ETV Bharat / city

ಅಭಿಷೇಕ್ ರಾಜಕೀಯ ಎಂಟ್ರಿ ವಿಚಾರ.. ಚುನಾವಣೆಗೆ 20 ತಿಂಗಳು ಇದೆ, ನೋಡೋಣ ಎಂದ ಸುಮಲತಾ - ಮಂಡ್ಯ ಗಣಿಗಾರಿಕೆ ವಿವಾದ

ಅಭಿಷೇಕ್ ಈಗ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸಿನಿಮಾ ಕಡೆ ಹೆಚ್ಚು ಗಮನಕೊಟ್ಟಿದ್ದಾರೆ. ವಿಧಾನಸಭೆ ಚುನಾವಣೆಗೆ 20 ತಿಂಗಳು ಇದೆ. ಚುನಾವಣೆ ಬಂದಾಗ ಅಭಿಮಾನಿಗಳು ಒತ್ತಾಯಿಸಿದರೆ ನೋಡೋಣ ಎಂದು ಅಭಿಷೇಕ್ ರಾಜಕೀಯ ಎಂಟ್ರಿ ಬಗ್ಗೆ ಸಂಸದೆ ಪ್ರತಿಕ್ರಿಯಿಸಿದರು.

ಸುಮಲತಾ
ಸುಮಲತಾ
author img

By

Published : Sep 4, 2021, 4:23 PM IST

ಬೆಂಗಳೂರು: ಮಂಡ್ಯ ಜಿಲ್ಲೆಯ ಅಕ್ರಮ ಗಣಿಗಾರಿಕೆ ಸಂಬಂಧ ಸಂಸದೆ ಸುಮಲತಾ ಅವರು ಗಣಿ ಸಚಿವ ಹಾಲಪ್ಪ ಆಚಾರ್ ಅವರನ್ನ ಭೇಟಿ ಮಾಡಿ ಚರ್ಚೆ ನಡೆಸಿದರು. ವಿಧಾನಸೌಧದಲ್ಲಿ ಸಚಿವ ಹಾಲಪ್ಪ ಆಚಾರ್ ಅವರನ್ನು ಭೇಟಿ ಮಾಡಿ, ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್ ಅಣೆಕಟ್ಟೆಗೆ ಆಪತ್ತು ಎದುರಾಗುವ ಸಂಬಂಧ ಸಮಾಲೋಚನೆ ನಡೆಸಿದರು. ಈ ವೇಳೆ, ಶಾಸಕಿ ಪೂರ್ಣಿಮಾ ಶ್ರೀನಿವಾಸ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಉಪಸ್ಥಿತರಿದ್ದರು.

ಸಚಿವರ ಭೇಟಿ ಬಳಿಕ ಮಾತನಾಡಿದ ಸಂಸದೆ ಸುಮಲತಾ, ಮಂಡ್ಯ ಜಿಲ್ಲೆಯ ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ಸಚಿವರ ಜೊತೆ ಚರ್ಚಿಸಿದೆ. ಸಚಿವರನ್ನೂ ಜಿಲ್ಲೆಗೆ ಭೇಟಿ ನೀಡುವಂತೆ ಮನವಿ ಮಾಡಿದ್ದೇನೆ. ಅವರೂ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಮಂಡ್ಯದಲ್ಲಿ ಗಣಿ ಟಾಸ್ಕ್ ಫೋರ್ಸ್ ಟೀಂ ಜೊತೆ ಪರಿಶೀಲನೆ ನಡೆದಿದೆ. ಬೇಬಿ ಬೆಟ್ಟ, ಕೆಆರ್​ಎಸ್ ಸಂಬಂಧ ಸಭೆ ನಡೆಸಲು ಸಮಯ ಕೇಳಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೋರಾಟದ ಮೊದಲ ಹೆಜ್ಜೆ ಆರಂಭವಾಗಿದೆ. ಇನ್ಮುಂದೆಯೂ ಕದ್ದು ಮುಚ್ಚಿ ಅಕ್ರಮ ಗಣಿಗಾರಿಕೆ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಅಭಿಷೇಕ್ ರಾಜಕೀಯ ಪ್ರವೇಶ ಬಗ್ಗೆ ನೋಡೋಣ:

ಅಭಿಷೇಕ್ ಅಂಬರೀಶ್ ರಾಜಕೀಯ ಪ್ರವೇಶ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅಭಿಷೇಕ್ ಈಗ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸಿನಿಮಾ ಕಡೆ ಹೆಚ್ಚು ಗಮನಕೊಟ್ಟಿದ್ದಾರೆ. ವಿಧಾನಸಭೆ ಚುನಾವಣೆಗೆ 20 ತಿಂಗಳು ಇದೆ. ಆಗ ನೋಡೋಣ, ಏನಾಗಲಿದೆಯೋ ಎಂದು ಸೂಚ್ಯವಾಗಿ ತಿಳಿಸಿದರು. ಅಭಿಮಾನಿಗಳಿಂದ ಒತ್ತಾಯ ಬಂದರೆ ನೋಡೋಣ. ಸದ್ಯಕ್ಕಂತೂ ಸಿನಿಮಾಗಳ ಕಡೆ ಗಮನಹರಿಸಿದ್ದಾರೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.