ETV Bharat / city

ಸಿದ್ದರಾಮಯ್ಯ ಪುತ್ರ ಸಾವಿನ ಕುರಿತು ಹೇಳಿಕೆ... ಎಂಟಿಬಿಗೆ ಬೈರತಿ ಸುರೇಶ್​​​​​ ತಿರುಗೇಟು - ಬೈರತಿ ಸುರೇಶ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ರಾಕೇಶ್​​ ಸಾವಿಗೆ ಶಾಸಕ ಬೈರತಿ ಸುರೇಶ್ ಕಾರಣ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಅನರ್ಹ ಶಾಸಕ ಎಂಟಿಬಿ ನಾಗರಾಜ್​ ಆರೋಪಕ್ಕೆ ಬೈರತಿ ಸುರೇಶ್ ತಿರುಗೇಟು ನೀಡಿದ್ದಾರೆ.

mla-birathi-boomerang-to-mtb-nagaraju
author img

By

Published : Sep 23, 2019, 2:53 AM IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ರಾಕೇಶ್​​ ಸಾವಿಗೆ ಶಾಸಕ ಬೈರತಿ ಸುರೇಶ್ ಕಾರಣ ಎಂದು ಹೇಳಿಕೆ ನೀಡಿದ್ದ ಅನರ್ಹ ಶಾಸಕ ಎಂಟಿಬಿ ನಾಗರಾಜ್​ ಆರೋಪಕ್ಕೆ ಬೈರತಿ ಸುರೇಶ್ ತಿರುಗೇಟು ನೀಡಿದ್ದಾರೆ.

ರಾಕೇಶ್ ಇನ್ನೂ 50 ವರ್ಷ ಬದುಕುತ್ತಿದ್ದರು. ಹೋಟೆಲ್‌ಗೆ ಕರೆಸಿಕೊಂಡು ಮದ್ಯ ಕುಡಿಸಿ ಸಾಯಿಸಿದ್ದೇ ಆ ಬಚ್ಚಾ ಎಂದು ಬೈರತಿ ವಿರುದ್ಧ ಎಂಟಿಬಿ ನಾಗರಾಜ್ ಆರೋಪಿಸಿದ್ದರು.

ಶಾಸಕ ಬೈರತಿ ಸುರೇಶ್

ಕುಡಿಸಿ ಯಾರಾದರೂ ಸಾಯಿಸುತ್ತಾರ. ಅದಕ್ಕೆ ಏನಾದರೂ ಸಾಕ್ಷ್ಯಾಧಾರ ಇದೆಯಾ. ರಾಕೇಶ್ ನನ್ನ ತಮ್ಮನಿಂದ್ದಂತೆ. ಅವರ ಸಾವಿಗೆ ನಾನೇಕೆ ಕಾರಣವಾಗಲಿ. ಒಂದು ಸಾವನ್ನು ರಾಜಕೀಯವಾಗಿ ಬಳಸಿಕೊಂಡು ಎಂಟಿಬಿ ಹತಾಶ ಮನೋಭಾವದಿಂದ ಹೀಗೆಲ್ಲಾ ಮಾತನಾಡುತ್ತಿದ್ದಾರೆ. ರಾಕೇಶ್ ಸಾವಿನ ಬಗ್ಗೆ ಸಿದ್ದರಾಮಯ್ಯ ಮಾತನಾಡಬೇಕು. ಮೂರನೇ ವ್ಯಕ್ತಿ ಎಂಟಿಬಿ‌ಗೆ ಯಾವ ಹಕ್ಕಿದೆ? ನಾನು ಗ್ರಾಮ ಪಂಚಾಯಿತಿ ಸದಸ್ಯನಾಗಿದ್ದಾಗ ಎಂಟಿಬಿ ಎಲ್ಲಿದ್ದರು ಎನ್ನುವುದನ್ನು ತಿಳಿದುಕೊಳ್ಳಲಿ ಎಂದು ಕಿಡಿಕಾರಿದ್ದಾರೆ.

ಗ್ರಾಪಂ ಸದಸ್ಯನಿಂದ ಹಿಡಿದು ಈಗ ಶಾಸಕನಾಗಿದ್ದೇನೆ. ನಾನೇನು ಬಚ್ಚಾ ಅಲ್ಲ. ಬೇರೆ ಮನೆಯಿಂದ ಬಂದು ಕಾಂಗ್ರೆಸ್​ನಲ್ಲಿ ವಾಸ ಅಂತಿರಲ್ಲ. ನೀವು ಈಗ ಮಾಡುತ್ತಿರುವುದು ಏನು ಎಂದು ಪ್ರಶ್ನಿಸಿದ್ದಾರೆ.

ಹೊಸಕೋಟೆಯಲ್ಲಿ ಬಚ್ಚೇಗೌಡ ಕಟ್ಟಿ ಬೆಳೆಸಿದ ಮನೆಯಲ್ಲಿ ವಾಸ ಮಾಡಲು ನೀವು ಹೋಗುತ್ತಿರುವುದು ಎಷ್ಟು ಸರಿ. ಸಿದ್ದರಾಮಯ್ಯ ಅವರನ್ನು ಟೀಕಿಸಲು ನಿಮಗೆ ಯಾವುದೇ ನೈತಿಕತೆ ಇಲ್ಲ. ನಿಮ್ಮ ಬಂಡವಾಳ, ನೀವು ನಡೆಸಿರುವ ಹಗರಣಗಳ ಬಗ್ಗೆ ನಮಗೂ ಗೊತ್ತಿದೆ ಎಂದು ಎಂಟಿಬಿಗೆ ತಿರುಗೇಟು ನೀಡಿದ್ದಾರೆ.

Intro: ಎಂಟಿಬಿ ನಾಗರಾಜ್ ಆರೋಪಕ್ಕೆ ಭೈರತಿ ಸುರೇಶ್ ತಿರುಗೇಟು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಪುತ್ರ ರಾಕೇಶ್ ಅವರ ಸಾವಿಗೆ ಭೈರತಿ ಸುರೇಶ್ ಅವರೇ ಕಾರಣ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಹೊಸಕೋಟೆಯ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರ ಆರೋಪಕ್ಕೆ ಭೈರತಿ ಸುರೇಶ್ ತಿರುಗೇಟು ನೀಡಿದ್ದು ರಾಕೇಶ್ ನನ್ನ ತಮ್ಮನಿಂದ್ದಂತೆ ಅವರ ಸಾವಿಗೆ ನಾನೇಕೆ ಕಾರಣವಾಗಲಿ ಒಂದು ಸಾವನ್ನ ರಾಜಕೀಯವಾಗಿ ಬಳಸಿಕೊಂಡು ಎಂಟಿಬಿ ನಾಗರಾಜ್ ಹತಾಶೆ ಮನೋಭಾವದಿಂದ ಮಾತನಾಡುತ್ತಿದ್ದಾರೆ,ರಾಕೇಶ್ ಸಾವಿನ ಬಗ್ಗೆ ಸಿದ್ದರಾಮಯ್ಯ ಮಾತನಾಡಬೇಕು ಮೂರನೇ ವ್ಯಕ್ತಿ ಎಂಟಿಬಿ‌ ನಾಗರಾಜ್ ಗೆ ಯಾವ ಹಕ್ಕಿದೆ ನಾನು ಗ್ರಾಪಂ ಸದಸ್ಯನಾಗಿದ್ದಾಗ ಎಂಟಿಬಿ ಎಲ್ಲಿದ್ದರು ಎನ್ನುವುದನ್ನು ತಿಳಿದುಕೊಳ್ಳಲಿ.Body:ಗ್ರಾಪಂ ಸದಸ್ಯನಿಂದ ಹಿಡಿದು ಈಗ ಶಾಸಕನಾಗಿದ್ದೇನೆ ನಾನೇನು ಬಚ್ಚಾ ಅಲ್ಲ ಬೇರೆ ಮನೆಯಿಂದ ಬಂದು ಕಾಂಗ್ರೆಸ್ ‌ನಲ್ಲಿ ವಾಸ ಅಂತಿರಲ್ಲ ನೀವು ಹೀಗ ಮಾಡುತ್ತಿರುವುದು ಏನು ಹೊಸಕೋಟೆಯಲ್ಲಿ ಬಚ್ಚೇಗೌಡ ಕಟ್ಟಿ ಬೆಳೆಸಿದ ಮನೆಯಲ್ಲಿ ನೀವು ವಾಸ ಮಾಡಲು ಹೋಗುತ್ತಿರುವುದು ಎಷ್ಟು ಸರಿ.Conclusion:ಸಿದ್ದರಾಮಯ್ಯ ಅವರನ್ನು ಟೀಕಿಸಲು ನಿಮಗೆ ಯಾವುದೇ ನೈತಿಕತೆ ಇಲ್ಲ ನಿಮ್ಮ ಬಂಡವಾಳ ನೀವು ನಡೆಸಿರುವ ಹಗರಣಗಳ ಬಗ್ಗೆ ನಮಗೂ ಗೊತ್ತೆದೆ ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್ ಗೆ ತಿರುಗೇಟು ನೀಡಿದ್ದಾರೆ.

ಬೈಟ್: ಭೈರತಿ ಸುರೇಶ್,ಶಾಸಕ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.