ETV Bharat / city

17 ಜನರಿಂದ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ, ಪಕ್ಷದ ಕಾರ್ಯಕರ್ತರ ಶ್ರಮದಿಂದ ಬಂದಿದೆ: ರೇಣುಕಾಚಾರ್ಯ - bjp government developments

ಲಕ್ಷಾಂತರ ಕಾರ್ಯಕರ್ತರ ಶ್ರಮದಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ - ಜೆಡಿಎಸ್ ತೊರೆದು ಬಂದ 17 ಜನರಿಂದ ಸರ್ಕಾರ ಬಂದಿದೆ ಎಂಬುದು ಸುಳ್ಳು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ರೇಣುಕಾಚಾರ್ಯ
ರೇಣುಕಾಚಾರ್ಯ
author img

By

Published : Nov 25, 2020, 2:02 PM IST

ಬೆಂಗಳೂರು: ಕಾಂಗ್ರೆಸ್ - ಜೆಡಿಎಸ್ ತೊರೆದು ಬಂದ 17 ಜನರಿಂದ ಬಿಜೆಪಿ ಸರ್ಕಾರ ಬಂದಿದೆ ಎಂಬುದು ಸುಳ್ಳು, ಪಕ್ಷದ ಕಾರ್ಯಕರ್ತರ ಶ್ರಮದಿಂದ ರಾಜ್ಯದಲ್ಲಿ ಸರ್ಕಾರ ಬಂದಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, 105 ಶಾಸಕರು ಇಲ್ಲದಿದ್ದರೆ ಸರ್ಕಾರ ಹೇಗೆ ಆಗುತ್ತಿತ್ತು?. ಪಕ್ಷದ ಕಾರ್ಯಕರ್ತರ ತಪಸ್ಸಿನಿಂದಾಗಿ 105 ಶಾಸಕರು ಗೆದ್ದಿದ್ದರು. ಮೊದಲು 105 ಶಾಸಕರು, ಆಮೇಲೆ ಉಳಿದವರು ಎಂದು ವಲಸಿಗರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು. ಯಾರೋ ಒಬ್ಬರಿಂದ ಸರ್ಕಾರ ಬಂದಿದೆ ಎಂದು ಹೇಳಲಾಗದು. ಲಕ್ಷಾಂತರ ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದರು.

ಮೊದಲು 105 ಜನ ಆಮೇಲೆ ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಬೇಸತ್ತು 17 ಮಂದಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನನ್ನಿಂದಲೇ ಸರ್ಕಾರ ಬಂದಿದೆ ಅಂತಾ ಯಾರು ಹೇಳುತ್ತಾರೋ ಅವರು ಇದನ್ನು ಅರ್ಥ ಮಾಡಿಕೊಳ್ಳಬೇಕು. ನಮ್ಮ ಪಕ್ಷದ ನಾಯಕರು, ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಕಾರ್ಯಕರ್ತರ ಶ್ರಮ ತ್ಯಾಗದಿಂದ ಪಕ್ಷ ಗಟ್ಟಿಗೊಂಡಿದೆ. ಬಿಜೆಪಿ ಸೇರಿರುವ 17 ಶಾಸಕರ ಕೊಡುಗೆಯನ್ನು ನಾನು ಗೌರವಿಸುತ್ತೇನೆ. ಆದರೆ 105 ಶಾಸಕರು ನಾವು ಗೆದ್ದಿರಲಿಲ್ಲ ಎಂದರೆ ಈ ಸರ್ಕಾರ ಹೇಗೆ ಬರುತ್ತಿತ್ತು. ಇದನ್ನು ಯಾರು ಮರೆಯಬಾರದು ಎಂದು ವಾಗ್ದಾಳಿ ನಡೆಸಿದರು.

ಮಾಹಿತಿ ಇಲ್ಲ:ಸಚಿವ ಸಂಪುಟದ ಬಗ್ಗೆ ನನಗೆ ಮಾಹಿತಿ ಇಲ್ಲ. ಮುಖ್ಯಮಂತ್ರಿಗಳು ದೆಹಲಿಯಲ್ಲಿ ವರಿಷ್ಠರ ಜೊತೆ ಚರ್ಚೆ ಮಾಡಿ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ‌ ಕೊಟ್ಟರೆ ತಪ್ಪೇನು ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಅವರ ವೈಯಕ್ತಿಕ ಅಭಿಪ್ರಾಯ. ಅಂತಿಮವಾಗಿ ಪಕ್ಷದ ತೀರ್ಮಾನ ಮುಖ್ಯ. ನಾವೂ ಸಹ ನಾಯಕರಿಗೆ ಕೆಲವೊಂದು ಸಲಹೆಗಳನ್ನು ಕೊಟ್ಟಿದ್ದೇವೆ ಎಂದು ಹೇಳಿದರು.

ಜನರಿಂದ ನೇರವಾಗಿ ಆಯ್ಕೆಯಾದವರಿಗೆ ಸಚಿವ ಸ್ಥಾನ ಕೊಡುವುದು ಶಿಷ್ಟಾಚಾರ. ಪಕ್ಷ, ಸರ್ಕಾರಕ್ಕಿಂತ ಯಾರು ದೊಡ್ಡವರಲ್ಲ. ಇಂದು ಹತ್ತು ಜನ ಶಾಸಕರು ಒಟ್ಟಿಗೆ ಸೇರಿದ್ದೆವು. ನಮ್ಮ ಮನೆಯಲ್ಲಿ ಉಪಹಾರಕ್ಕೆ ಸೇರಿದ್ದೆವು. ನಾವೇನು ರೆಸಾರ್ಟ್, ಹೋಟೆಲ್ ನಲ್ಲಿ ಸಭೆ ನಡೆಸಿಲ್ಲ, ನಮ್ಮ ಮನೆಯಲ್ಲಿ ಚರ್ಚೆ ನಡೆಸಿದ್ದೇವೆ. ಆದಷ್ಟು ಬೇಗ ನಮ್ಮ ಅಭಿಪ್ರಾಯವನ್ನು ವರಿಷ್ಠರ ಗಮನಕ್ಕ ತರುತ್ತೇವೆ ಎಂದು ರೇಣುಕಾಚಾರ್ಯ ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.