ETV Bharat / city

ಆ್ಯಸಿಡ್ ದಾಳಿ ಸಂತ್ರಸ್ತೆಯ ಆರೋಗ್ಯದಲ್ಲಿ ಸುಧಾರಣೆ ಬಳಿಕ ಸರ್ಕಾರಿ ಉದ್ಯೋಗ ನೀಡುವ ಬಗ್ಗೆ ಚಿಂತನೆ: ಸಚಿವ ಸುಧಾಕರ್ - ಆ್ಯಸಿಡ್ ದಾಳಿಯ ಸಂತ್ರಸ್ತೆಯ ಆರೋಗ್ಯದಲ್ಲಿ ಸುಧಾರಣೆ

ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತೆ ಸರ್ಕಾರಿ ಉದ್ಯೋಗ ನೀಡುವ ಬಗ್ಗೆ ಚಿಂತಿಸಲಾಗಿದೆ ಎಂದು ಸಂತ್ರಸ್ತೆ ಭೇಟಿಯಾಗಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ನಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

minister sudhakar visit acid attack victim
ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್
author img

By

Published : Apr 30, 2022, 9:57 PM IST

Updated : Apr 30, 2022, 10:57 PM IST

ಬೆಂಗಳೂರು: ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತೆಯ ಆರೋಗ್ಯದಲ್ಲಿ ಸುಧಾರಣೆಯಾದ ಬಳಿಕ ಆಕೆಗೆ ಸರ್ಕಾರಿ ಉದ್ಯೋಗ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ. ಅದರೊಂದಿಗೆ ಆಕೆಯ ಕುಟುಂಬ ಕಷ್ಟದಲ್ಲಿದ್ದು, ಆಕೆಗೆ ಚಿಕಿತ್ಸೆ ಕೊಡಿಸುವ ಹಂತದಲ್ಲಿ ಅವರು ಇಲ್ಲದ ಕಾರಣ ಆಕೆಗೆ ವೈಯಕ್ತಿಕವಾಗಿ ನಾನು 5 ಲಕ್ಷ ರೂಪಾಯಿ ಪರಿಹಾರ ನೀಡುತ್ತೇನೆ ಎಂದು ಕುಟುಂಬ ಕಲ್ಯಾಣ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ.

ಚೇತರಿಕೆಗೆ ಸಮಯ ಬೇಕು: ಆ್ಯಸಿಡ್ ದಾಳಿಗೊಳಗಾದ ಯುವತಿ ದೇಹ ಶೇ.35 ರಿಂದ 40ರಷ್ಟು ಸುಟ್ಟು ಹೋಗಿದೆ. ಪರಿಸ್ಥಿತಿ ಸ್ವಲ್ಪ ಕ್ಲಿಷ್ಟಕರವಾಗಿದೆ. ಆದರೂ ವೈದ್ಯರು ಆಕೆ ಚೇತರಿಸಿಕೊಳ್ಳುವ ಭರವಸೆ ನೀಡಿದ್ದಾರೆ. ಒಂದು ವಾರದ ನಂತರ ಅವರಲ್ಲಿ ಆಗುವ ಚೇತರಿಕೆಯ ಬಗ್ಗೆ ಗೊತ್ತಾಗುತ್ತದೆ. ಪೂರ್ಣ ಪ್ರಮಾಣದ ಚೇತರಿಕೆ ಕಾಣಲು ಎರಡು ತಿಂಗಳು ಕಾಲಾವಕಾಶ ಬೇಕಾಗುತ್ತದೆ. ಯುವತಿ ಸಂಪೂರ್ಣವಾಗಿ ಗುಣಮುಖರಾಗಲಿ ಎಂದು ನಾನು ಸೇರಿದಂತೆ ಎಲ್ಲರೂ ದೇವರಲ್ಲಿ ಪ್ರಾರ್ಥನೆ ಮಾಡೋಣ ಎಂದು ಹೇಳಿದರು.

ಪುನಃ ಯಥಾಸ್ಥಿತಿಗೆ ಬಂದ ನಂತರ ಸರ್ಕಾರಿ ಉದ್ಯೋಗ ನೀಡುವ ಚಿಂತನೆ ಇದೆ

ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು: ಯಾವ ಕಾರಣಕ್ಕಾಗಿ ಇಂತಹ ಕ್ರೌರ್ಯವನ್ನು ಆ ವ್ಯಕ್ತಿ ಮಾಡಿದ್ದಾನೆ ಎನ್ನುವುದು ತಿಳಿದಿಲ್ಲ. ಆದರೆ ಈ ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅವನನ್ನು ಆದಷ್ಟು ಬೇಗ ಬಂಧಿಸಲು ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಅವನ ಮೇಲೆ ಕಠಿಣ ಕ್ರಮವನ್ನು ಕೈಗೊಳ್ಳುವಂತೆ ಮಾಡಲಾಗುವುದು ಎಂದು ಸಚಿವ ಸುಧಾಕರ್ ಹೇಳಿದರು.

ಮುಂದುವರೆದ ಶೋಧ ಕಾರ್ಯ: ಆರೋಪಿ ನಾಗೇಶ್‌ಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ತಮಿಳುನಾಡು ಮತ್ತು ಆಂಧ್ರ ಪ್ರದೇಶದಲ್ಲಿಯೂ ಆತನಿಗಾಗಿ ಹುಡುಕಾಟ ಮುಂದುವರೆದಿದೆ. ಕೃತ್ಯ ನಡೆದಾಗಿನಿಂದ ಆತ ಮೊಬೈಲ್ ಬಳಸದೇ ಇರುವುದು ಮತ್ತು ಕುಟುಂಬ ಅಥವಾ ಸ್ನೇಹಿತರನ್ನು ಸಂಪರ್ಕಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಆರು ತಿಂಗಳಲ್ಲಿ ರಾಜ್ಯದ ಎಲ್ಲರಿಗೂ ಆಯುಷ್ಮಾನ್ ಕಾರ್ಡ್: ಸಚಿವ ಸುಧಾಕರ್

Last Updated : Apr 30, 2022, 10:57 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.