ಬೆಂಗಳೂರು: ಇಂದು ಕೊಮ್ಮಘಟ್ಟದಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆ ಭಾನುವಾರ ತಡರಾತ್ರಿ ಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ಎಸ್.ಟಿ.ಸೋಮಶೇಖರ್, ಮುನಿರತ್ನ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇಂದು ಶಂಕುಸ್ಥಾಪನೆಯಾಗಲಿರುವ ಬೆಂಗಳೂರು ಉಪನಗರ ರೈಲು ಯೋಜನೆ, ರಾಷ್ಟ್ರೀಯ ಹೆದ್ದಾರಿ ಯೋಜನೆ ಕುರಿತು ಮುಖ್ಯಮಂತ್ರಿಗಳಿಗೆ ಅಧಿಕಾರಿಗಳು ಮಾಹಿತಿ ನೀಡಿದರು. ಇದೇ ವೇಳೆ ಸಿದ್ಧತೆ, ಭದ್ರತೆ ಕುರಿತು ಸಹ ಪರಿಶೀಲನೆ ನಡೆಸಿದರು.
ಪ್ರಧಾನಿ ಇಂದು ಮಧ್ಯಾಹ್ನ 2.45 ಕ್ಕೆ ಬೆಂಗಳೂರಿನ ಕೊಮ್ಮಘಟ್ಟದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಕೆಲ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಇದನ್ನೂ ಓದಿ: ಅಗ್ನಿವೀರರು 4 ವರ್ಷದ ಸೇವೆ ನಂತರ ನಮ್ಮ ಪಕ್ಷದ ಕಚೇರಿಯಲ್ಲಿ ಸೆಕ್ಯುರಿಟಿ ಆಗಬಹುದು: ಕೈಲಾಶ್ ವಿಜಯವರ್ಗಿಯಾ