ಬೆಂಗಳೂರು: ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಮತ್ತೊಮ್ಮೆ ಸಿಎಂ ಯಡಿಯೂರಪ್ಪಗೆ ಕರೆ ಮಾಡಿ ಅಭಿನಂದನೆ ಹೇಳಿದ್ದಾರೆ.
ಸಿಎಂ ಯಡಿಯೂರಪ್ಪಗೆ ಕರೆ ಮಾಡಿ ಉಪ ಚುನಾವಣೆಯಲ್ಲಿನ ಭರ್ಜರಿ ಗೆಲುವಿಗೆ ಮತ್ತೊಮ್ಮೆ ಅಭಿನಂದನೆ ಹೇಳಿದ್ದಾರೆ. ಇದೇ ವೇಳೆ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರ ಕೊಡುವುದಾಗಿ ಸಿಎಂಗೆ ಪ್ರಧಾನಿ ಭರವಸೆ ಕೊಟ್ಟಿದ್ದಾರೆ. ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ತೆರಿಗೆಯ ಪಾಲು ಕೊಡುವ ಬಗ್ಗೆಯೂ ಮಾತುಕತೆ ನಡೆದಿದ್ದು, ಆದಷ್ಟು ಬೇಗ ರಾಜ್ಯದ ಪಾಲಿನ ಜಿಎಸ್ಟಿ ಪರಿಹಾರ ಕೊಡುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯದ ತೆರಿಗೆ ಸಂಗ್ರಹ, ಅಭಿವೃದ್ಧಿ ಕುರಿತು ಸಿಎಂ ಯಡಿಯೂರಪ್ಪ ಅವರಿಂದ ಪ್ರಧಾನಿ ಮೋದಿ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.