ETV Bharat / city

Council Election Result: ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರಕ್ಕೆ ಕ್ಷಣಗಣನೆ

author img

By

Published : Dec 14, 2021, 10:00 AM IST

ರಾಜ್ಯದಲ್ಲಿ ವಿಧಾನ ಪರಿಷತ್​ ಚುನಾವಣೆ ಮತ ಎಣಿಕೆ ಕಾರ್ಯ ಪ್ರಾರಂಭವಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸ್ಟ್ರಾಂಗ್​​ ರೂಮ್​ ತೆರೆಯಲಾಯಿತು. ಏಜೆಂಟರು, ಚುನಾವಣಾ ಸಿಬ್ಬಂದಿ ಮತ ಎಣಿಕೆ ಮಾಡುತ್ತಿದ್ದಾರೆ. ಪ್ರತಿ ಮತ ಎಣಿಕೆ ಕೇಂದ್ರದ ಬಳಿ ಪೊಲೀಸ್​ ಬಿಗಿ ಬಂದೋಬಸ್ತ್​​ ಮಾಡಲಾಗಿದೆ.

mlc-election-vote-counting-started
ವಿಧಾನ ಪರಿಷತ್​​ ಮತ ಎಣಿಕೆ

ಬೆಂಗಳೂರು : ನಗರದ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ, ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯ ನಗರದ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಆರಂಭಗೊಂಡಿದೆ. ಬೆಳಗ್ಗೆ 7.30 ಕ್ಕೆ ಅಭ್ಯರ್ಥಿಗಳ ಹಾಗೂ ಚುನಾವಣಾ ವೀಕ್ಷಕರ ಸಮಕ್ಷಮದಲ್ಲಿ ಭದ್ರತಾ ಕೊಠಡಿಯನ್ನು ತೆರೆಯಲಾಯಿತು.

ಮತ ಎಣಿಕಾ ಕೊಠಡಿಯಲ್ಲಿ ಒಟ್ಟು ಏಳು ಟೇಬಲ್ ಗಳನ್ನು ಜೋಡಿಸಿ, ಪ್ರತಿ ಟೇಬಲ್ ಗೆ ಇಬ್ಬರು ಚುನಾವಣಾ ಸಿಬ್ಬಂದಿಯನ್ನು ನಿಯೋಜಿಸಿದ್ದು, ಅಭ್ಯರ್ಥಿ ಪರವಾಗಿ ಒಬ್ಬ ಏಜೆಂಟ್ ಗೆ ಅವಕಾಶ ಕಲ್ಪಿಸಿ ಮತ ಎಣಿಕೆ ಆರಂಭಿಸಲಾಗಿದೆ‌. 8 ಗಂಟೆಗೆ ಮತಪೆಟ್ಟಿಗೆಯಿಂದ ಎಲ್ಲಾ ಮತಪತ್ರಗಳನ್ನು ಹೊರತೆಗೆದು ವೀಕ್ಷಕರ ಹಾಗೂ ಏಜೆಂಟರ ಮುಂದೆಯೇ 25 ಕಟ್ಟುಗಳಂತೆ ಬಂಡಲ್ ಮಾಡಿ ಒಂದು ದೊಡ್ಡ ಡ್ರಮ್ ಒಳಗೆ ಹಾಕಿ ಕಳುಹಿಸಲಾಯಿತು. ಚುನಾವಣಾ ಕಣದಲ್ಲಿ ಸ್ಪರ್ಧಿಸಿದ್ದ ನಾಲ್ಕು ಅಭ್ಯರ್ಥಿಗಳಿಗೆ ಸೇರಿ ಒಟ್ಟು 2070 ಮತ ಚಲಾವಣೆಯಾಗಿದ್ದು, ಪ್ರತಿ ಟೇಬಲ್ ಗೆ ತಲಾ 300 ಮತಪತ್ರಗಳನ್ನು ಎಣಿಕೆಗೆ ಹಂಚಿಕೆ ಮಾಡಲಾಯಿತು.

ನಂತರ ಸಿಂಧು ಮತ್ತು ಅಸಿಂಧು ಮತಪತ್ರಗಳನ್ನು ಬೇರ್ಪಡಿಸಿ, ಸಿಂಧುವಾದ ಮತಪತ್ರಗಳನ್ನು ಮೊದಲ ಆದ್ಯತೆಗಾಗಿ ಎಣಿಕೆ ಪ್ರಾರಂಭಿಸಲಾಗಿದೆ. ಮೊದಲ ಸುತ್ತಿನ ನಂತರ ಅತಿ ಹೆಚ್ಚು ಮತಗಳನ್ನು ಪಡೆದಿರುವ ಅಭ್ಯರ್ಥಿಯು ಕನಿಷ್ಠ 1036 ಮತಗಳನ್ನು ಪಡೆಯದೇ ಇದ್ದ ಪಕ್ಷದಲ್ಲಿ ಎರಡನೇ ಸುತ್ತಿನ ಎಣಿಕೆಗೆ ಅತ್ಯಂತ ಕನಿಷ್ಠ ಮತಗಳನ್ನು ಪಡೆದ ಅಭ್ಯರ್ಥಿಯ ಮತಗಳನ್ನು ತೆಗೆದು ಎರಡನೇ ಆದ್ಯತೆಗಾಗಿ ಇತರೆ ಅಭ್ಯರ್ಥಿಗಳ ಟ್ರೇಗೆ ಹಂಚಲಾಗುವುದು. ಹೀಗೆ ಗರಿಷ್ಠ ಮತಸಂಖ್ಯೆ ಓರ್ವ ಅಭ್ಯರ್ಥಿಗೆ ಎಣಿಕೆಯಾಗುವವರೆಗೂ ಮತ ಎಣಿಕೆ ನಡೆಸಲಾಗುವುದು. ಹಾಗಾಗಿ ಫಲಿತಾಂಶ ವಿಳಂಬವಾಗುವ ಸಾಧ್ಯತೆ ಇದೆ.ಬಿಜೆಪಿಯಿಂದ ಗೋಪಿನಾಥರೆಡ್ಡಿ, ಕಾಂಗ್ರೆಸ್ ನಿಂದ ಯೂಸುಫ್ ಷರೀಫ್ (ಕೆಜಿಎಫ್ ಬಾಬು) ನಡುವೆ ನೇರ ಪೈಪೋಟಿ ಇದೆ ಎನ್ನಲಾಗುತ್ತಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತ ಎಣಿಕೆ ಕಾರ್ಯ ಪ್ರಾರಂಭ

ಚುನಾವಣಾ ವೀಕ್ಷಕರರಾದ ಶಿವಯೋಗಿ ಕಳಸದ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ರಾಮನಗರ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ವಿವಿಧ ಪಕ್ಷಗಳ ಏಜೆಂಟರುಗಳು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ಮತಪೆಟ್ಟಿಗೆಗಳನ್ನು ಇರಿಸಲಾಗಿದೆ. ಸ್ಟ್ರಾಂಗ್ ರೂಂ ತೆರೆಯಲಾಗಿದ್ದು, ದೇವನಹಳ್ಳಿ ಪಟ್ಟಣದ ಇಂಟರ್ ನ್ಯಾಷನಲ್ ಸ್ಕೂಲ್ ಅವರಣದಲ್ಲಿ ಪ್ರಾರಂಭವಾಗಿದೆ.

ಮತ ಎಣಿಕೆ ಕಾರ್ಯಕ್ಕಾಗಿ 14 ಟೇಬಲ್ ಗಳನ್ನು ಹಾಕಲಾಗಿದೆ. ಪ್ರತಿ ಟೇಬಲ್‌ಗೆ ಇಬ್ಬರು ಸಿಬ್ಬಂದಿಗಳಂತೆ ಒಟ್ಟು 28 ಸಿಬ್ಬಂದಿ ಮತ ಎಣಿಕೆ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ. ಮತ ಎಣಿಕೆ ಕೇಂದ್ರದ ಸುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಎ.ರವಿ, ಜೆಡಿಎಸ್ ಪಕ್ಷದಿಂದ ರಮೇಶ್ ಗೌಡ, ಮತ್ತು ಬಿಜೆಪಿ ಪಕ್ಷದಿಂದ ಬಿ.ಸಿ. ನಾರಾಯಣಸ್ವಾಮಿ ಚುನಾವಣಾ ಕಣದಲ್ಲಿದ್ದಾರೆ.

ಶಿವಮೊಗ್ಗ ವಿಧಾನ ಪರಿಷತ್ ಚುನಾವಣಾ ಮತ ಎಣಿಕೆ ಪ್ರಾರಂಭ

ವಿದ್ಯಾನಗರದಲ್ಲಿರುವ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಪ್ರಾರಂಭವಾಗಿದೆ. ಒಟ್ಟು 365 ಮತ ಪೆಟ್ಟಿಗೆಗಳಿವೆ. 14 ಟೇಬಲ್​ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಮಧ್ಯಾಹ್ನ ಎರಡು ಗಂಟೆಗೆ ಅಂತಿಮ ಫಲಿತಾಂಶ ಬರಲಿದೆ.

ಕಲಬುರಗಿಯಲ್ಲಿ ಪರಿಷತ್​ ಮತ ಎಣಿಕೆ

ರಾಜ್ಯ ವಿಧಾನ ಪರಿಷತ್ ಚುನಾವಣೆ ಕಲಬುರಗಿ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಅರಂಭವಾಗಿದೆ. ನಗರದ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಭಾಸ್ಕರ್ ಹಾಲ್ ನಲ್ಲಿ ಮತ ಎಣಿಕೆ ಕಾರ್ಯ ನಡೆದಿದೆ. ಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾ, ಚುನಾವಣಾ ವೀಕ್ಷಕ ಡಾ.ಪಿ‌ಸಿ.ಜಾಫರ ಹಾಗೂ ಅಭ್ಯರ್ಥಿಗಳ ಸಮಕ್ಷಮ ಸ್ಟ್ರಾಂಗ್ ರೂಮ್ ತೆರೆಯಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.