ETV Bharat / city

ಪರಿಷತ್​​ನ ಒಂದು ಸ್ಥಾನಕ್ಕೆ ಚುನಾವಣೆ: ಬಿಜೆಪಿಗೆ ಜಯ ಖಚಿತ, ಅಭ್ಯರ್ಥಿ ಆಯ್ಕೆಯೇ ಕಗ್ಗಂಟು

author img

By

Published : Jul 28, 2022, 5:00 PM IST

ವಿಧಾನ ಸಭೆಯಿಂದ ವಿಧಾನ ಪರಿಷತ್​​ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಹುತೇಕ ಆಯ್ಕೆಯಾಗಿ ಕಚೇರಿಗೆ ಕರೆಸಿಕೊಂಡಿದ್ದ ಸಿ. ಮಂಜುಳಾ ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್ ಮಿಸ್ ಆಗಿತ್ತು. ಹಾಗಾಗಿ ಅವರು ಈಗ ಮತ್ತೊಮ್ಮೆ ಪ್ರಯತ್ನ ನಡೆಸಿದ್ದು, ಸಂಘ ಪರಿವಾರದ ಮೂಲಕ ಟಿಕೆಟ್ ಗಿಟ್ಟಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಇವರ ಜೊತೆ ಬಿಜೆಪಿ ನಾಯಕಿ ಭಾರತಿ ಮುದ್ಗುಂ, ವಿಜಯೇಂದ್ರ ಆಪ್ತ ಜಗದೀಶ್ ಹಿರೇಮನಿ, ಬಿಜೆಪಿ ಮಾಜಿ ವಕ್ತಾರ ಎಸ್ ಪ್ರಕಾಶ್ ಕೂಡ ಟಿಕೆಟ್ ರೇಸ್​ನಲ್ಲಿದ್ದಾರೆ.

ಪರಿಷತ್​​ ಚುನಾವಣೆ
ಪರಿಷತ್​​ ಚುನಾವಣೆ

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್​ನ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಬಿಜೆಪಿಯಲ್ಲಿ ಅಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ. ಆ.11 ರಂದು ಚುನಾವಣೆ ನಡೆಯಲಿದ್ದು, ಆ.1 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ನಾಮಪತ್ರ ಸಲ್ಲಿಕೆಗೆ ಕೇವಲ ನಾಲ್ಕು ದಿನ ಮಾತ್ರ ಬಾಕಿ ಇದ್ದು, ಇನ್ನೆರಡು ದಿನದಲ್ಲಿ ಅಭ್ಯರ್ಥಿಯನ್ನು ಅಂತಿಮಗೊಳಿಸಬೇಕಿದೆ. ವಿಧಾನಸಭೆಯಲ್ಲಿ ಸ್ಪಷ್ಟ ಬಹುಮತ ಹೊಂದಿರುವ ಬಿಜೆಪಿಗೆ ಈ ಸ್ಥಾನ ಅನಾಯಾಸವಾಗಿ ದಕ್ಕಲಿದ್ದು, ಬಹುತೇಕ ಅವಿರೋಧ ಆಯ್ಕೆ ನಡೆಯಲಿದೆ. ಅದರೆ ಅಭ್ಯರ್ಥಿ ಆಯ್ಕೆಯೇ ಬಿಜೆಪಿಗೆ ಕಗ್ಗಂಟಾಗಿದೆ.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್​​ಗೆ ನಡೆದ ಚುನಾವಣೆಯಲ್ಲಿ ಬೆಳಗಾವಿ ದ್ವಿಸದಸ್ಯ ಕ್ಷೇತ್ರದಲ್ಲಿ ಗೆಲ್ಲುವ ಎಲ್ಲಾ ಸಾಧ್ಯತೆಗಳಿದ್ದರೂ ಅಧಿಕೃತ ಅಭ್ಯರ್ಥಿಯಾಗಿದ್ದ ಮಹಾಂತೇಶ ಕವಟಗಿಮಠ ಪರಾಜಿತಗೊಂಡಿದ್ದು, ಇದಕ್ಕೆ ಪಕ್ಷದಲ್ಲಿನ ಆಂತರಿಕ ಸಮಸ್ಯೆ ಕಾರಣ ಎನ್ನುವುದು ಸ್ಪಷ್ಟವಾಗಿತ್ತು. ಇದನ್ನೇ ಮುಂದಿಟ್ಟು ಅವರು ಈಗ ಮತ್ತೆ ಪರಿಷತ್ ಪ್ರವೇಶಕ್ಕೆ ಯತ್ನಿಸುತ್ತಿದ್ದಾರೆ. ಇದರ ಜೊತೆಗೆ ಶಿಕ್ಷಕರ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಯಡಿಯೂರಪ್ಪ ಅವರ ಆಪ್ತ ಮೋಹನ್ ಲಿಂಬಿಕಾಯಿಗೆ ಕೊನೆ ಕ್ಷಣದಲ್ಲಿ ಟಿಕೆಟ್‌ ಕೈತಪ್ಪಿತ್ತು. ಬಸವರಾಜ ಹೊರಟ್ಟಿ ಬಿಜೆಪಿ ಸೇರಿದ್ದರಿಂದ ಅವರಿಗೆ ಕ್ಷೇತ್ರ ಬಿಟ್ಟುಕೊಡಬೇಕಾಯಿತು. ಹಾಗಾಗಿ ಅವರು ಈ ಪರಿಷತ್‌ ಟಿಕೆಟ್​​ಗೆ ಯತ್ನಿಸುತ್ತಿದ್ದು, ಯಡಿಯೂರಪ್ಪ ಮೂಲಕ ಒತ್ತಡ ಹಾಕಿಸುತ್ತಿದ್ದಾರೆ.

ಇತ್ತೀಚೆಗೆ ವಿಧಾನ ಸಭೆಯಿಂದ ವಿಧಾನ ಪರಿಷತ್​​ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಹುತೇಕ ಆಯ್ಕೆಯಾಗಿ ಕಚೇರಿಗೆ ಕರೆಸಿಕೊಂಡಿದ್ದ ಸಿ. ಮಂಜುಳಾ ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್ ಮಿಸ್ ಆಗಿತ್ತು. ಹಾಗಾಗಿ ಅವರು ಈಗ ಮತ್ತೊಮ್ಮೆ ಪ್ರಯತ್ನ ನಡೆಸಿದ್ದು, ಸಂಘ ಪರಿವಾರದ ಮೂಲಕ ಟಿಕೆಟ್ ಗಿಟ್ಟಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಇವರ ಜೊತೆ ಬಿಜೆಪಿ ನಾಯಕಿ ಭಾರತಿ ಮುದ್ಗುಂ, ವಿಜಯೇಂದ್ರ ಆಪ್ತ ಜಗದೀಶ್ ಹಿರೇಮನಿ, ಬಿಜೆಪಿ ಮಾಜಿ ವಕ್ತಾರ ಎಸ್ ಪ್ರಕಾಶ್ ಕೂಡ ಟಿಕೆಟ್ ರೇಸ್​ನಲ್ಲಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಸೋಮವಾರ ಕಡೆಯ ದಿನವಾಗಿದ್ದು, ಅಗತ್ಯ ದಾಖಲಾತಿಗಳನ್ನು ಸಿದ್ಧಪಡಿಸಿಕೊಳ್ಳಲು ಇನ್ನೆರಡು ದಿನ ಮಾತ್ರ ಬಾಕಿ ಇದೆ. ಸದ್ಯ ಬಿಜೆಪಿ ನಾಯಕರು ಸರ್ಕಾರದ ವರ್ಷದ ಸಾಧನಾ ಸಮಾವೇಶದಲ್ಲಿ ತೊಡಗಿದ್ದರಿಂದ ಕೋರ್ ಕಮಿಟಿ ಸಭೆ ನಡೆಸಿ ಅಭ್ಯರ್ಥಿ ಆಯ್ಕೆ ಮಾಡಿರಲಿಲ್ಲ. ಈಗ ಸಮಾವೇಶ ರದ್ದುಗೊಂಡಿದೆ. ನಾಳೆ ಸಭೆ ನಡೆಸಿ ಅಭ್ಯರ್ಥಿ ಆಯ್ಕೆ ಮಾಡಿ ಹೈಕಮಾಂಡ್​​ಗೆ ಕಳುಹಿಸಿ, ಶನಿವಾರ ಹೆಸರನ್ನು ಹೈಕಮಾಂಡ್ ಪ್ರಕಟಿಸಲಿದೆ ಎನ್ನಲಾಗಿದೆ. ರಾಜ್ಯ ಬಿಜೆಪಿ ಶಿಫಾರಸು ಬಿಟ್ಟು ಅಚ್ಚರಿ ಆಯ್ಕೆಯಾಗಿ ಬೇರೆ ಹೆಸರನ್ನು ಕೂಡ ಬಿಜೆಪಿ ಪ್ರಕಟಿಸಬಹುದು ಎನ್ನುವ ಮಾತುಗಳೂ ಬಿಜೆಪಿಯಲ್ಲಿ ಕೇಳಿ ಬರುತ್ತಿವೆ.

(ಇದನ್ನೂ ಓದಿ: ಸಿಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ದಿನಾಂಕ ಪ್ರಕಟ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.