ಬೆಂಗಳೂರು : ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಸಿ ವರ್ಗದ ದೇವಾಲಯಗಳಲ್ಲಿ ಪ್ರಸ್ತುತ ವಾರ್ಷಿಕ 48 ಸಾವಿರ ರೂಪಾಯಿಗಳ ತಸ್ಥೀಕ್ ಹಣವನ್ನು 60 ಸಾವಿರ ರೂಪಾಯಿಗಳಿಗೆ ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ತಸ್ಥೀಕ್ ಹಣ ಹೆಚ್ಚಿಸುವಂತೆ ಹಲವು ವರ್ಷಗಳಿಂದ ದೇವಸ್ಥಾನಗಳ ಅರ್ಚಕರು ಹಲವಾರು ಮನವಿಯನ್ವಯ ಆದೇಶ ನೀಡಲಾಗಿದೆ.
ದಿನ ಬಳಕೆಯ ವಸ್ತುಗಳ ಬೆಲೆ ಗಣನೀಯವಾಗಿ ಹೆಚ್ಚಿರುವ ಹಿನ್ನೆಲೆಯಲ್ಲಿ ಪೂಜಾ ಕೈಂಕರ್ಯಗಳ ನಿರ್ವಹಣೆಗಾಗಿ ತಸ್ಥೀಕ್ ಮೊತ್ತವನ್ನು ಹೆಚ್ಚಿಸುವ ಭರವಸೆ ನೀಡಲಾಗಿತ್ತು. ಏಪ್ರಿಲ್ 11ರಂದು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಈ ಆರ್ಥಿಕ ವರ್ಷದಿಂದಲೇ ಹೆಚ್ಚಳ ಅನ್ವಯವಾಗುವಂತೆ ಆದೇಶ ನೀಡಲಾಗಿದೆ.
![Order to increase the amount of Tastik to Rs 60 thousand](https://etvbharatimages.akamaized.net/etvbharat/prod-images/kn-bng-04-government-order-script-7208077_13042022175742_1304f_1649852862_339.jpg)
ಅರ್ಚಕರ ಬಹುದಿನಗಳ ಬೇಡಿಕೆ ಇಂದು ಈಡೇರಿದೆ. ಬಹಳಷ್ಟು ಜನ ಅರ್ಚಕರ ಪರಿಸ್ಥಿತಿಯನ್ನು ನೋಡಿ ಮುಖ್ಯಮಂತ್ರಿಗಳಿಗೆ ಮನವಿಯನ್ನು ಮಾಡಿಕೊಳ್ಳಲಾಗಿತ್ತು. ಇದಕ್ಕೆ ಸೂಕ್ತವಾಗಿ ಸ್ಪಂದಿಸಿದ್ದು, ಸಂತಸದ ವಿಷಯ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ. ಪ್ರಸಕ್ತ ಸಾಲಿನಿಂದಲೇ ಇದು ಜಾರಿಯಾಗಲಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಇದನ್ನೂ ಓದಿ: ಸಪ್ತಪದಿ ಯೋಜನೆ ಮರುಚಾಲನೆಗೆ ಆದೇಶ ನೀಡಿದ ಸಚಿವೆ ಶಶಿಕಲಾ ಜೊಲ್ಲೆ