ETV Bharat / city

ಕ್ರೀಡೆ ವ್ಯಕ್ತಿತ್ವವನ್ನು ರೂಪಿಸುತ್ತದೆ: ಸಿಎಂ ಬೊಮ್ಮಾಯಿ - Basavaraja Bommai

ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಅವರು ದೇಶಕ್ಕೆ ಸ್ಫೂರ್ತಿ. ಭಾರತಕ್ಕೆ ಮೂರು ಒಲಿಂಪಿಕ್ಸ್ ಚಿನ್ನದ ಪದಕವನ್ನು ಗೆದ್ದು ಕೊಟ್ಟ ಅವರ ಸಾಧನೆಯನ್ನು ಯಾರೂ ಇಂದಿಗೂ ಮರೆತಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

National Sports Day celebration in bangalure
ಬಸವರಾಜ ಬೊಮ್ಮಾಯಿ
author img

By

Published : Aug 30, 2021, 7:14 AM IST

ಬೆಂಗಳೂರು: ಕ್ರೀಡೆ ನಮ್ಮಲ್ಲಿ ಶಿಸ್ತು, ಆರೋಗ್ಯವನ್ನು ತುಂಬಿ ವ್ಯಕ್ತಿತ್ವವನ್ನು ರೂಪಿಸುತ್ತದೆ. ಸೋಲು-ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸುವ ಕ್ರೀಡಾ ಸ್ಫೂರ್ತಿಯನ್ನು ಬೆಳೆಸುವ ಜೊತೆಗೆ ದೇಶದ ವರ್ಚಸ್ಸು ವೃದ್ಧಿಸಲು ಸಹಕಾರಿಯಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಕರ್ನಾಟಕ ಒಲಿಂಪಿಕ್ ಸಂಸ್ಥೆ ಪದ್ಮಭೂಷಣ ಮೇಜರ್ ಧ್ಯಾನ್ ಚಂದ್ ಸಿಂಗ್ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕ್ರೀಡಾಪಟುಗಳಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಧ್ಯಾನ್ ಚಂದ್ ಅವರು ದೇಶಕ್ಕೆ ಸ್ಫೂರ್ತಿ. ಭಾರತಕ್ಕೆ ಮೂರು ಒಲಿಂಪಿಕ್ಸ್ ಚಿನ್ನದ ಪದಕವನ್ನು ಗೆದ್ದ ಅವರ ಸಾಧನೆಯನ್ನು ಯಾರೂ ಇಂದಿಗೂ ಮರೆತಿಲ್ಲ ಎಂದರು.

ಸಾಧಕರಿಗೆ ಸಾವು ಅಂತ್ಯವಲ್ಲ:

ನಾನು ಗೃಹ ಸಚಿವನಾಗಿದ್ದಾಗ ಕ್ರೀಡಾಪಟುಗಳ‌ ನೇಮಕಕ್ಕೆ‌ ಅನುಮತಿ ನೀಡಿದ್ದೆ. ಈಗ ಕ್ರೀಡಾಪಟುಗಳನ್ನು ಇತರೆ ಇಲಾಖೆಗಳಲ್ಲಿ ನೇಮಕ‌ ಮಾಡಿಕೊಳ್ಳುವ ಬಗ್ಗೆ ನಮ್ಮ ಸರ್ಕಾರ ಸಕಾರಾತ್ಮಕವಾಗಿ ಚಿಂತನೆ ನಡೆಸುತ್ತದೆ.‌ ಕ್ರೀಡೆಗೆ ನಾನು ಹೆಚ್ಚಿನ ಪ್ರೋತ್ಸಾಹ ನೀಡುತ್ತೇನೆ. 'ಸಾಧಕರಿಗೆ ಸಾವು ಅಂತ್ಯವಲ್ಲ' ಎಂದು ಸ್ವಾಮಿ ವಿವೇಕಾನಂದರು ತಿಳಿಸಿದ್ದರು. ಅಂತೆಯೇ ಸಾಧನೆಗೆ ಪರಿಶ್ರಮ ಬಹಳ ಮುಖ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕರ್ನಾಟಕದ ಮಾನ್ಯ ರಾಜ್ಯಪಾಲರು ಸ್ವತಃ ಕ್ರೀಡಾಪಟುಗಳಾಗಿದ್ದು, ಅಂತಾರಾಜ್ಯ ಹಾಗೂ ಅಂತರ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಕರ್ನಾಟಕದ ಕ್ರೀಡಾಕ್ಷೇತ್ರ ಅಭಿವೃದ್ಧಿಗೊಳಿಸಲಾಗುವುದು ಎಂದರು.

ಸಚಿವ ಡಾ. ನಾರಾಯಣ ಗೌಡ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಕ್ರೀಡೆಗೆ ಸಾಕಷ್ಟು ಉತ್ತೇಜನ ನೀಡುತ್ತಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರೋತ್ಸಾಹ ನೀಡುತ್ತಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ಉದ್ಯೋಗಾವಕಾಶಕ್ಕೆ ಮೀಸಲಾತಿ ಇರುವಂತೆ ಇತರೆ ಇಲಾಖೆಯಲ್ಲೂ ಶೇ. 2 ರಷ್ಟು ಮೀಸಲಾತಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಬೆಂಗಳೂರಿನ ಜಕ್ಕೂರಿನಲ್ಲಿರುವ ಏರೋಡ್ರಮ್​ನಲ್ಲಿ ಪ್ರತಿ ವರ್ಷ 100 ಜನ ಪೈಲಟ್ ಗಳಿಗೆ ತರಬೇತಿ ನೀಡುವ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ ಎಂದರು.

ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷ ಕೆ. ಗೋವಿಂದರಾಜ್ ಮತ್ತು ಇತರರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.