ETV Bharat / city

ಬೆಂಗಳೂರಲ್ಲಿ ಎರಡು ಹೊಸ ರೂಪಾಂತರಿ ಕೊರೊನಾ ವೈರಸ್ ಪತ್ತೆ: ತಜ್ಞರಿಂದ ಎಚ್ಚರಿಕೆ

ಬೆಂಗಳೂರಲ್ಲಿ ಬಿಎ 2-10 ಹಾಗೂ ಬಿಎ2-12 ಎಂಬ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ.ಸಿ.ಎನ್.ಮಂಜುನಾಥ್ ಮಾಹಿತಿ ನೀಡಿದ್ದಾರೆ.

Corona News Variant in Bengaluru
ಬೆಂಗಳೂರಲ್ಲಿ ಎರಡು ಹೊಸ ರೂಪಾಂತರಿ ಕೊರೊನಾ ವೈರಸ್
author img

By

Published : Apr 23, 2022, 9:28 PM IST

ಬೆಂಗಳೂರು: ದೆಹಲಿ ಹಾಗೂ ಮುಂಬೈನಲ್ಲಿ ಕಾಣಿಸಿಕೊಂಡಿದ್ದ ಬಿಎ 2ಗೆ ಸಂಬಂಧಿಸಿದ ಎರಡು ಹೊಸ ರೂಪಾಂತರಿ ವೈರಸ್ ಬೆಂಗಳೂರಿನಲ್ಲಿ ಕಾಣಿಸಿಕೊಂಡಿದೆ. ಬಿಎ 2-10 ಹಾಗೂ ಬಿಎ2-12 ಎಂಬ ರೂಪಾಂತರಿ ವೈರಸ್ ಬೆಂಗಳೂರಿನಲ್ಲಿ ಪತ್ತೆಯಾಗಿವೆ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ, ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ.ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ.

ದೇಶದಲ್ಲಿ ಕೋವಿಡ್ ನಾಲ್ಕನೇ ಅಲೆ ಈಗಾಗಲೇ ಆರಂಭವಾಗಿದ್ದು, ಜನರು ಎಚ್ಚರಿಕೆಯಿಂದ ಇರಬೇಕೆಂದು ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ ಇನ್ನು 3-4 ವಾರದಲ್ಲಿ ಕೊರೊನಾ 4ನೇ ಅಲೆ ಆರಂಭವಾಗುವ ಸಾಧ್ಯತೆ ಇದೆ. ಈ ಬಾರಿಯ ಅಲೆಗೆ ಬಿಎ 2 ರೂಪಾಂತರಿ ವೈರಸ್ ಕಾರಣವಾಗಬಹುದು ಎಂದು ತಜ್ಞರು ಹೇಳುತ್ತಿದ್ದಾರೆ. ಕೊರೊನಾ 3ನೇ ಅಲೆಯಲ್ಲಿ ಸೋಂಕಿತರು ಯಾವೆಲ್ಲ ಲಕ್ಷಣ ಹೊಂದಿದ್ದರೋ ಅದೇ ಲಕ್ಷಣಗಳು ನಾಲ್ಕನೇ ಅಲೆಯಲ್ಲಿಯೂ ಗೋಚರಿಸುವ ಸಾಧ್ಯತೆ ದಟ್ಟವಾಗಿದೆ. ಈ ಬಾರಿಯೂ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆಯಾಗಿರುತ್ತದೆ. ಆದರೆ ಸೋಂಕು ವ್ಯಾಪಕವಾಗಿರುತ್ತದೆ ಎಂದು ಡಾ. ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಎಲ್ಲ ನಿರ್ಬಂಧಗಳನ್ನೂ ತೆಗೆದು ನಿತ್ಯ ಚಟುವಟಿಕೆಗಳು ಎಂದಿನಂತೆ ಪ್ರಾರಂಭವಾಗಿವೆ. ಹೀಗಾಗಿ ಇನ್ನೆರಡು ವಾರಗಳಲ್ಲಿ ದೈನಂದಿನ ಕೊರೊನಾ ಕೇಸ್‌ಗಳಲ್ಲಿ ಏರಿಕೆ ಕಂಡುಬರಲಿದೆ. ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಅದರಲ್ಲೂ ಶ್ವಾಸಕೋಶ, ಹೃದಯ ಸಮಸ್ಯೆ, ಕ್ಯಾನ್ಸರ್‌ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿರುವವರು ಅತ್ಯಂತ ಜಾಗರೂಕರಾಗಿ ಇರಬೇಕು. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಸಲಹೆ ನೀಡಿದ್ದಾರೆ.

ಜ್ವರ, ಕೆಮ್ಮು-ಶೀತವನ್ನು ನಿರ್ಲಕ್ಷಿಸಬೇಡಿ. ಕೂಡಲೇ ಕೊವಿಡ್ ಟೆಸ್ಟ್‌ಗೆ ಒಳಗಾಗಿ, ಲಸಿಕೆ ತೆಗೆದುಕೊಂಡಿದ್ದೇವೆಂದು ನಿರ್ಲಕ್ಷ್ಯ ಬೇಡ. ತುಂಬಾ ಜಾಗರೂಕತೆಯಿಂದ ಇರಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ದೇಶದ ಮಕ್ಕಳಲ್ಲಿ ಕೋವಿಡ್-19 ಪ್ರಕರಣಗಳು ವೇಗವಾಗಿ ಹೆಚ್ಚಲು ಕಾರಣವೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.