ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೋವಿಡ್ ಲಸಿಕೆ ಕೊರತೆ ಉಂಟಾಗುತ್ತಿದೆ. ಜನರು ಲಸಿಕಾ ಕೇಂದ್ರಕ್ಕೆ ಬಂದು ವಾಪಸ್ ಹೋಗುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಸೋಮವಾರ ಅಥವಾ ಮಂಗಳವಾರ ದೆಹಲಿಗೆ ಹೋಗುತ್ತಿದ್ದೇನೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತೇನೆ. ಹೆಚ್ಚಿನ ಲಸಿಕೆಗೆ ಬೇಡಿಕೆ ಇಡಲಾಗುವುದು ಎಂದರು.
ಕೋವಿಡ್ ಹೆಚ್ಚಿರುವ ಜಿಲ್ಲೆಗಳಿಗೆ ಭೇಟಿ : ಇಂದು ರಾಜ್ಯದ ಮೂರು ಜಿಲ್ಲೆಗಳಿಗೆ ಆರೋಗ್ಯ ಸಚಿವ ಸುಧಾಕರ್ ಪ್ರವಾಸ ಕೈಗೊಂಡಿದ್ದಾರೆ. ಮೈಸೂರು, ಕೊಡಗು, ದಕ್ಷಿಣ ಕನ್ನಡದಲ್ಲಿ ಕೋವಿಡ್ ಪಾಸಿಟಿವಿಟಿ ದರ ಜಾಸ್ತಿ ಇದ್ದು, ಸಾವಿನ ಸಂಖ್ಯೆಯೂ ಹೆಚ್ಚಿದೆ. ಈ ಸಂಬಂಧ ಮೈಸೂರಿನಲ್ಲಿ ಸಚಿವರು ಸಭೆ ನಡೆಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟದ ಉದ್ಘಾಟನೆ ಮಾಡಲಿದ್ದಾರೆ.
'ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ ನನಗೆ ಗೊತ್ತಿಲ್ಲ'
ರಾಜ್ಯ ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ಗೊಂದಲದ ಬಗ್ಗೆ ಮಾತನಾಡಿದ ಸಚಿವ ಸುಧಾಕರ್, ಅದು ಕಾಂಗ್ರೆಸ್ನವರ ಆಂತರಿಕ ವಿಷಯ. ಆ ಬಗ್ಗೆ ನನಗೇನೂ ಗೊತ್ತಿಲ್ಲ. ಸಾಮಾನ್ಯವಾಗಿ ಕೆಪಿಸಿಸಿ ಅಧ್ಯಕ್ಷರು ಅಥವಾ ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿ ಆಗ್ತಾರೆ. ಈ ಪದ್ದತಿಯೇ ಹಿಂದಿನಿಂದ ನಡೆದುಕೊಂಡು ಬಂದಿರುವುದು ಎಂದರು.
ಎಸ್ಸೆಸ್ಸೆಲ್ಸಿ ಪರೀಕ್ಷಾ ವಿಚಾರ:
ನಿನ್ನೆ ಎಸ್ಸೆಸ್ಸೆಲ್ಸಿ ಪರೀಕ್ಷಾ ದಿನಾಂಕ ಘೋಷಣೆಯಾದಾಗ ನಾನು ಬೇರೆ ಸಭೆಯಲ್ಲಿದ್ದೆ. ನನ್ನ ಸಭೆ ಬಳಿಕ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ತಮ್ಮ ನಿರ್ಧಾರದ ಬಗ್ಗೆ ಮಾಹಿತಿ ನೀಡಿದ್ದಾರೆ. ಸಿಎಂ ಜೊತೆ ಮಾತನಾಡಿದ್ದೇನೆ ಎಂದಿದ್ದಾರೆ. ತಾಂತ್ರಿಕ ಸಲಹಾ ಸಮಿತಿಯವರ ಜೊತೆ ಚರ್ಚೆ ಮಾಡಿರಬಹುದು ಅನಿಸುತ್ತದೆ. ತಜ್ಞರು ಮತ್ತು ಮಂತ್ರಿಗಳು ಮಾತನಾಡಿದ್ದಾರೆ. ಸಿಎಂ ಅದನ್ನು ಒಪ್ಪಿದ್ದಾರೆ. ನನಗೆ ಆ ಬಗ್ಗೆ ಗೊತ್ತಿಲ್ಲ ಎಂದು ಹೇಳಿ ಜಾರಿಕೊಂಡರು.
-
ಶಿಕ್ಷಣ ಸಚಿವ @nimmasuresh ರವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, SSLC ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ.
— CM of Karnataka (@CMofKarnataka) June 29, 2021 " class="align-text-top noRightClick twitterSection" data="
">ಶಿಕ್ಷಣ ಸಚಿವ @nimmasuresh ರವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, SSLC ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ.
— CM of Karnataka (@CMofKarnataka) June 29, 2021ಶಿಕ್ಷಣ ಸಚಿವ @nimmasuresh ರವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, SSLC ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ.
— CM of Karnataka (@CMofKarnataka) June 29, 2021
ಇದೇ ವಿಷಯದ ಟ್ವೀಟ್ ಮಾಡಿರುವ ಸಿಎಂ ಬಿಎಸ್ವೈ, ಶಿಕ್ಷಣ ಸಚಿವರು ನನ್ನೊಂದಿಗೆ ಚರ್ಚಿಸಿಯೇ ಪರೀಕ್ಷಾ ದಿನಾಂಕ ನಿಗದಿಪಡಿಸಿದ್ದಾರೆ. ಈ ಬಗ್ಗೆ ಸಮಗ್ರ ಚರ್ಚೆ ನಡೆಸಿಯೇ ತೀರ್ಮಾನ ತೆಗೆದುಕೊಳ್ಳಲಾಗಿದೆ. ಯಾವುದೇ ಏಕಪಕ್ಷಿಯ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ನನ್ನೊಂದಿಗೆ ಚರ್ಚಿಸಿಯೇ ಎಸ್ಎಸ್ಎಲ್ಸಿ ಪರೀಕ್ಷಾ ದಿನಾಂಕ ಪ್ರಕಟ: ಸಿಎಂ ಸ್ಪಷ್ಟನೆ