ETV Bharat / city

ನ.11 ರಿಂದ ಬೆಂ. ಗ್ರಾಮಾಂತರ ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ

author img

By

Published : Nov 8, 2019, 8:17 PM IST

ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಹಿನ್ನೆಲೆ ಗ್ರಾಮಾಂತರ ಜಿಲ್ಲೆಯಾದ್ಯಂತ ನ.11 ರಿಂದ ಕಟ್ಟುನಿಟ್ಟಿನ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಡಿಸಿ ಪಿ.ಎನ್. ರವೀಂದ್ರ ತಿಳಿಸಿದ್ದಾರೆ.

ಡಿಸಿ ಪಿ.ಎನ್.ರವೀಂದ್ರ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ನ.11 ರಿಂದ ಕಟ್ಟುನಿಟ್ಟಿನ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದ್ದಾರೆ.

ಚುನಾವಣಾ ವೇಳಾಪಟ್ಟಿಯಂತೆ ನ.11 ರಂದು ಚುನಾವಣಾ ಅಧಿಸೂಚನೆ ಹೊರಡಿಸಿ, ನಾಮಪತ್ರ ಸ್ವೀಕಾರ ಮಾಡಲಾಗುವುದು. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ನ.18 ಕೊನೆಯ ದಿನವಾಗಿದೆ. ನ.19 ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು ನ. 21 ಕೊನೆಯ ದಿನವಾಗಿದೆ. ಡಿ. 5 ರಂದು ಮತದಾನ ನಡೆಯಲಿದ್ದು, ಮಾದರಿ ನೀತಿ ಸಂಹಿತೆಯು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಜಾರಿಯಲ್ಲಿರುತ್ತದೆ ಎಂದು ಮಾಹಿತಿ ನೀಡಿದರು.

ಹೊಸಕೋಟೆ ಮಿನಿ ವಿಧಾನಸೌಧ ಕಟ್ಟಡದಲ್ಲಿರುವ ತಾಲ್ಲೂಕು ಕಚೇರಿಯು ಜಿಲ್ಲಾ ಚುನಾವಣಾಧಿಕಾರಿ ಕೇಂದ್ರ ಕಚೇರಿ ಕಾರ್ಯಸ್ಥಳವಾಗಿದೆ. ನಾಮಪತ್ರ ಇತ್ಯಾದಿ ಪ್ರಕ್ರಿಯೆಗಳು ಮಿನಿ ವಿಧಾನಸೌಧದ ಕಟ್ಟಡದಲ್ಲಿ ನಡೆಯಲಿದೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟಾರೆ 2,12,748 ಮತದಾರರಿದ್ದು, ಅದರಲ್ಲಿ 1,07,766 ಪುರುಷ ಮತದಾರರು, 1,04,956 ಮಹಿಳಾ ಮತದಾರರು ಹಾಗೂ 26 ಇತರೆ ಮತದಾರರಿದ್ದಾರೆ. ಬಿ.ಇ.ಎಲ್ ಸಂಸ್ಥೆಯ ಎಂ3 (ಒ3) ಮಾದರಿಯ ಇ.ವಿ.ಎಂ ಗಳನ್ನು ಬಳಸಿ ಉಪಚುನಾವಣೆ ನಡೆಸಲಾಗುವುದು ಎಂದು ಡಿಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Intro:KN_BNG_01_08_Dc_meeting_Ambarish_7203301
Slug: ಬೆಂ. ಗ್ರಾಮಾಂತರ ಜಿಲ್ಲೆಯಾದ್ಯಂತ ನ. 11 ರಿಂದ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ 178-ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಭಾರತ ಚುನಾವಣಾ ಆಯೋಗವು ಉಪ ಚುನಾವಣೆ ಘೋಷಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ನವೆಂಬರ್ 11 ರಿಂದ ಕಟ್ಟುನಿಟ್ಟಿನ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಡಿಸೆಂಬರ್ 5 ರಂದು ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ತಿಳಿಸಿದ್ದಾರೆ.

ಚುನಾವಣಾ ವೇಳಾಪಟ್ಟಿಯಂತೆ ನವೆಂಬರ್ 11 ರಂದು ಚುನಾವಣಾ ಅಧಿಸೂಚನೆ ಹೊರಡಿಸಿ, ನಾಮಪತ್ರ ಸ್ವೀಕಾರ ಮಾಡಲಾಗುವುದು. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ನವೆಂಬರ್ 18 ಕೊನೆಯ ದಿನವಾಗಿದೆ. ನವೆಂಬರ್ 19 ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು ನವೆಂಬರ್ 21 ರಂದು ಕೊನೆಯ ದಿನವಾಗಿದೆ. ಡಿಸೆಂಬರ್ 5 ಮತದಾನ ನಡೆಯಲಿದ್ದು, ಡಿಸೆಂಬರ್ 9 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಮಾದರಿ ನೀತಿ ಸಂಹಿತೆಯು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಜಾರಿಯಲ್ಲಿರುತ್ತದೆ ಎಂದು ಮಾಹಿತಿ ನೀಡಿದರು.

ಹೊಸಕೋಟೆ ಮಿನಿ ವಿಧಾನಸೌಧ ಕಟ್ಟಡದಲ್ಲಿರುವ ತಾಲ್ಲೂಕು ಕಚೇರಿಯು ಜಿಲ್ಲಾ ಚುನಾವಣಾಧಿಕಾರಿ ಕೇಂದ್ರ ಕಚೇರಿ ಕಾರ್ಯಸ್ಥಳವಾಗಿದೆ. ನಾಮಪತ್ರ ಇತ್ಯಾದಿ ಪ್ರಕ್ರಿಯೆಗಳು ಮಿನಿ ವಿಧಾನಸೌಧದ ಕಟ್ಟಡದಲ್ಲಿ ನಡೆಯಲಿದೆ ಎಂದರು.

01/01/2019 ರ ಅರ್ಹತಾ ದಿನಾಂಕದಂತೆ ಈಗಾಗಲೇ ಪ್ರಕಟಿಸಲಾಗಿರುವ ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಳಸಲಾದ ಮತದಾರರ ಪಟ್ಟಿಗಳ ಆಧಾರದ ಮೇಲೆ ಉಪ ಚುನಾವಣೆ ನಡೆಯಲಿದೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟಾರೆ 212748 ಮತದಾರರಿದ್ದು, ಅದರಲ್ಲಿ 107766 ಪುರುಷ ಮತದಾರರು, 104956 ಮಹಿಳಾ ಮತದಾರರು ಹಾಗೂ 26 ಇತರೆ ಮತದಾರರಿದ್ದಾರೆ.. ಬಿ.ಇ.ಎಲ್ ಸಂಸ್ಥೆಯ ಎಂ3 (ಒ3)ಮಾದರಿಯ ಇ.ವಿ.ಎಂ ಗಳನ್ನು ಬಳಸಿ ಉಪ ಚುನಾವಣೆ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Body:NoConclusion:No
ETV Bharat Logo

Copyright © 2024 Ushodaya Enterprises Pvt. Ltd., All Rights Reserved.