ETV Bharat / city

ಎನ್ಇಪಿಯಲ್ಲಿ ದೇಸಿ ಕಲೆಗಳ ಕಲಿಕೆಗೆ ಒತ್ತು: ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ - ನೂತನ ಶಿಕ್ಷಣ ನೀತಿ ಮತ್ತು ರಾಜ್ಯ ಸರ್ಕಾರ

ಹಳೇ ಮೈಸೂರು ಭಾಗದಲ್ಲಿ ಮೂಡಲಪಾಯ ಯಕ್ಷಗಾನವು ಕಾರಣಾಂತರಗಳಿಂದ ತುಸು ನೇಪಥ್ಯಕ್ಕೆ ಸರಿದಿದೆ. ಈ ಪ್ರದೇಶದ ಪ್ರತಿಯೊಂದು ಮನೆಯಲ್ಲೂ ಕಲಾವಿದರಿದ್ದಾರೆ ಎಂದು ಸಚಿವ ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟಿದ್ದಾರೆ.

New education policy gives priority to learn art forms: minister ashwathnarayana
ಎನ್ಇಪಿಯಲ್ಲಿ ದೇಸೀ ಕಲೆಗಳ ಕಲಿಕೆಗೆ ಒತ್ತು: ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ
author img

By

Published : Jan 11, 2022, 2:09 AM IST

ಬೆಂಗಳೂರು: ವಿದ್ಯಾರ್ಥಿಗಳ ಪರಿಪೂರ್ಣ ವಿಕಸನವನ್ನೇ ಗುರಿಯಾಗಿ ಹೊಂದಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪೂರ್ವ ಪ್ರಾಥಮಿಕ ತರಗತಿಗಳ ಹಂತದಿಂದಲೇ ಕಲೆಗಳ ಕಲಿಕೆಗೆ ಒತ್ತು ಕೊಡಲಾಗಿದೆ. ಈ ಮೂಲಕ ಮೂಡಲಪಾಯದಂತಹ ದೇಶೀಯ ಮತ್ತು ಸ್ಥಳೀಯ ಕಲೆಗಳ ಸಂರಕ್ಷಣೆ ಮತ್ತು ಉಜ್ವಲ ಬೆಳವಣಿಗೆ ಸಾಧ್ಯವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ನಗರದ ಎಡಿಎ ರಂಗಮಂದಿರದಲ್ಲಿ ಸೋಮವಾರ ಮೂಡಲಪಾಯ ಯಕ್ಷಗಾನ ಪರಿಷತ್ತನ್ನು ಉದ್ಘಾಟಿಸಿ ಮಾತನಾಡಿದ ಅವರು ಮನುಷ್ಯ ಯಾವುದೇ ವೃತ್ತಿಯಲ್ಲಿ ತೊಡಗಿಕೊಂಡರೂ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಅಭಿರುಚಿಗಳಿರಲೇಬೇಕು. ಇಲ್ಲದೆ ಹೋದರೆ ಬದುಕಿನ ಆನಂದ ಸಿಗುವುದಿಲ್ಲ ಎಂದರು.

New education policy gives priority to learn art forms: minister ashwathnarayana
ಕಾರ್ಯಕ್ರಮದಲ್ಲಿಅಶ್ವತ್ಥನಾರಾಯಣ

ಹಳೇ ಮೈಸೂರಿನ ಭಾಗದಲ್ಲಿ ಮೂಡಲಪಾಯ ಯಕ್ಷಗಾನವು ಕಾರಣಾಂತರಗಳಿಂದ ತುಸು ನೇಪಥ್ಯಕ್ಕೆ ಸರಿದಿದೆ. ಈ ಪ್ರದೇಶದ ಪ್ರತಿಯೊಂದು ಮನೆಯಲ್ಲೂ ಕಲಾವಿದರಿದ್ದು, ಬದುಕಿನಲ್ಲಿ ಒಮ್ಮೆಯಾದರೂ ಮುಖಕ್ಕೆ ಬಣ್ಣ ಹಚ್ಚಿಕೊಂಡು ರಂಗದ ಮೇಲೆ ಅಭಿನಯಿಸಿದವರಿದ್ದಾರೆ. ಇಂತಹ ಶ್ರೀಮಂತ ಕಲಾ ಪ್ರಕಾರವನ್ನು ಕಾಲಕ್ಕೆ ತಕ್ಕಂತೆ ಪುನರುಜ್ಜೀವನಗೊಳಿಸಬೇಕಾಗಿದೆ. ಇದಕ್ಕೆ ಆದಿಚುಂಚನಗಿರಿ ಶ್ರೀಗಳು ಪೋಷಕರಾಗಿರುವುದು ಸ್ವಾಗತಾರ್ಹ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿಯು ದೇಶೀ ಕಲೆಗಳ ಉತ್ಕರ್ಷ ಮತ್ತು ಕಲಿಕೆಯಲ್ಲಿ ಅವುಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಅಗತ್ಯವಾದ ಕಾರ್ಯತಂತ್ರವನ್ನು ಒಳಗೊಂಡಿದೆ. ಮೂಡಲಪಾಯ ಯಕ್ಷಗಾನವು ದಕ್ಷಿಣ ಕರ್ನಾಟಕದ ಸಾಂಸ್ಕೃತಿಕ ಸಿರಿವಂತಿಕೆಗೆ ಒಂದು ನಿದರ್ಶನವಾಗಿದೆ ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ಸೌಮ್ಯನಾಥಾನಂದ ಸ್ವಾಮೀಜಿ, ಮಂಡ್ಯದ ಶಾಸಕ ಎಂ.ಶ್ರೀನಿವಾಸ, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಐಆರ್​ಎಸ್​​ ಅಧಿಕಾರಿ ಮತ್ತು ನಾಟಕಕಾರ ಜಯರಾಮ ರಾಯಪುರ, ಹಿರಿಯ ಲೇಖಕ ಪ್ರೊ.ಬಿ.ಜಯಪ್ರಕಾಶ ಗೌಡ ಉಪಸ್ಥಿತರಿದ್ದರು.

ಇದನ್ನೂ ಓದಿ: ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರ ಆಕ್ರೋಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.