ETV Bharat / city

ಪ್ರಮುಖ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಹೆಚ್ಚಿನ ಹಣ: ಸಿಎಂ ಯಡಿಯೂರಪ್ಪ ಭರವಸೆ - Development of major tourist destinations

ಕರ್ನಾಟಕದಲ್ಲಿರುವ ಎಲ್ಲ ಪ್ರವಾಸಿ ತಾಣಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಪಣ ತೊಟ್ಟಿದೆ. ಅದಕ್ಕಾಗಿ ಹೆಚ್ಚಿನ ಅನುದಾನ ಒದಗಿಸಲಾಗುತ್ತದೆ ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ಸದನದಲ್ಲಿ ಇಂದು ಭರವಸೆ ನೀಡಿದರು.

more-money-for-the-development-of-major-tourist-destinations
ಸಿಎಂ ಯಡಿಯೂರಪ್ಪ ಭರವಸೆ
author img

By

Published : Mar 18, 2020, 7:40 PM IST

Updated : Mar 18, 2020, 9:44 PM IST

ಬೆಂಗಳೂರು: ರಾಜ್ಯದ ಪ್ರಮುಖ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಹೆಚ್ಚಿನ ಹಣ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿ ತಿಳಿಸಿದರು.

ಪ್ರಶ್ನೋತ್ತರ ಸಮಯದಲ್ಲಿ ಶಾಸಕ ನಿರಂಜನ್‍ ಕುಮಾರ್ ಪ್ರಶ್ನೆಗೆ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಉತ್ತರಿಸುತ್ತಿದ್ದ ವೇಳೆ ಮಧ್ಯ ಪ್ರವೇಶಿಸಿದ ಸಿಎಂ, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ. ಆ ಸಮಿತಿ ಮೂಲಕ ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಲಾಗುತ್ತಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಉತ್ತರ ನೀಡಿದ ಸಚಿವ ಸಿ.ಟಿ.ರವಿ, ಕರ್ನಾಟಕ ಪ್ರವಾಸೋದ್ಯಮ ನೀತಿಯಂತೆ 2015ರಿಂದ 2020ರ ಅವಧಿಯಲ್ಲಿ 319 ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ. ಪ್ರವಾಸಿ ತಾಣಗಳನ್ನು ಗುರುತಿಸುವಾಗ, ಬಿಟ್ಟು ಹೋಗಿರುವ ಭರಚುಕ್ಕಿಯಂತಹ ತಾಣಗಳನ್ನು ಸೇರ್ಪಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಪ್ರವಾಸಿ ತಾಣಗಳ ಅಭಿವೃದ್ಧಿ ಕುರಿತು ಸದನದಲ್ಲಿ ಚರ್ಚೆ

ಪ್ರವಾಸಿ ತಾಣಗಳ ಪೈಕಿ ಚಾಮರಾಜನಗರದ ಕನಕಗಿರಿ, ಚಿಕ್ಕಹೊಳೆ ಜಲಾಶಯ, ಕರಿವರದರಾಜ ಬೆಟ್ಟ, ಗುಂಡ್ಲುಪೇಟೆ ತಾಲೂಕಿನ ಬಂಡಿಪುರ, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಕೊಳ್ಳೇಗಾಲ ತಾಲೂಕಿನ ಹೊಗೇನಕಲ್ ಜಲಪಾತ, ಬಿಳಿಗಿರಿ ರಂಗನಬೆಟ್ಟ, ಮಲೆಮಹದೇಶ್ವರ ಬೆಟ್ಟ ಮುಂತಾದ ಪ್ರವಾಸಿ ತಾಣಗಳ ಅಭಿವೃದ್ಧಿಗೆ 17.33 ಕೋಟಿ ರೂ. ಮಂಜೂರಾಗಿದೆ ಎಂದರು.

ಪ್ರವಾಸೋದ್ಯಮ ಇಲಾಖೆಗೆ ವಾರ್ಷಿಕ 20 ಕೋಟಿ ರೂ. ಅನುದಾನ ಸೇರಿದೆ. ಲಭ್ಯವಿರುವ ಅನುದಾನದಡಿ ಸಾಧ್ಯವಾದಷ್ಟು ಮೂಲಸೌಕರ್ಯ ಕಲ್ಪಿಸಲಾಗುವುದು. ಹೆಚ್ಚುವರಿ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಪ್ರವಾಸಿ ತಾಣಗಳು ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡಲಾಗುವುದು ಎಂದು ಸಚಿವ ಸಿ.ಟಿ.ರವಿ ಹೇಳಿದರು.

Last Updated : Mar 18, 2020, 9:44 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.