ಬೆಂಗಳೂರು: ಇಂದಿರಾ ಕ್ಯಾಂಟಿನ್ ಹೆಸರೇ ಇರಬೇಕಾ ಅಥವಾ ಅನ್ನಪೂರ್ಣೇಶ್ವರಿ ಹೆಸರು ಇಡಬೇಕಾ ಎಂಬ ಕುರಿತು ಜನರ ಅಭಿಪ್ರಾಯ ಸಂಗ್ರಹ ಆಗಲಿ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಉಚಿತವಾದ ಅನ್ನ ಸ್ವೀಕರಿಸುವ ಜನರೇ ಈ ಬಗ್ಗೆ ನಿರ್ಧಾರ ಮಾಡಲಿ. ಯಾವ ಹೆಸರಿಟ್ಟರೆ ಉಚಿತ ಅನ್ನ ಆಹಾರ ಸ್ವೀಕರಿಸಲು ಒಳ್ಳೆಯದು ಅನ್ನೋದರ ಜನಾಭಿಪ್ರಾಯ ಸಂಗ್ರಹ ಆಗಲಿ ಎಂದು ತಿಳಿಸಿದರು.
ಕಾಂಗ್ರೆಸ್ ನಮಗೆ ಸಂಸ್ಕೃತಿ ಕಲಿಸಿಕೊಡುವ ಅಗತ್ಯವಿಲ್ಲ. ಕಾಂಗ್ರೆಸ್ ಸಂಸ್ಕೃತಿ ಏನು ಅನ್ನೋದು ನಮಗೆಲ್ಲ ಗೊತ್ತಿದೆ. ಹಿಂದೆ ವಾಜಪೇಯಿ ಚತುಷ್ಪಥ ರಸ್ತೆ ನಿರ್ಮಾಣ ಆದಾಗ ಇದೇ ಕಾಂಗ್ರೆಸ್ ದೇಶಾದ್ಯಂತ ಹೆಸರು ಬದಲಾಯಿಸಲು ಹೊರಟಿದ್ದರು. ವಾಜಪೇಯಿ ಚತುಷ್ಪಥ ರಸ್ತೆಯ ಬೋರ್ಡ್ ಬದಲಾಯಿಸುವುದಕ್ಕಾಗಿಯೇ ಹೆಚ್ಚಿನ ಹಣ ಬಿಡುಗಡೆ ಮಾಡಿದ್ದರು. ಹೀಗಾಗಿ ಅವರಿಂದ ನಾವೇನು ಕಲಿಬೇಕಾಗಿಲ್ಲ. ಆದರೆ ಕ್ಯಾಂಟಿನ್ಗೆ ಯಾವ ಹೆಸರಿಡಬೇಕು ಎಂಬ ಬಗ್ಗೆ ಜನಾಭಿಪ್ರಾಯ ಸಂಗ್ರಹ ಆಗಲಿ ಎಂದರು.