ಬೆಂಗಳೂರು: ಜುಲೈ 20 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ತಪ್ಪು ಮಾಹಿತಿ ವಿದ್ಯಾರ್ಥಿಗಳಲ್ಲಿದೆ. ಈಗಾಗಲೇ ಜುಲೈ ಅಂತ್ಯಕ್ಕೆ ಫಲಿತಾಂಶ ಎಂದು ಹೇಳಿದ್ದರೂ ಇಂದು ಕರೆ ಮಾಡಿ ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳು ವಿಚಾರಿಸುತ್ತಿದ್ದಾರೆ. ಆದರೆ ಇಂದು ಫಲಿತಾಂಶ ಪ್ರಕಟಗೊಳ್ಳುತ್ತಿಲ್ಲ. ಮೌಲ್ಯಮಾಪನ ಮುಗಿದಿದ್ದು, ಜುಲೈ 20ಕ್ಕೆ ಫಲಿತಾಂಶ ಪ್ರಕಟ ಮಾಡುತ್ತೇವೆ ಎಂದು ಸಚಿವ ಸುರೇಶ್ ಕುಮಾರ್ ಟ್ವಿಟರ್ನಲ್ಲಿ ಸ್ಪಷ್ಟನೆ ನೀಡಿದ್ದಾರೆ.
-
ಅನೇಕ ವಿದ್ಯಾರ್ಥಿಗಳು ನನಗೆ ಫೋನ್ ಮಾಡಿ 2 ನೇ PUC ಫಲಿತಾಂಶ ಇಂದು ಬರುತ್ತದೆಯೇ ಎಂದು ಕೇಳುತ್ತಿದ್ದಾರೆ.
— S.Suresh Kumar, Minister - Govt of Karnataka (@nimmasuresh) July 9, 2020 " class="align-text-top noRightClick twitterSection" data="
ಈಗಾಗಲೇ ತಿಳಿಸಿರುವಂತೆ ಎರಡನೇ ಪಿಯುಸಿ ಫಲಿತಾಂಶ ಜುಲೈ 20 ರ ಸುಮಾರಿಗೆ ಬರಲಿದೆ ಎಂದು ಮತ್ತೊಮ್ಮೆ ಸ್ಪಷ್ಟ ಪಡಿಸುತ್ತಿದ್ದೇನೆ.
">ಅನೇಕ ವಿದ್ಯಾರ್ಥಿಗಳು ನನಗೆ ಫೋನ್ ಮಾಡಿ 2 ನೇ PUC ಫಲಿತಾಂಶ ಇಂದು ಬರುತ್ತದೆಯೇ ಎಂದು ಕೇಳುತ್ತಿದ್ದಾರೆ.
— S.Suresh Kumar, Minister - Govt of Karnataka (@nimmasuresh) July 9, 2020
ಈಗಾಗಲೇ ತಿಳಿಸಿರುವಂತೆ ಎರಡನೇ ಪಿಯುಸಿ ಫಲಿತಾಂಶ ಜುಲೈ 20 ರ ಸುಮಾರಿಗೆ ಬರಲಿದೆ ಎಂದು ಮತ್ತೊಮ್ಮೆ ಸ್ಪಷ್ಟ ಪಡಿಸುತ್ತಿದ್ದೇನೆ.ಅನೇಕ ವಿದ್ಯಾರ್ಥಿಗಳು ನನಗೆ ಫೋನ್ ಮಾಡಿ 2 ನೇ PUC ಫಲಿತಾಂಶ ಇಂದು ಬರುತ್ತದೆಯೇ ಎಂದು ಕೇಳುತ್ತಿದ್ದಾರೆ.
— S.Suresh Kumar, Minister - Govt of Karnataka (@nimmasuresh) July 9, 2020
ಈಗಾಗಲೇ ತಿಳಿಸಿರುವಂತೆ ಎರಡನೇ ಪಿಯುಸಿ ಫಲಿತಾಂಶ ಜುಲೈ 20 ರ ಸುಮಾರಿಗೆ ಬರಲಿದೆ ಎಂದು ಮತ್ತೊಮ್ಮೆ ಸ್ಪಷ್ಟ ಪಡಿಸುತ್ತಿದ್ದೇನೆ.
ಕೊರೊನಾ ಆತಂಕದ ನಡುವೆಯೂ ಪರೀಕ್ಷೆ ಬರೆದಿರುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಫಲಿತಾಂಶಕ್ಕೂ ಸಮಯ ನಿಗದಿಪಡಿಸಲಾಗುತ್ತಿದ್ದು, ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಸದ್ಯದಲ್ಲೇ ದಿನಾಂಕವನ್ನೂ ತಿಳಿಸಲಾಗುತ್ತದೆ ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.