ETV Bharat / city

ಅಕ್ಕಮಹಾದೇವಿ ಮಹಿಳಾ ವಿವಿ ಮುಚ್ಚುವ ಪ್ರಶ್ನೆಯೇ ಇಲ್ಲ: ಗೋವಿಂದ ಕಾರಜೋಳ

author img

By

Published : Jan 24, 2022, 1:28 PM IST

ಶೈಕ್ಷಣಿಕ ವ್ಯವಸ್ಥೆ ಉತ್ತಮಪಡಿಸುವ ಸದುದ್ದೇಶದಿಂದ ಪ್ರಾರಂಭವಾಗಿರುವ ವಿಜಯಪುರದ ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

karajola
ಗೋವಿಂದ ಕಾರಜೋಳ

ಬೆಂಗಳೂರು: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗುವಂತೆ ಆ ಭಾಗದ ಹೆಣ್ಣುಮಕ್ಕಳು ಹೆಚ್ಚು, ಹೆಚ್ಚು ವಿದ್ಯಾವಂತರಾಗುವಂತೆ ಶೈಕ್ಷಣಿಕ ವ್ಯವಸ್ಥೆ ಉನ್ನತೀಕರಿಸಲು ತನ್ಮೂಲಕ ಸುಸಂಸ್ಕೃತ, ಸುಶಿಕ್ಷಿತ ಸಮಾಜವನ್ನು ನಿರ್ಮಿಸಿ ಸ್ವಾವಲಂಬಿ ಮಹಿಳೆಯರನ್ನು ಉತ್ತೇಜಿಸುವ ಉದ್ದೇಶದಿಂದ ಪ್ರಾರಂಭವಾದ ವಿಜಯಪುರದ ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ವಿವಿ ಅಭಿವೃದ್ಧಿಗೆ ಆ ಭಾಗದ ಜನಪ್ರತಿನಿಧಿಯಾಗಿ ಮತ್ತು ಜನಸಮುದಾಯದ ಆಶೋತ್ತರಗಳನ್ನು ಈಡೇರಿಸುವ ಮತ್ತು ಜನರ ಅಪೇಕ್ಷೆ, ನಿರೀಕ್ಷೆಗಳಿಗೆ ತಕ್ಕಂತೆ ಕಾರ್ಯ ನಿರ್ವಹಿಸುವ ಅಳಿಲು ಸೇವೆಯ ಮೂಲಕ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಕೊಡುಗೆ ನೀಡುವ ಸೌಭಾಗ್ಯವು ನನ್ನದಾಗಿದೆ.

ಈ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಕೇವಲ ಒಂದೇ ಜಿಲ್ಲೆ ಅಲ್ಲ. 13 ಜಿಲ್ಲೆಗಳು ಇದರ ವ್ಯಾಪ್ತಿಯಲ್ಲಿವೆ. ಈ ವಿವಿಗೆ ಮಹಿಳಾ ವಿಶ್ವವಿದ್ಯಾಲಯ ಎಂದು ಪುನರ್ ನಾಮಕರಣ ಮಾಡಿ ವಚನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದ ಅಕ್ಕಮಹಾದೇವಿ ಅವರಿಗೆ ಗೌರವ ಸಲ್ಲಿಸಿದ ಕೀರ್ತಿ ನಮ್ಮ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಬೀಳಿಸಲು ನಾನು ಯತ್ನಾಳ್ ಎಷ್ಟು ಪ್ರಯತ್ನ ಮಾಡಿದ್ದೇವೆ ಗೊತ್ತಾ?: ಸರ್ಕಾರದ ವಿರುದ್ಧ ರೇಣುಕಾಚಾರ್ಯ ಕಿಡಿ

ಶೈಕ್ಷಣಿಕ ವ್ಯವಸ್ಥೆಯನ್ನು ಉತ್ತಮಪಡಿಸುವ ಸದುದ್ದೇಶದಿಂದ ಪ್ರಾರಂಭವಾಗಿರುವ ಮಹಿಳಾ ವಿಶ್ವ ವಿದ್ಯಾಲಯವನ್ನು ಮುಚ್ಚಲಾಗುವುದು ಎಂಬ ಸುಳ್ಳು ವದಂತಿಗಳನ್ನು ಯಾರೂ ಹರಡಬಾರದು ಮತ್ತು ಇಂತಹ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಈ ಮೂಲಕ ಸಚಿವರು ವಿನಂತಿಸಿದ್ದಾರೆ.

ಇಲ್ಲೊಮ್ಮೆ ನೋಡಿ - ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.