ETV Bharat / city

ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎನ್‌ಸಿಪಿ ಸ್ಪರ್ಧೆ: ಶರದ್ ಪವಾರ್ - ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎನ್‌ಸಿಪಿ ಸ್ಪರ್ಧೆ

ದೇಶದ ಐದು ರಾಷ್ಟ್ರೀಯ ಪಕ್ಷಗಳಲ್ಲಿ ಎನ್‌ಸಿಪಿಯೂ ಒಂದಾಗಿದೆ. ಮುಂಬರುವ ಚುನಾವಣೆಯಲ್ಲಿ ಪಕ್ಷವು ಕರ್ನಾಟಕದ ಕೆಲವು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ ಎಂದು ಶರದ್ ಪವಾರ್ ತಿಳಿಸಿದ್ದಾರೆ.

Sharad Pawar
ಎನ್‌ಸಿಪಿ ಪಕ್ಷದ ರಾಷ್ಟ್ರಾಧ್ಯಕ್ಷ ಶರದ್ ಪವಾರ್
author img

By

Published : Apr 18, 2022, 10:44 PM IST

ಬೆಂಗಳೂರು: ದೇಶದ ಐದು ರಾಷ್ಟ್ರೀಯ ಪಕ್ಷಗಳಲ್ಲಿ ಎನ್‌ಸಿಪಿಯೂ ಒಂದಾಗಿದ್ದು, ಉತ್ತರದ ಕೆಲವು ರಾಜ್ಯಗಳಲ್ಲಿ ನಮ್ಮ ಪಕ್ಷ ಪ್ರಬಲವಾಗಿದೆ. ಇದೀಗ ಕರ್ನಾಟಕಕ್ಕೂ ನಮ್ಮ ಪಕ್ಷ ಪದಾರ್ಪಣೆ ಮಾಡಿದೆ. ಮುಂಬರುವ ಚುನಾವಣೆಯಲ್ಲಿ ಪಕ್ಷವು ರಾಜ್ಯದ ಕೆಲವು ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಲಿದೆ. ಇದರಿಂದ ಯಾವುದೇ ಪಕ್ಷದ ಜಾತ್ಯಾತೀತ ಅಭ್ಯರ್ಥಿಗಳಿಗೆ ತೊಂದರೆ ಆಗುವುದಿಲ್ಲ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ರಾಜ್ಯಸಭಾ ಸದಸ್ಯ ಹಾಗೂ ಎನ್‌ಸಿಪಿ ಪಕ್ಷದ ರಾಷ್ಟ್ರಾಧ್ಯಕ್ಷ ಶರದ್ ಪವಾರ್ ತಿಳಿಸಿದರು.

ನಗರದ ಲೀಲಾ ಪ್ಯಾಲೇಸ್​ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕದಲ್ಲಿ ಪಕ್ಷದ ಸಂಘಟನೆಯು ನಮ್ಮ ಮುಖ್ಯ ಉದ್ದೇಶವಾಗಿದ್ದು, ರಾಜ್ಯದಲ್ಲಿ ಈಗ ಪಕ್ಷದ ಕಚೇರಿ ಆರಂಭಿಸಿದ್ದೇವೆ. ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸೀಮಿತ ಕ್ಷೇತ್ರಗಳಲ್ಲಿ ಎನ್‌ಸಿಪಿ ಸ್ಪರ್ಧೆ ಮಾಡಲಿದೆ. ರಾಜ್ಯದ ವಸ್ತುಸ್ಥಿತಿ ಮತ್ತು ಸಮಸ್ಯೆಗಳನ್ನು ತಿಳಿಯಲು ಬೆಂಗಳೂರಿನಿಂದ ಬೆಳಗಾವಿವರೆಗೆ ಒಟ್ಟು 511 ಕಿ.ಮೀ ಪಾದಯಾತ್ರೆ ಹಮ್ಮಿಕೊಳ್ಳಲಿದ್ದೇವೆ ಎಂದು ಹೇಳಿದರು.

ಇತ್ತೀಚೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ, ಬಿಜೆಪಿಯೇತರ ಮುಖ್ಯಮಂತ್ರಿಗಳನ್ನೊಳಗೊಂಡ ಸಮಾವೇಶ ಆಯೋಜಿಸುವ ಮೂಲಕ ಜಾತ್ಯಾತೀತ ಬಲವನ್ನು ಒಗ್ಗೂಡಿಸುವ ಕುರಿತು ಚರ್ಚಿಸಿರುವುದಾಗಿ ಅವರು ತಿಳಿಸಿದರು.

ಇದನ್ನೂ ಓದಿ:ಹುಡುಗಿ ಪಾನ್ ತಿಂದ್ರೆ ಇಷ್ಟಪಟ್ಟಂತೆ: ಸಂಗಾತಿ ಆಯ್ಕೆಗೊಂದು ವಿಶೇಷ ಜಾತ್ರೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.