದಾರೆ. ಇದಕ್ಕೆ ಉತ್ತೇಜನ ನೀಡುವ ಕೆಲಸ ಸರ್ಕಾರ ಮಾಡುತ್ತದೆ ಎಂದರು.

ಹಿರಿಯ ಮುಖಂಡ ಹೆಚ್. ವಿಶ್ವನಾಥ್ ಏಕಾಂಗಿಯಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ನನ್ನ ಬಗ್ಗೆ ಬಿಟ್ಟು ಇನ್ಯಾರ ಬಗ್ಗೆಯೂ ಹಿಂದೆ ಮಾತನಾಡಿಲ್ಲ. ಮುಂದೆಯೂ ಮಾತನಾಡುವುದಿಲ್ಲ.

ವಿಶ್ವನಾಥ್ ಅವರು ನನ್ನ ರಾಜಕೀಯ ಗುರುಗಳು. ಅವರ ಮೇಲೆ ಗೌರವ ಇದೆ. ಮುಂದಿನ ದಿನಗಳಲ್ಲಿ ಅವರಿಗೂ ಒಳ್ಳೆಯದಾಗುತ್ತದೆ. ಮುಂಬೈ ಟೀಂನಲ್ಲಿ ಮೊದಲು ಸೇರಿಕೊಂಡವನು ನಾನು ಮತ್ತು ರಮೇಶ್ ಜಾರಕಿಹೋಳಿ. ನಾವೆಲ್ಲಾ ಒಟ್ಟಾಗಿ ಇದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾನು ಸಿಎಂ ಬಳಿ ಹೋಗಿ ಜನರ ಮಧ್ಯೆ ಕೆಲಸ ಮಾಡುವ ಖಾತೆ ಕೊಡಿ ಅಂತ ಕೇಳಿದ್ದೆ. ಖಾತೆ ಬದಲಾವಣೆ ಮಾಡಿದ್ದು ಸರಿಯಲ್ಲ ಅಂತ ಕೇಳಿದೆ. ಸಿಎಂ ಸಮಾಧಾನದಿಂದ‌ ಕೆಲ ದಿನಗಳ ಕಾಲ ಮಾಡು ಅಂತ ಹೇಳಿದ್ದಾರೆ. ಜೊತೆಗೆ ಹಾವೇರಿ ಉಸ್ತುವಾರಿ ಕೊಡುವುದಾಗಿ ಹೇಳಿದ್ದಾರೆ. ಈಗ ನನಗೆ ಯಾವುದೇ ಅಸಮಾಧಾನವಿಲ್ಲ. ಕೊಟ್ಟಿರುವ ಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.