ಬೆಂಗಳೂರು: ಇಂದು ನಡೆದ ಸಂಪುಟ ಸಭೆಯಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು (ಕೋಮುಲ್) ವಿಭಜಿಸಲು ತೀರ್ಮಾನಿಸಲಾಗಿದೆ. ಆ ಮೂಲಕ ಸಚಿವ ಡಾ.ಕೆ.ಸುಧಾಕರ್ ಹಾಲು ಒಕ್ಕೂಟ ಬೇರ್ಪಡಿಸುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ.
ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ವಿಂಗಡಿಸುವಂತೆ ಸಚಿವ ಡಾ.ಕೆ.ಸುಧಾಕರ್ ಪಟ್ಟು ಹಿಡಿದಿದ್ದರು. ಇತ್ತ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಲು ಒಕ್ಕೂಟಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಉಭಯ ನಾಯಕರ ಮಧ್ಯೆ ಜಟಾಪಟಿ ಏರ್ಪಟ್ಟಿತ್ತು. ಬಹಿರಂಗವಾಗಿಯೇ ಇಬ್ಬರು ನಾಯಕರು ಸವಾಲು-ಪ್ರತಿಸವಾಲು ಹಾಕಿದ್ದರು.
ಇದೀಗ ಸಚಿವ ಡಾ.ಕೆ.ಸುಧಾಕರ್ ಹಾಲು ಒಕ್ಕೂಟವನ್ನು ಬೇರ್ಪಡಿಸುವಲ್ಲಿ ಸಫಲರಾಗಿದ್ದಾರೆ. ನಮ್ಮ ಜಿಲ್ಲೆಯ ಪಾಲು ನಮಗೆ ಸಿಗಬೇಕು. ಪ್ರತಿ ಬಾರಿ ಕೋಲಾರದಲ್ಲಿರುವ ಡಿಸಿಸಿ ಬ್ಯಾಂಕ್, ಹಾಲು ಒಕ್ಕೂಟಕ್ಕೆ ಚಿಕ್ಕಬಳ್ಳಾಪುರದ ರೈತರು ಹೋಗಬೇಕೆಂದರೆ ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಸಚಿವ ಡಾ.ಕೆ.ಸುಧಾಕರ್ ಕೋಮುಲ್ ಬೇರ್ಪಡಿಸುವಲ್ಲಿ ಯಶ ಸಾಧಿಸಿದ್ದಾರೆ.
ಇದನ್ನೂ ಓದಿ:ಕ್ರೆಡಿಟ್‌ಗಾಗಿ ಕಾಂಗ್ರೆಸ್ ಪಾದಯಾತ್ರೆ ಮಾಡುತ್ತಿದೆ: ಹೆಚ್.ಡಿ.ದೇವೇಗೌಡ