ETV Bharat / city

ಕೊಪ್ಪಳದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪ್ರಸ್ತಾವ.. ಸಚಿವ ವಿ.ಸೋಮಣ್ಣ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು..

author img

By

Published : Jan 21, 2022, 9:01 PM IST

ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ನಿಗಮದ ತಾಂತ್ರಿಕ ಸಮಿತಿ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ವರದಿ ಹಾಗೂ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸಲು ಈ ಸಂದರ್ಭದಲ್ಲಿ ಸೂಚನೆ ನೀಡಿದರು. ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸುವುದರಿಂದ ಜಿಲ್ಲೆಯ ಪ್ರವಾಸೋದ್ಯಮ ಮತ್ತಷ್ಟು ಉತ್ತುಂಗಕ್ಕೇರಲಿದೆ..

minister-v-somanna
ಸಚಿವ ವಿ.ಸೋಮಣ್ಣ

ಬೆಂಗಳೂರು : ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪಿಸುವ ಕುರಿತಂತೆ ಮತ್ತು ಜಿಲ್ಲೆಯ ಇನ್ನಿತರ ಮೂಲಸೌಲಭ್ಯ ಅಭಿವೃದ್ಧಿ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವ ವಿ.ಸೋಮಣ್ಣ ಇಂದು ವಿಧಾನಸೌಧದಲ್ಲಿ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಸಚಿವರು, ಕೊಪ್ಪಳ ಜಿಲ್ಲೆಯು ಚಾರಿತ್ರಿಕ ಪ್ರದೇಶವಾಗಿದೆ. ಅಂಜನಾದ್ರಿ ಬೆಟ್ಟ ಸೇರಿದಂತೆ ಇನ್ನಿತರ ಪ್ರವಾಸೋದ್ಯಮ ಪ್ರದೇಶಗಳು ಹೆಚ್ಚಾಗಿವೆ. ಜಿಲ್ಲೆಯು ಮೂಲಸೌಲಭ್ಯಗಳಿಂದ ವಂಚಿತವಾಗಿ, ಹಿಂದುಳಿದ ಜಿಲ್ಲೆಯಾಗಿದೆ. ಇಲ್ಲಿ ಮೂಲಸೌಲಭ್ಯಗಳನ್ನು ಅವಶ್ಯಕವಾಗಿ ಕಲ್ಪಿಸಬೇಕಿದೆ ಎಂದರು.

ಈ ಭಾಗದ ಜನರ, ಪ್ರವಾಸಿಗರ ಹಾಗೂ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯ ಹಿತದೃಷ್ಟಿಯಿಂದ ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದು ಅತ್ಯಂತ ಪ್ರಮುಖವಾಗಿದೆ. ಅಗತ್ಯ ಜಮೀನು ಭೂಸ್ವಾಧೀನ ಪ್ರಕ್ರಿಯೆಯನ್ನು ತುರ್ತಾಗಿ ಕೈಗೊಳ್ಳಲು ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ಥಳ ಪರಿಶೀಲಿಸಿ ವರದಿ ಸಲ್ಲಿಸಲು ಸೂಚನೆ

ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ನಿಗಮದ ತಾಂತ್ರಿಕ ಸಮಿತಿ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ವರದಿ ಹಾಗೂ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸಲು ಈ ಸಂದರ್ಭದಲ್ಲಿ ಸೂಚನೆ ನೀಡಿದರು. ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸುವುದರಿಂದ ಜಿಲ್ಲೆಯ ಪ್ರವಾಸೋದ್ಯಮ ಮತ್ತಷ್ಟು ಉತ್ತುಂಗಕ್ಕೇರಲಿದೆ.

ಅಂಜನಾದ್ರಿ, ಕೊಪ್ಪಳದ ಕೋಟೆ, ಕಬ್ಬರಗಿ ಜಲಪಾತ, ಕುಕನೂರು ಸೇರಿದಂತೆ ಅನೇಕ ಪ್ರವಾಸಿ ಸ್ಥಳಗಳಲ್ಲಿ ಮತ್ತಷ್ಟು ಮೂಲ ಸೌಕರ್ಯಗಳ ಅಭಿವೃದ್ಧಿಯಾಗಲಿದೆ ಎಂದು ಸಚಿವ ಸೋಮಣ್ಣ ತಿಳಿಸಿದರು.

ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಸಚಿವರು ಮತ್ತು ಸಂಸದರು, ಕೊಪ್ಪಳ ಲೋಕಸಭಾ ಕ್ಷೇತ್ರ, ಕೊಪ್ಪಳ, ಗಂಗಾವತಿ, ಕನಕಗಿರಿ, ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರು, ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಅಪರ ನಿರ್ದೇಶಕರು, ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ ಹಾಗೂ ಇತರ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿಂದು 48,049 ಜನರಿಗೆ ತಗುಲಿದ ಕೋವಿಡ್​... 18,115 ಮಂದಿ ಚೇತರಿಕೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.