ETV Bharat / city

ಮೋದಿ ನಾಯಕತ್ವದ ಬಿಜೆಪಿ ಅಲೆ ದೇಶಾದ್ಯಂತ ದೊಡ್ಡ ಪ್ರಮಾಣದಲ್ಲಿ ಬೀಸುತ್ತಿದೆ: ಪರಿಷತ್ ಸದಸ್ಯ ನಾರಾಯಣಸ್ವಾಮಿ

ದೇಶಾದ್ಯಂತ ಬಿಜೆಪಿಯ ಅಲೆ ಬಹಳ ದೊಡ್ಡ ಪ್ರಮಾಣದಲ್ಲಿ ಬೀಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ, ಗೃಹ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಇಡೀ ದೇಶವನ್ನು ಕೇಸರಿಮಯ ಆಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ನಾರಾಯಣಸ್ವಾಮಿ ಹೇಳಿದರು.

mlc-narayanaswamy-talk-about-graduate-field-election
ಪರಿಷತ್ ಸದಸ್ಯ ನಾರಾಯಣಸ್ವಾಮಿ
author img

By

Published : Nov 11, 2020, 10:35 PM IST

ಬೆಂಗಳೂರು: ಪಕ್ಷದಿಂದ ಕೈತಪ್ಪಿ ಹೋಗಿದ್ದ ಕ್ಷೇತ್ರ ಮತ್ತೆ ಬಿಜೆಪಿಗೆ ಲಭಿಸಿದೆ ಎಂದು ವಿಧಾನಪರಿಷತ್ ಸದಸ್ಯ ನಾರಾಯಣಸ್ವಾಮಿ ಸಂತಸ ವ್ಯಕ್ತಪಡಿಸಿದರು.

ಮಾಧ್ಯಮಗಳ ಜತೆ ಮಾತನಾಡಿದ ಪರಿಷತ್ ಸದಸ್ಯ ನಾರಾಯಣಸ್ವಾಮಿ

ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಿದಾನಂದ ಎಂ. ಗೌಡ ಗೆಲುವಿನ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೇಶಾದ್ಯಂತ ನಡೆಯುತ್ತಿರುವ ಚುನಾವಣೆಗಳಲ್ಲಿ ಬಿಜೆಪಿ ಜಯಗಳಿಸುತ್ತಿದೆ. ಆಗ್ನೇಯ ಪದವೀಧರ ಕ್ಷೇತ್ರ ಬಿಜೆಪಿ ಪ್ರಾಬಲ್ಯವಿರುವ ಕ್ಷೇತ್ರವಾಗಿತ್ತು. ಕೆಲ ಕಾರಣಗಳಿಂದ ಈ ಹಿಂದಿನ ಚುನಾವಣೆಗಳಲ್ಲಿ ಬಿಜೆಪಿಯಿಂದ ಕೈ ತಪ್ಪಿ ಹೋಗಿತ್ತು. ಇಂದು ಮತ್ತೆ ಪಕ್ಷಕ್ಕೆ ಲಭಿಸಿದೆ ಎಂದರು.

ಬಿಜೆಪಿ ಪಕ್ಷ ಈ ಕ್ಷೇತ್ರದಲ್ಲಿ ಒಟ್ಟು 8 ಬಾರಿ ಗೆದ್ದಿದೆ. ನಾನಾ ಕಾರಣಗಳಿಂದ ಎರಡು ಬಾರಿ ಮಾತ್ರ ಜೆಡಿಎಸ್ ಪಾಲಾಗಿತ್ತು. ಇಲ್ಲಿ ಕಾಂಗ್ರೆಸ್ ಅಥವಾ ಪಕ್ಷೇತರ ಅಭ್ಯರ್ಥಿ ಗೆದ್ದ ಇತಿಹಾಸವೇ ಇಲ್ಲ. ನಮ್ಮ ಕ್ಷೇತ್ರವನ್ನು ನಾವು ಉಳಿಸಿಕೊಂಡಿದ್ದೇವೆ ಎಂದರು.

ಆಗ್ನೆಯ ಪದವೀಧರ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಗೆಲ್ಲಿಸುವ ಹಠ ತೊಟ್ಟಿದ್ದವರು ಸಿಎಂ ಯಡಿಯೂರಪ್ಪ. ಕ್ಷೇತ್ರವನ್ನು ಮರಳಿ ಪಡೆಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ನಮ್ಮ ಅಭ್ಯರ್ಥಿ ಚಿದಾನಂದ ಗೌಡ ಅವರು 7,032 ಮತಗಳ ಅಂತರದಲ್ಲಿ ಜಯ ಗಳಿಸಿದ್ದಾರೆ. ದೇಶಾದ್ಯಂತ ಬಿಜೆಪಿಯ ಅಲೆ ಬಹಳ ದೊಡ್ಡ ಪ್ರಮಾಣದಲ್ಲಿ ಬೀಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾಯಕತ್ವ, ಗೃಹ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಇಡೀ ದೇಶವನ್ನು ಕೇಸರಿಮಯ ಮಾಡಲಾಗುತ್ತಿದೆ. ಇದಕ್ಕೆ ಪೂರಕವಾಗಿ 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಹಾಗೂ ನಾಲ್ಕು ಕ್ಷೇತ್ರಗಳಿಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದೆ ಸಾಕ್ಷಿ ಎಂದರು.

ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿರುವ ಚಿದಾನಂದಗೌಡ ವಿಜೇತರಾಗಿದ್ದು, ಅಧಿಕೃತ ಘೋಷಣೆ ಬಾಕಿ ಇದೆ. ಇವರ ಗೆಲುವಿಗೆ ಶ್ರಮಿಸಿದ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ, ಪಕ್ಷದ ರಾಜ್ಯಾಧ್ಯಕ್ಷರು, ಐವರು ಸಚಿವರು, ಸಂಸದರು, ಶಾಸಕರು, ಐವರು ಜಿಲ್ಲಾಧ್ಯಕ್ಷರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ಶ್ರಮ ಗೆಲುವಿನ ಜತೆಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.