ಬೆಂಗಳೂರು : ನಮ್ಮ ಮೆಟ್ರೋ ಹಸಿರು ಮಾರ್ಗದ ಆರ್‌ವಿರಸ್ತೆಯಿಂದ ಯಲಚೇಲನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಸೆಪ್ಟೆಂಬರ್ 27ರಿಂದ 28ರವರೆಗೆ ವಾಣಿಜ್ಯ ಕಾರ್ಯಾಚರಣೆ ಸ್ಥಗಿತಗೊಳಿಸಲಾಗುತ್ತಿದೆ.
ನಮ್ಮ ಮೆಟ್ರೋ 2ನೇ ಹಂತದ ಯಲಚೇನಹಳ್ಳಿ-ಅಂಜನಾಪುರ ವಿಸ್ತರಿಸಿದ ಮಾರ್ಗದಲ್ಲಿ ವಾಣಿಜ್ಯ ಸಂಚಾರಕ್ಕೆ ಅಗತ್ಯ ಸಿದ್ಧತೆ ಹಾಗೂ ಸಿಸ್ಟಂಗಳ ಪರೀಕ್ಷೆ ನಡೆಸುವುದಕ್ಕಾಗಿ ಆರ್‌ವಿರಸ್ತೆಯಿಂದ ಯಲಚೇಲನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಕಾರ್ಯಾಚರಣೆ ಸ್ಥಗಿತಗೊಳಿಸಲಾಗುತ್ತಿದೆ.
ಹೀಗಾಗಿ, ರೈಲುಗಳ ಸೇವೆಯು 27-28ರಂದು ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೆ ನಾಗಸಂದ್ರ ನಿಲ್ದಾಣದಿಂದ ಆರ್‌ವಿರಸ್ತೆ ನಿಲ್ದಾಣದವರೆಗೆ ಮಾತ್ರ ಲಭ್ಯವಿರುತ್ತದೆ.
29ರಂದು ಹಸಿರು ಮಾರ್ಗದಲ್ಲಿ ಬೆಳಗ್ಗೆ 7ಗಂಟೆಯಿಂದ ಯಲಚೇನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಎಂದಿನಂತೆ ಮೆಟ್ರೋ ಸೇವೆ ಪ್ರಾರಂಭವಾಗಲಿದೆ. ನೇರಳೆ ಮಾರ್ಗದ ಬೈಯಪ್ಪನಹಳ್ಳಿ ಮತ್ತು ಮೈಸೂರು ರಸ್ತೆ ನಿಲ್ದಾಣಗಳ ನಡುವೆ ಎಂದಿನಂತೆ ಮೆಟ್ರೋ ಸೇವೆ ಇರಲಿದ್ದು, ಯಾವುದೇ ಬದಲಾವಣೆ ಇರಲ್ಲ.