ETV Bharat / city

ಅರುಣ್ ಸಿಂಗ್ ಭೇಟಿಯಾದ ಕಟೀಲ್: ಅಮಿತ್‌ ಶಾ ಆಗಮನಕ್ಕೂ ಮುನ್ನವೇ ಬಿ.ಎಲ್.ಸಂತೋಷ್ ಹಾಜರು - BJP President Nalin Kumar Kateel latest news

ಅಮಿತ್ ಶಾ ರಾಜ್ಯ ಭೇಟಿಗೂ ಒಂದು ದಿನ ಮೊದಲೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬೆಂಗಳೂರಿಗೆ ಆಗಮಿಸಿದ್ದು, ರಾಜ್ಯ ಪದಾಧಿಕಾರಿಗಳ ಜತೆ ಮಾತುಕತೆ ನಡೆಸಿ ಅಗತ್ಯ ಮಾಹಿತಿ ಸಂಗ್ರಹಿಸಿದ್ದಾರೆ.

Nalin Kumar Kateel meet Arun Singh
ನಳಿನ್ ಕುಮಾರ್ ಕಟೀಲ್, ಅರುಣ್ ಸಿಂಗ್
author img

By

Published : Apr 1, 2022, 11:36 AM IST

ಬೆಂಗಳೂರು: ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ಮಾಡಿ ಪಕ್ಷದ ಕೋರ್ ಕಮಿಟಿ ಸಭೆ ಕುರಿತು ಮಹತ್ವದ ಮಾತುಕತೆ ನಡೆಸಿದರು. ಕುಮಾರ ಕೃಪಾ ಅತಿಥಿ ಗೃಹಕ್ಕೆ ಆಗಮಿಸಿದ ಕಟೀಲ್ ಅರುಣ್ ಸಿಂಗ್ ಅವರನ್ನು ಭೇಟಿಯಾದರು. ಕಳೆದ ಎರಡು ದಿನಗಳಿಂದ ನಡೆದ ಸಭೆಗಳ ವಿಷಯ ಪ್ರಸ್ತಾಪಿಸಿ ಕೋರ್ ಕಮಿಟಿ ಸಭೆಗೆ ಮಾಡಿಕೊಂಡಿರುವ ಸಿದ್ದತೆಗಳ ಕುರಿತು ಮಾತುಕತೆ ನಡೆಸಿದರು.

Nalin Kumar Kateel
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ರಾಜ್ಯ ರಾಜಕೀಯದಲ್ಲಿ ಸದ್ಯ ಅವಧಿಪೂರ್ವ ಚುನಾವಣೆಯದ್ದೇ ಸದ್ದಾಗುತ್ತಿದ್ದು, ಈ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗದಂತೆ ಎಚ್ಚರಿಕೆ ವಹಿಸುವ ಕುರಿತು ಸಮಾಲೋಚನೆ ನಡೆಸಲಾಯಿತು. ಪಕ್ಷ ಮತ್ತು ಸರ್ಕಾರದ ನಡುವಿನ ಸಮನ್ವಯತೆ, ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕ ಕುರಿತ ವಿಷಯಗಳ ಕುರಿತು ಕೋರ್ ಕಮಿಟಿಯಲ್ಲಿ ಪ್ರಸ್ತಾಪವಾಗಲಿದ್ದು ಈ ಬಗ್ಗೆಯೂ ಸಮಾಲೋಚನೆ ನಡೆಸಲಾಯಿತು.

Arun Singh
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

ಅಮಿತ್ ಶಾ ರಾಜ್ಯ ಭೇಟಿಗೂ ಒಂದು ದಿನ ಮೊದಲೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬೆಂಗಳೂರಿಗೆ ಆಗಮಿಸಿದ್ದು,ರಾಜ್ಯ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಿ ಅಗತ್ಯ ಮಾಹಿತಿ ಸಂಗ್ರಹ ಮಾಡಿದ್ದಾರೆ. ರಾಜ್ಯ ವಿದ್ಯಮಾನಗಳ ಕುರಿತು ಆಂತರಿಕ ಅಭಿಪ್ರಾಯ ಸಂಗ್ರಹ ಮಾಡಿದ್ದು, ಪಕ್ಷ ಮತ್ತು ಸರ್ಕಾರದ ಬಗ್ಗೆ ಇರುವ ಸಾರ್ವಜನಿಕ ಅಭಿಪ್ರಾಯವನ್ನು ಅಮಿತ್ ಶಾಗೆ ನೀಡಲಿದ್ದಾರೆ.

BJP National Organization General Secretary BL Santosh
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್

ಮುಂಬರಲಿರುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಗೆಲುವಿಗೆ ಕಾರ್ಯತಂತ್ರ ರೂಪಿಸಲು ಈ ಅಂಶ ಬಹಳ ಮುಖ್ಯವಾಗಿದ್ದು, ಸಂತೋಷ್ ಕುಮಾರ್ ಕೂಡ ಕೋರ್ ಕಮಿಟಿ ಸಭೆಯಲ್ಲಿ ಹಾಜರಿದ್ದು, ಈ ವಿಷಯ ಪ್ರಸ್ತಾಪ ಮಾಡಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಅಮಿತ್‌ ಶಾ ರಾಜ್ಯ ಪ್ರವಾಸ: ಇಂದು ಮಹತ್ವದ ಕೋರ್‌ ಕಮಿಟಿ ಸಭೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.