ETV Bharat / city

ಹೈಕೋರ್ಟ್​ನ ಮೂವರು ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ: ಆರೋಪಿಗೆ ಜಾಮೀನು ತಿರಸ್ಕರಿಸಿದ ಕೋರ್ಟ್

author img

By

Published : May 21, 2022, 10:51 PM IST

ಹಿಜಾಬ್​ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ್ದ ತಮಿಳುನಾಡಿದ ತೌಹೀದ್ ಜಮಾತ್ ಸಂಘಟನೆ ಮುಖ್ಯಸ್ಥ ರಹಮತ್ -ಉಲ್ಲಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ಕೋರ್ಟ್​ ಜಾಮೀನು ನೀಡಲು ನಿರಾಕರಿಸಿದೆ.

High Court
ಹೈಕೋರ್ಟ್

ಬೆಂಗಳೂರು: ಹಿಜಾಬ್ ಪ್ರಕರಣದ ತೀರ್ಪು ನೀಡಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬಹಿರಂಗ ಸಭೆಯಲ್ಲಿ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಗೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಪ್ರಕರಣದಲ್ಲಿ ಬಂಧಿತನಾಗಿರುವ ತಮಿಳುನಾಡಿದ ತೌಹೀದ್ ಜಮಾತ್ (ಟಿಎನ್​ಟಿಜೆ) ಸಂಘಟನೆ ಮುಖ್ಯಸ್ಥ ರಹಮತ್ -ಉಲ್ಲಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನಗರದ 67ನೇ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್ ಈ ಆದೇಶ ಮಾಡಿದೆ.

ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ್ದು ಗಂಭೀರ ಸ್ವರೂಪದ ಅಪರಾಧವಾಗಿದೆ. ಆರೋಪಿಗಳ ಕೃತ್ಯಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಹಲವು ಸಾಕ್ಷ್ಯಗಳನ್ನು ನ್ಯಾಯಾಲಯದ ಮುಂದಿಟ್ಟಿದೆ. ಈ ಹಂತದಲ್ಲಿ ಜಾಮೀನು ನೀಡಲಾಗದು ಎಂದು ಅಭಿಪ್ರಾಯಪಟ್ಟು ಆರೋಪಿಯ ಜಾಮೀನು ಅರ್ಜಿಯನ್ನು ನ್ಯಾಯಾಧೀಶ ವಿ. ಪ್ರಕಾಶ್ ತಿರಸ್ಕರಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರದ ಪರ ಬಿ.ಎಸ್ ಪಾಟೀಲ್ ವಾದ ಮಂಡಿಸಿದ್ದರು. ಶಾಲೆ - ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಸರ್ಕಾರ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶಿಸುವಂತೆ ಕೋರಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಪೀಠ, ವಿದ್ಯಾರ್ಥಿಗಳು ಸಮವಸ್ತ್ರ ಸಂಹಿತೆ ಪಾಲಿಸಬೇಕು ಎಂದು ತೀರ್ಪು ನೀಡಿತ್ತು.

ಈ ತೀರ್ಪು ನೀಡಿದ್ದ ಮೂವರು ನ್ಯಾಯಮೂರ್ತಿಗಳಿಗೆ ಟಿಎನ್​ಟಿಜೆ ಮುಸ್ಲಿಂ ಸಂಘಟನೆ ಮುಖಂಡ ಆರ್. ರಹಮತ್ - ಉಲ್ಲಾ ತಮಿಳುನಾಡಿನ ಮಧುರೈನಲ್ಲಿ ನಡೆದಿದ್ದ ಬಹಿರಂಗ ಸಮಾವೇಶದಲ್ಲಿ ಕೊಲೆ ಬೆದರಿಕೆ ಹಾಕಿದ್ದ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ತಮಿಳುನಾಡು ಹಾಗೂ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲಾಗಿದ್ದು, ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಇದನ್ನೂ ಓದಿ: ಸಾವರ್ಕರ್ ಜನ್ಮ ದಿನವೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ: ಸಚಿವ ಸುನೀಲ್ ಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.