ETV Bharat / city

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಕಟೀಲ್ ಪುನರುಚ್ಚಾರ - ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ

ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಸದ್ಯ ಬಿ.ಎಸ್. ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿ ಆಗಿದ್ದು, ಮುಂದಿನ ಎರಡು ವರ್ಷ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಕಟೀಲ್ ಪುನರುಚ್ಚರಿಸಿದ್ದಾರೆ.

Bangalore
ನಳಿನ್ ಕುಮಾರ್ ಕಟೀಲ್
author img

By

Published : Jun 16, 2021, 1:30 PM IST

ಬೆಂಗಳೂರು: ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಹೈಕಮಾಂಡ್ ರಂಗ ಪ್ರವೇಶದ ನಡುವೆಯೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಸದ್ಯ ಬಿ.ಎಸ್.ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿ ಆಗಿದ್ದು, ಮುಂದಿನ ಎರಡು ವರ್ಷ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದರು.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಎರಡು ದಿನ ಇಲ್ಲಿಯೇ ಇರಲಿದ್ದಾರೆ. ಇಂದು ಸಚಿವರ ಜೊತೆ ಮಾತುಕತೆ ನಡೆಸಲಿದ್ದು, ನಾಳೆ ಯಾವ ಶಾಸಕರು ಭೇಟಿಗೆ ಇಚ್ಛಿಸಿದ್ದಾರೋ, ಮಾತನಾಡುವ ಅಪೇಕ್ಷೆ ವ್ಯಕ್ತಪಡಿಸಿತ್ತಾರೋ ಅವರ ಭೇಟಿಗೆ ಅವಕಾಶ ನೀಡಲಿದ್ದಾರೆ.

ಇದನ್ನೂ ಓದಿ: ಅಕ್ಕಿ ಮೇಲೆ ಆಸೆ, ನೆಂಟರ ಮೇಲೆ ಪ್ರೀತಿ ಎನ್ನುವಂತಾಗಿದೆ ಸಚಿವರ ಪರಿಸ್ಥಿತಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.