ಬೆಂಗಳೂರು: ಇತ್ತೀಚೆಗೆ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಚುನಾಯಿತರಾದ ಈರಣ್ಣ ಕಡಾಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ಗೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಇಂದು ಮಾಡಲಾಯಿತು.
ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ರವಿ ಶಿವಬಸಪ್ಪ ಪಡಸಲಗಿ ಎಂಬುವರು ಸಲ್ಲಿಸಿರುವ ಅರ್ಜಿಯನ್ನು ಇಂದು ನ್ಯಾಯಮೂರ್ತಿ ಕೆ. ಎಸ್. ಮುದ್ಗಲ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸಂಸದ ಈರಣ್ಣ ಕಡಾಡಿ ಹಾಗೂ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ನವೆಂಬರ್ 4ಕ್ಕೆ ಮುಂದೂಡಿತು.
ಅರ್ಜಿಯಲ್ಲಿ ಈರಣ್ಣ ಕಡಾಡಿ ಅವರ ಆಯ್ಕೆ ಕಾನೂನು ಬದ್ಧವಾಗಿಲ್ಲ, ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಲಾಗಿದೆ.