ETV Bharat / city

ಮೇಲ್ಮನೆಯಲ್ಲಿ ನಡೆದ ಘಟನೆ ದುರದೃಷ್ಟಕರ: ಸಚಿವ ಡಾ.ಕೆ ಸುಧಾಕರ್ ಗರಂ

ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯರ ಅನುಚಿತ ವರ್ತನೆ ಕುರಿತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಟ್ವಿಟ್​ ಮಾಡುವ ಮೂಲಕ ಘಟನೆಯನ್ನು ಖಂಡಿಸಿದ್ದಾರೆ.

Sudhakar
ಸುಧಾಕರ್​
author img

By

Published : Dec 15, 2020, 5:38 PM IST

ಬೆಂಗಳೂರು: ಚಿಂತಕರ ಚಾವಡಿ ಎಂದು ಕರೆಯಿಸಿಕೊಳ್ಳುವ ಮೇಲ್ಮನೆಯಲ್ಲಿ ಇಂದು ನಡೆದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಪ್ರಜಾಪ್ರಭುತ್ವದ ಬಗ್ಗೆ ಪಾಠ ಹೇಳುವ ಕಾಂಗ್ರೆಸ್ ನಾಯಕರ ನೈಜ ಬಣ್ಣ ಬಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಚಿಂತಕರ ಚಾವಡಿ ಎಂದು ಕರೆಸಿಕೊಳ್ಳುವ ಸದನದ ಮೇಲ್ಮನೆಯಲ್ಲಿ ಇಂದು ನಡೆದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಭಾಷಣ ಮಾಡುವ, ಇತರರಿಗೆ ಪಾಠ ಹೇಳುವ ಕಾಂಗ್ರೆಸ್ ಪಕ್ಷದ ನಾಯಕರ ನೈಜ ಬಣ್ಣ ಇಂದು ಬಯಲಾಗಿದೆ. (1/3)

    — Dr Sudhakar K (@mla_sudhakar) December 15, 2020 " class="align-text-top noRightClick twitterSection" data=" ">

ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯರ ಅನುಚಿತ ವರ್ತನೆ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಸದನದ ಮೇಲ್ಮನೆ ಚಿಂತಕರ ಚಾವಡಿ ಎಂದು ಕರೆಯಿಸಿಕೊಳ್ಳುತ್ತದೆ. ಆದರೆ ಇಲ್ಲಿ ಇಂದು ನಡೆದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಭಾಷಣ ಮಾಡುವ, ಇತರರಿಗೆ ಪಾಠ ಹೇಳುವ ಕಾಂಗ್ರೆಸ್ ಪಕ್ಷದ ನಾಯಕರ ನೈಜ ಬಣ್ಣ ಬಯಲಾಗಿದೆ ಎಂದು ಹೇಳಿದ್ದಾರೆ.

  • 2017ರಲ್ಲಿ ಅಂದಿನ ಪರಿಷತ್ ಸಭಾಪತಿಗಳಾಗಿದ್ದ ಡಿ.ಎಚ್‌.ಶಂಕರಮೂರ್ತಿ ಅವರ ವಿರುದ್ಧ ಕಾಂಗ್ರೆಸ್ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದಾಗ, ಚರ್ಚೆಗೆ ಅವಕಾಶ ನೀಡಿದ್ದು ಮಾತ್ರವಲ್ಲದೆ, ಸಭಾಪತಿ ಪೀಠದಲ್ಲಿ ಕೂರದೇ ಉಪ ಸಭಾಪತಿ ಮೂಲಕ ಕಲಾಪ ನಡೆಸಲಾಯಿತು. ತಮ್ಮ ವಿರುದ್ಧ ಬಂದ ಎಲ್ಲ ಆರೋಪಗಳಿಗೂ ಡಿ.ಎಚ್‌.ಶಂಕರಮೂರ್ತಿ ಅವರು ಉತ್ತರ ನೀಡಿದರು.(2/3)

‘ಯಥಾ ರಾಜ ತಥಾ ಪ್ರಜಾ’ ಎಂಬಂತೆ, ಕೆಪಿಸಿಸಿಗೆ ನೂತನ ಅಧ್ಯಕ್ಷರು ನೇಮಕಗೊಂಡಾಗಿನಿಂದ ಕಾಂಗ್ರೆಸ್ ಪಕ್ಷದವರ ನಡವಳಿಕೆ ಹಾಗೂ ನೈತಿಕತೆ ಪಾತಾಳಕ್ಕೆ ಕುಸಿದಿದೆ. ರಾಜ್ಯದ ಜನರು ಸಜ್ಜನಿಕೆಗೆ ಹೆಸರಾಗಿದ್ದು, ಈ ರೀತಿಯ ಅಸಭ್ಯ ನಡವಳಿಕೆಯನ್ನು ಎಂದೂ ಕ್ಷಮಿಸುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.

  • 'ಯಥಾ ರಾಜಾ ತಥಾ ಪ್ರಜಾ' ಎಂಬಂತೆ, ಕೆಪಿಸಿಸಿಗೆ ನೂತನ ಅಧ್ಯಕ್ಷರು ನೇಮಕಗೊಂಡಾಗಿನಿಂದ ಕಾಂಗ್ರೆಸ್ ಪಕ್ಷದ ನಡವಳಿಕೆ ಹಾಗೂ ನೈತಿಕತೆ ಪಾತಾಳಕ್ಕೆ ಕುಸಿಯುತ್ತಿದೆ. ಕರ್ನಾಟಕದ ಜನತೆ ಸಜ್ಜನಿಕೆಗೆ ಹೆಸರಾಗಿದ್ದು ಈ ರೀತಿಯ ಅಸಭ್ಯತೆಯನ್ನು ಎಂದಿಗೂ ಕ್ಷಮಿಸುವುದಿಲ್ಲ. (3/3)

2017 ರಲ್ಲಿ ಅಂದಿನ ವಿಧಾನಪರಿಷತ್​ನ ಸಭಾಪತಿಗಳಾಗಿದ್ದ ಡಿ.ಎಚ್.ಶಂಕರಮೂರ್ತಿ ಅವರ ವಿರುದ್ಧ ಕಾಂಗ್ರೆಸ್ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದಾಗ, ಚರ್ಚೆಗೆ ಅವಕಾಶ ನೀಡಿದ್ದರು. ಅಲ್ಲದೇ, ಸಭಾಪತಿ ಪೀಠದಲ್ಲಿ ಅವರು ಕೂರದೇ ಉಪ ಸಭಾಪತಿ ಮೂಲಕ ಕಲಾಪ ನಡೆಸಲಾಗಿತ್ತು. ತಮ್ಮ ವಿರುದ್ಧ ಬಂದ ಎಲ್ಲ ಆರೋಪಗಳಿಗೂ ಶಂಕರಮೂರ್ತಿಯವರು ಉತ್ತರ ನೀಡಿದ್ದರು. ಇದನ್ನು ನೆನಪಿಸಿಕೊಳ್ಳಬೇಕು ಎಂದು ಸಚಿವರು ಸರಣಿ ಟ್ವೀಟ್ ಮಾಡಿದ್ದಾರೆ.

ಓದಿ...ಬಿಜೆಪಿ - ಜೆಡಿಎಸ್ ಮುಖಂಡರಿಂದ ರಾಜ್ಯಪಾಲರ ಭೇಟಿ: ಕಾಂಗ್ರೆಸ್ ವರ್ತನೆ ಖಂಡಿಸಿದ ಮಾಧುಸ್ವಾಮಿ, ಹೊರಟ್ಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.