ETV Bharat / city

ಟೌನ್‌ಶಿಪ್​ಗಳ ನಿರ್ಮಾಣ ಬಗ್ಗೆ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ: ಅಧಿಕಾರಿಗಳಿಗೆ ಸಚಿವರ ಸೂಚನೆ - ನಗರಾಭಿವೃದ್ದಿ ಸಚಿವ ಬಿ.ಎ ಬಸವರಾಜ್‌

ಕೆಐಎಡಿಬಿ ಹಾಗೂ ಕೆಎಸ್‌ಎಸ್‌ಐಡಿಸಿ ವತಿಯಿಂದ ಅಭಿವೃದ್ದಿ ಪಡಿಸಿರುವ ಕೈಗಾರಿಕಾ ಪ್ರದೇಶಗಳು ಹಾಗೂ ಶೆಡ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕೆಗಳಿಗೆ ಮಹಾನಗರ ಪಾಲಿಕೆಗಳು ಹಾಗೂ ಸ್ಥಳೀಯ ಸಂಸ್ಥೆಗಳ ವತಿಯಿಂದ ಆಸ್ತಿ ತೆರಿಗೆ ಪಾವತಿಸಲು ಬೇಡಿಕೆ ನೋಟಿಸ್‌ ನೀಡಲಾಗುತ್ತಿದೆ.

meeting
ಸಭೆ
author img

By

Published : Dec 30, 2020, 5:37 PM IST

ಬೆಂಗಳೂರು: ಕೈಗಾರಿಕಾ ಪ್ರದೇಶಗಳಲ್ಲಿ ವಿಧಿಸುವ ತೆರಿಗೆ ಹಾಗೂ ನೂತನ ಟೌನ್‌ಶಿಪ್‌ಗಳ ನಿರ್ಮಾಣದ ಬಗ್ಗೆ ನಗರಾಭಿವೃದ್ದಿ ಇಲಾಖೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಮತ್ತು ಕೆಐಎಡಿಬಿ ಸಹಯೋಗದಲ್ಲಿ ಪ್ರಸ್ತಾವನೆ ತಯಾರಿಸಿ ಸಚಿವ ಸಂಪುಟದ ಮುಂದಿಡುವಂತೆ ಬೃಹತ್ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹಾಗೂ ನಗರಾಭಿವೃದ್ದಿ ಸಚಿವ ಬಿ.ಎ ಬಸವರಾಜ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರುಗಳು, ಹಲವಾರು ವರ್ಷಗಳಿಂದ ಕೆಐಎಡಿಬಿ ಹಾಗೂ ಕೆಎಸ್‌ಎಸ್‌ಐಡಿಸಿಯಿಂದ ಅಭಿವೃದ್ದಿ ಪಡಿಸಿರುವ ಕೈಗಾರಿಕಾ ಪ್ರದೇಶಗಳು ಹಾಗೂ ಶೆಡ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕೆಗಳಿಗೆ ಮಹಾನಗರ ಪಾಲಿಕೆಗಳು ಹಾಗೂ ಸ್ಥಳೀಯ ಸಂಸ್ಥೆಗಳಯಿಂದ ಆಸ್ತಿ ತೆರಿಗೆ ಪಾವತಿಸಲು ಬೇಡಿಕೆ ನೋಟಿಸ್‌ ನೀಡಲಾಗುತ್ತಿದೆ.

ಈಗಾಗಲೇ ಕೈಗಾರಿಕೆಗಳು ಸಂಕಷ್ಟದ ಪರಿಸ್ಥಿತಿಯಲ್ಲಿರುವುದರಿಂದ ಸದರಿ ಕೆಐಎಡಿಬಿ ಹಾಗೂ ಕೆಎಸ್‌ಎಸ್‌ಐಡಿಸಿ ಸಂಸ್ಥೆಗಳು ಅಭಿವೃದ್ದಿ ಹೊಂದಿದ ವಸಹಾತುಗಳನ್ನು ಸಂಬಂಧಪಟ್ಟ ಪಾಲಿಕೆಗಳಿಗೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ವರ್ಗಾವಣೆ ಮಾಡುವ ಮೊದಲು ಹಾಗೂ ನಂತರ ಆಸ್ತಿ ತೆರಿಗೆ ವಿಧಿಸುವ ಬಗ್ಗೆ ಸಂಬಂಧಪಟ್ಟ ಕಾಯ್ದೆಗಳಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಆಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಓದಿ: ರಾಜ್ಯದಲ್ಲಿ 7 ಮಂದಿಗೆ ಹೊಸ ಬಗೆ ಕೊರೊನಾ ವೈರಾಣು: ಆರೋಗ್ಯ ಸಚಿವರ ಸ್ಪಷ್ಟನೆ

ಇದೇ ವೇಳೆ, ರಾಜ್ಯದಲ್ಲಿ ಕೈಗಾರಿಕಾ ಟೌನ್‌ಶಿಪ್‌ಗಳ ನಿರ್ಮಾಣದ ಬಗ್ಗೆ ಸಚಿವ ಸಂಫುಟ ಸಭೆಯ ಮುಂದೆ ಪ್ರಸ್ತಾಪ ತರುವಂತೆಯೂ ಸೂಚನೆ ನೀಡಲಾಗಿತ್ತು. ಈ ಎರಡೂ ವಿಷಯಗಳ ಬಗ್ಗೆ ನಗರಾಭಿವೃದ್ದಿ ಇಲಾಖೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಕೆಐಎಡಿಬಿ ಮಧ್ಯೆ ಇರುವ ಕಾನೂನಾತ್ಮಕ ಗೊಂದಲಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಅಲ್ಲದೇ, ಶೀಘ್ರ ಈ ಬಗ್ಗೆ ಸಚಿವ ಸಂಪುಟ ಮುಂದೆ ಪ್ರಸ್ಥಾವನೆ ಸಲ್ಲಿಸುವಂತೆಯೂ ಸೂಚನೆ ನೀಡಲಾಯಿತು.

ಸಭೆಯಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತಾ, ನಗರಾಭಿವೃದ್ದಿ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಕೈಗಾರಿಕಾಭಿವೃದ್ದಿ ಆಯುಕ್ತೆ ಗುಂಜನ್‌ ಕೃಷ್ಣ, ಕೆಐಎಡಿಬಿ ಸಿಇಓ ಶಿವಶಂಕರ್‌, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.