ಬೆಂಗಳೂರು: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರಕುಮಾರ್ ಬೋಸ್ ಅವರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ಚಂದ್ರಕುಮಾರ್ ಬೋಸ್ ಅವರನ್ನು ಸಿಎಂ ಆತ್ಮೀಯವಾಗಿ ಬರಮಾಡಿಕೊಂಡು ಸ್ವಾತಂತ್ರ್ಯೋತ್ಸವದ ಶುಭ ಕೋರಿದರು. ನಂತರ ಪರಸ್ಪರ ಕುಶಲೋಪರಿ ವಿಚಾರಿಸಿ ಕೆಲಕಾಲ ಮಾತುಕತೆ ನಡೆಸಿದರು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಸುಭಾಷ್ ಚಂದ್ರ ಬೋಸ್ ಅವರು ಮಾಡಿದ ಹೋರಾಟ, ತ್ಯಾಗ, ಸಂಘರ್ಷವನ್ನು ಮುಖ್ಯಮಂತ್ರಿಗಳು ಮೆಲುಕು ಹಾಕಿದರು. ಈ ಸಂದರ್ಭದಲ್ಲಿ ಚಂದ್ರಕುಮಾರ್ ಬೋಸ್ ಕುಟುಂಬಸ್ಥರು ಉಪಸ್ಥಿತರಿದ್ದರು.