ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಂಗಳವಾರ ಸಂಜೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದರು.
ಭೇಟಿ ವೇಳೆ ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ, ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು, ನವರಾತ್ರಿ ದಸರಾ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿದರು.
ಜೊತೆಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಬೆಳ್ಳಿ -ಹಬ್ಬದ ವರ್ಷದಲ್ಲಿ ರೂಪಿಸಿರುವ ಕಾರ್ಯಕ್ರಮಗಳು ಹಾಗೂ ಇತರ ವಿಷಯಗಳ ಬಗ್ಗೆ ಚರ್ಚಿಸಿದರು.