ETV Bharat / city

ಪಿಯು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಸಚಿವ ಸುರೇಶ್ ಕುಮಾರ್ ಪರಿಶೀಲನೆ - ಕೊರೊನಾ

ಶಿಕ್ಷಣ ಸಚಿವ ಸುರೇಶ್ ಕುಮಾರ್ ಜಯನಗರದಲ್ಲಿರುವ ಎನ್​ಎಂಕೆಆರ್​ವಿ ಕಾಲೇಜಿಗೆ ಭೇಟಿ ನೀಡಿ ಪಿಯು ಪರೀಕ್ಷೆಯ ಸಂಪೂರ್ಣ ಪರಿಶೀಲನೆ ನಡೆಸಿದರು.

minister suresh kumar
ಸಚಿವ ಸುರೇಶ್ ಕುಮಾರ್
author img

By

Published : Jun 18, 2020, 2:03 PM IST

ಬೆಂಗಳೂರು: ಕೊರೊನಾ ಕಾರಣದಿಂದ ಮುಂದೂಡಲಾಗಿದ್ದ ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ಇಂದು ನಡೆದಿದ್ದು, ಪರೀಕ್ಷಾ ಕೇಂದ್ರಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿದರು.

ನಗರದ ಜಯನಗರದಲ್ಲಿರುವ ಎನ್​ಎಂಕೆಆರ್​ವಿ ಕಾಲೇಜಿಗೆ ಭೇಟಿ ನೀಡಿದ ಸಚಿವರು ಪರೀಕ್ಷಾ ಕೊಠಡಿಯಲ್ಲಿ ಸಿಸಿಟಿವಿ ಅಳವಡಿಸಿದ್ದ ಕಾರಣ, ಸಿಸಿಟಿವಿ ಕಂಟ್ರೋಲ್ ರೂಮ್​ಗೆ ತೆರಳಿ ವೀಕ್ಷಣೆ ಮಾಡಿದರು.

ಕೊರೊನಾ ಹರಡುವಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಯುವ ಸಂಬಂಧ ಸಾಕಷ್ಟು ವಾದ- ವಿವಾದಗಳು ನಡೆದಿದ್ದವು. ಅದೆಲ್ಲಾ ಮೀರಿ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪರೀಕ್ಷೆ ನಡೆಸಲಾಗುತ್ತಿದೆ.

ಬಳಿಕ ಮಾತಾನಾಡಿದ ಸಚಿವರು, ರಾಜ್ಯದ ಎಲ್ಲಾ ಕಡೆ ಅಚ್ಚುಕಟ್ಟಾಗಿ ಪರೀಕ್ಷೆ ನಡೆಯುತ್ತಿದೆ. ಕೆಲವೊಂದು ಕಡೆ ಯಡವಟ್ಟುಗಳಾಗಿವೆ, ಮುಂದೆ ಹಾಗೆ ಆಗದಂತೆ ನೋಡಿಕೊಳ್ಳಲಾಗುವುದು. ಈ ಬಗ್ಗೆ ಪೊಲೀಸರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಅಂತ ತಿಳಿಸಿದರು.

ಎಸ್​ಎಸ್​​ಎಲ್​ಸಿ ಪರೀಕ್ಷೆಯೂ ಅದಷ್ಟೂ ಅಚ್ಚುಕಟ್ಟಾಗಿ ನಡೆಯಲಿದ್ದು, ಬಿಜಾಪುರದಲ್ಲಿ ಒಬ್ಬ ವಿದ್ಯಾರ್ಥಿಯ ದೇಹದ ಉಷ್ಣತೆ ಹೆಚ್ಚಿರುವುದು ಕಂಡುಬಂದಿದೆ. ಆತನನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿದೆ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.