ಬೆಂಗಳೂರು: ಶಾಸಕ ಜಮೀರ್ ಅಹಮದ್ ಖಾನ್ ಎಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. 10 ದಿನದ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಭ್ರಷ್ಟಾಚಾರ ನಿಗ್ರಹ ದಳ ಇಲಾಖೆ ನೋಟಿಸ್ ನೀಡಿದ್ದ, ಹಿನ್ನೆಲೆಯಲ್ಲಿ ತನಿಖಾಧಿಕಾರಿ ಎಸಿಬಿ ಡಿವೈಎಸ್ಪಿ ರವಿಶಂಕರ್ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ಕಳೆದ ಜುಲೈ 5 ರಂದು ಶಾಸಕ ಜಮೀರ್ ಅಹಮದ್ ಖಾನ್ ಅವರ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಫ್ಲ್ಯಾಟ್ಗಳ ಮೇಲೆ ಎಸಿಬಿ ದಾಳಿ ನಡೆಸಿತ್ತು. ದಾಳಿ ವೇಳೆ ಅಕ್ರಮ ಆಸ್ತಿ ಗಳಿಕೆ ಕಂಡುಬಂದ ಹಿನ್ನೆಲೆ ಆಸ್ತಿಗೆ ಸಂಬಂಧಿಸಿದ ಆದಾಯದ ಮೂಲ ದಾಖಲೆ ತರುವಂತೆ ಸೂಚನೆ ನೀಡಲಾಗಿತ್ತು.
ಮೊದಲು ಬಕ್ರೀದ್, ಬಳಿಕ ಸಿದ್ಧರಾಮೋತ್ಸವ ಕಾರ್ಯಕ್ರಮದ ಕಾರಣ ನೀಡಿ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ್ದ ಶಾಸಕ ಜಮೀರ್ ಅಹಮದ್ಗೆ, ಕಡ್ಡಾಯವಾಗಿ ಆಗಸ್ಟ್ 6 ರಂದು ಕಚೇರಿಗೆ ಹಾಜರಾಗಲು ಎಸಿಬಿ ಸೂಚಿಸಿತ್ತು.
ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ: ಆ.6 ರಂದು ವಿಚಾರಣೆಗೆ ಹಾಜರಾಗುವಂತೆ ಶಾಸಕ ಜಮೀರ್‌ಗೆ ಎಸಿಬಿ ನೋಟಿಸ್