ETV Bharat / city

ನಮಾಜ್: ಕರ್ನಾಟಕ ಹೈಕೋರ್ಟ್ ಆವರಣದಲ್ಲಿ ಚಿತ್ರೀಕರಿಸಿದ ಮಾಧ್ಯಮದ ವಿರುದ್ಧ ಎಫ್ಐಆರ್ - ಕರ್ನಾಟಕ ಹೈಕೋರ್ಟ್​ನಲ್ಲಿ ಮಾಧ್ಯಮ ವಿರುದ್ಧ ದೂರು

ನ್ಯಾಯಾಲಯದ ಆವರಣದಲ್ಲಿ ಇಬ್ಬರು ಮಹಿಳೆಯರು ನಮಾಜ್ ಮಾಡುತ್ತಿರುವ ದೃಶ್ಯವನ್ನು ಚಿತ್ರೀಕರಿಸಿ ಪ್ರಸಾರ ಮಾಡಿದ ಮಾಧ್ಯಮ ಸಂಸ್ಥೆಯೊಂದರ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ.

author img

By

Published : May 19, 2022, 9:56 PM IST

ಬೆಂಗಳೂರು: ಹೈಕೋರ್ಟ್​ನ ಕಚೇರಿ ಕೊಠಡಿಯೊಳಗೆ ಇಬ್ಬರು ಮಹಿಳೆಯರು ನಮಾಜ್ ಮಾಡುತ್ತಿರುವ ದೃಶ್ಯವನ್ನು ನ್ಯಾಯಾಲಯದ ಆವರಣದಲ್ಲಿ ಚಿತ್ರೀಕರಿಸಿ ಪ್ರಸಾರ ಮಾಡಿದ ಮಾಧ್ಯಮ ಸಂಸ್ಥೆ ವಿರುದ್ಧ ಹೈಕೋರ್ಟ್‌ನ ಉಸ್ತುವಾರಿ ರಿಜಿಸ್ಟ್ರಾರ್ (ಆಡಳಿತ) ದೂರು ದಾಖಲಿಸಿದ್ದಾರೆ.

ಉಸ್ತುವಾರಿ ರಿಜಿಸ್ಟ್ರಾರ್ (ಆಡಳಿತ) ಎನ್.ಜಿ ದಿನೇಶ್ ನೀಡಿರುವ ದೂರಿನ ಮೇರೆಗೆ ವಿಧಾನಸೌಧ ಠಾಣೆ ಪೊಲೀಸರು ಆ ಸಂಸ್ಥೆ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 447 (ಕ್ರಿಮಿನಲ್ ಅತಿಕ್ರಮಣ) ಮತ್ತು 505(2) (ಸಾರ್ವಜನಿಕ ಕೇಡಿಗೆ ಕಾರಣವಾಗುವ ಹೇಳಿಕೆಗಳು) ಅಡಿ ಪ್ರಕರಣ ದಾಖಲಿಸಲಾಗಿದೆ.

ಎಫ್‌ಐಆರ್‌ ವಿವರ: 'ಕರ್ನಾಟಕ ಹೈಕೋರ್ಟ್‌ನಲ್ಲಿ ನಮಾಜ್’ ಹೆಸರಿನಲ್ಲಿ ಫೇಸ್​​ಬುಕ್ ಮತ್ತು ಯೂಟ್ಯೂಬ್ ಚಾನೆಲ್​​ನಲ್ಲಿ 1.48 ನಿಮಿಷಗಳ ದೃಶ್ಯವನ್ನು ಮೇ 14 ರಂದು ಅಪ್‌ಲೋಡ್ ಮಾಡಲಾಗಿದೆ. ಅನುಮತಿ ಇಲ್ಲದೇ ಹೈಕೋರ್ಟ್ ಆವರಣದೊಳಗೆ ಪ್ರವೇಶಿಸುವುದು ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ. ಹಾಗಿದ್ದೂ, ಹೈಕೋರ್ಟ್ ಒಳಗೆ ಬಂದು ನಿಯಮ ಉಲ್ಲಂಘಿಸಿ ಚಿತ್ರೀಕರಿಸಲಾಗಿದೆ.

ಅಲ್ಲದೇ, ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ವಿಡಿಯೊ ತುಣುಕು ಎರಡು ಸಮುದಾಯಗಳ ನಡುವೆ ದ್ವೇಷವನ್ನು ಹರಡುತ್ತದೆ. ಆದ್ದರಿಂದ, ವಿಡಿಯೋ ಚಿತ್ರೀಕರಿಸಿ ಅಪ್‌ಲೋಡ್ ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರುತ್ತೇವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.