ETV Bharat / city

ಬಕ್ರೀದ್ ಹಬ್ಬ-  ರಸ್ತೆ ಬದಿ ನಮಾಜ್ ಮಾಡಲು ಅವಕಾಶವಿಲ್ಲ: ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ - ಈದ್ಗಾ ಮೈದಾನದಲ್ಲಿ ಬಕ್ರೀದ್ ಪ್ರಾರ್ಥನೆಗೆ ಅವಕಾಶ

ಸುಪ್ರೀಂಕೋರ್ಟ್​ನ ಆದೇಶದಂತೆ ಈದ್ಗಾ ಮೈದಾನದಲ್ಲಿ ಬಕ್ರೀದ್ ಪ್ರಾರ್ಥನೆಗೆ ಯಾವುದೇ ಅಡ್ಡಿಯಿಲ್ಲ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

BBMP Commissioner
ತುಷಾರ್ ಗಿರಿನಾಥ್
author img

By

Published : Jul 6, 2022, 8:51 PM IST

ಬೆಂಗಳೂರು : ಜುಲೈ 10ಕ್ಕೆ ಬಕ್ರೀದ್ ಹಬ್ಬ ಆಚರಣೆ ಹಿನ್ನೆಲೆ ಸಂಚಾರ ದಟ್ಟಣೆ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡಲಾಗುವುದು. ಬಕ್ರೀದ್ ಹಬ್ಬದ ಹಿನ್ನೆಲೆ ರಾಜಧಾನಿಯ ರಸ್ತೆ ಬದಿಯಲ್ಲಿ ಮುಸ್ಲಿಮರು ನಮಾಜ್ ಮಾಡಲು ಅವಕಾಶ ಇಲ್ಲ. ಹಬ್ಬದ ಪ್ರಾರ್ಥನೆಗೆ ರಸ್ತೆ ಬಂದ್ ಮಾಡುವುದು. ಟ್ರಾಫಿಕ್ ಸಿಗ್ನಲ್​ನಲ್ಲಿ ಚಾಪೆ ಹಾಸುವುದಕ್ಕೆ ಅವಕಾಶ ಇಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟಪಡಿಸಿದ್ದಾರೆ.

ಈದ್ಗಾ ಮೈದಾನದಲ್ಲಿ ಬಕ್ರೀದ್ ಪ್ರಾರ್ಥನೆಗೆ ಅವಕಾಶ

ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಸಂಬಂಧ ಸದ್ಯಕ್ಕೆ ಈ ಸ್ಥಳದಲ್ಲಿ ತ್ಯಾಜ್ಯ ವಿಲೇವಾರಿ ಮಾಡುವುದಿಲ್ಲ. ಬಕ್ರೀದ್ ಹಬ್ಬದ ಹಿನ್ನೆಲೆ ಈ ಸ್ಥಳದಲ್ಲಿ ಜಾನುವಾರು ಮಾರಾಟ ಹೆಚ್ಚಾಗಿದೆ. ಇದರಿಂದ ತ್ಯಾಜ್ಯವು ಶೇಖರಣೆ ಆಗಿದ್ದು, ಸದ್ಯಕ್ಕೆ ಬಿಬಿಎಂಪಿ ತೆರವು ಮಾಡುವ ಕೆಲಸ ಮಾಡುವುದಿಲ್ಲ ಎಂದರು.

ಈದ್ಗಾ ಮೈದಾನದಲ್ಲಿ ಬಕ್ರೀದ್ ಪ್ರಾರ್ಥನೆಗೆ ಅವಕಾಶ: ಈದ್ಗಾ ಮೈದಾನದಲ್ಲಿ ಬಕ್ರೀದ್ ಪ್ರಾರ್ಥನೆಗೆ ಯಾವುದೇ ಅಡ್ಡಿಯಿಲ್ಲ. ಏಕೆಂದರೆ ಸುಪ್ರೀಂ ಕೋರ್ಟ್​ನಲ್ಲಿ ನಮಾಜ್​ಗೆ ಅನುಮತಿ ಇದೆ. ಹೀಗಾಗಿ ಮುಸ್ಲಿಮರ ಹಬ್ಬದ ಪ್ರಾರ್ಥನೆಗೆ ಅಡ್ಡಿಯಿಲ್ಲ‌. ಪ್ರತಿ ವರ್ಷದಂತೆ ಈ ಬಾರಿಯೂ ಪ್ರಾರ್ಥನೆಗೆ ಅವಕಾಶ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಭಿಕ್ಷಾಟನೆ: ನಗರದ ಟ್ರಾಫಿಕ್ ಸಿಗ್ನಲ್​ನಲ್ಲಿ ಭಿಕ್ಷಾಟನೆ ವಿಚಾರ ಕುರಿತು ಪ್ರತಿಕ್ರಿಯಿಸಿ, ಬಿಬಿಎಂಪಿಯಿಂದ ನಗರದ ಹಲವೆಡೆಯಿಂದ 720 ಜನರನ್ನು ಭಿಕ್ಷಾಟನೆಯಿಂದ ರಕ್ಷಣೆ ಮಾಡಲಾಗಿದೆ. ನಗರದಲ್ಲಿ ಭಿಕ್ಷಾಟನೆ ಜಾಲ ಭೇದಿಸಲು ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.

ಇದನ್ನೂ ಓದಿ : ಬೆಸ್ಕಾಂ ಅಧಿಕಾರಿಗಳಿಂದ ನೂರಾರು ಮರಗಳ ಮಾರಣ ಹೋಮ.. ಪರಿಸರ ಪ್ರೇಮಿಗಳಿಂದ ಶ್ರದ್ದಾಂಜಲಿ ಕಾರ್ಯಕ್ರಮ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.