ETV Bharat / city

'ಬರ ನಿಯಂತ್ರಣ ಜಲಾನಯನ ಅಭಿವೃದ್ಧಿ'ಎಂಬ ಹೊಸ ಯೋಜನೆ ಜಾರಿಗೆ ತರಲು ಉದ್ದೇಶಿಸಲಾಗಿದೆ: ವಜುಭಾಯ್ ವಾಲಾ

author img

By

Published : Feb 17, 2020, 6:18 PM IST

ರಾಜ್ಯದ ನೂರು ತಾಲೂಕುಗಳಲ್ಲಿ ‘ಬರ ನಿಯಂತ್ರಣ ಜಲಾನಯನ ಅಭಿವೃದ್ಧಿ ‘ ಎಂಬ ಹೊಸ ಯೋಜನೆ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ರಾಜ್ಯಪಾಲ ವಜುಭಾಯ್ ವಾಲಾ ತಿಳಿಸಿದ್ದಾರೆ.

KN_BNG_01_Governor_Speech_Script_9024736
'ಬರ ನಿಯಂತ್ರಣ ಜಲಾನಯನ ಅಭಿವೃದ್ಧಿ'ಎಂಬ ಹೊಸ ಯೋಜನೆ ಜಾರಿಗೆ ತರಲು ಉದ್ದೇಶಿಸಲಾಗಿದೆ: ವಜುಭಾಯ್ ವಾಲಾ

ಬೆಂಗಳೂರು: ರಾಜ್ಯದ ನೂರು ತಾಲೂಕುಗಳಲ್ಲಿ ‘ಬರ ನಿಯಂತ್ರಣ ಜಲಾನಯನ ಅಭಿವೃದ್ಧಿ ‘ ಎಂಬ ಹೊಸ ಯೋಜನೆ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ರಾಜ್ಯಪಾಲ ವಜುಭಾಯ್ ವಾಲಾ ತಿಳಿಸಿದ್ದಾರೆ.

ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಇಂದು ಜಂಟಿ ಅಧಿವೇಶನದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಾಗೂ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯನ್ನು ಸಮನ್ವಯಗೊಳಿಸಿ ಬರ ನಿಯಂತ್ರಣ ಮಾಡಲು ಜಲಾನಯ ಅಭಿವೃದ್ಧಿ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು. ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಹ ಕೃಷಿ ಆಧಾರಿತ ಕುಟುಂಬಗಳಿಗೆ ಕೇಂದ್ರ ಸರ್ಕಾರ ನೀಡುತ್ತಿರುವ 6 ಸಾವಿರ ರೂ. ವಾರ್ಷಿಕ ಹಣಕಾಸಿನ ನೆರವಿನ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿ 4 ಸಾವಿರ ರೂ. ಹಣವನ್ನು ನೀಡುತ್ತಿದೆ. ಇದರಿಂದ 41 ಲಕ್ಷ ರೈತರ ಖಾತೆಗೆ ನೇರವಾಗಿ 825 ಕೋಟಿ ರೂ. ಗಳನ್ನು ವರ್ಗಾಯಿಸಲಾಗಿದೆ.

ಕೃಷಿಕರಿಗೆ ಪ್ರಯೋಜನವಾಗುವಂತೆ ಸಹಕಾರಿ ಬ್ಯಾಂಕ್ ಗಳಲ್ಲಿ ಪ್ರತಿ ರೈತ ಕುಟುಂಬಕ್ಕೆ 1 ಲಕ್ಷ ರೂ. ವರೆಗೆ ಬಾಕಿ ಇರುವ ಸಾಲವನ್ನು ಮತ್ತು ವಾಣಿಜ್ಯ ಬ್ಯಾಂಕ್ ಗಳಲ್ಲಿ ಪ್ರತಿ ರೈತ ಕುಟುಂಬಕ್ಕೆ 2 ಲಕ್ಷ ರೂ.ವರೆಗೆ ಅವಧಿ ಮೀರಿದ ಸಾಲಗಳನ್ನು ಮನ್ನಾ ಮಾಡುವ ಬೆಳೆ ಸಾಲ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ರೇಷ್ಮೆಗೂಡಿನ ವ್ಯವಹಾರಗಳಲ್ಲಿ ಪಾರದರ್ಶಕತೆಯನ್ನು ತರಲು ಹಾಗೂ ನ್ಯಾಯಯುತವಾದ ಬೆಲೆಗಳನ್ನು ಖಾತರಿಪಡಿಸಲು ಪ್ರಮುಖ ರೇಷ್ಮೆಗೂಡು ಮಾರುಕಟ್ಟೆಗಳಲ್ಲಿ ಈ ಹರಾಜು ಪ್ರಕ್ರಿಯೆಯನ್ನು ಜಾರಿಗೊಳಿಸಿದೆ. ರೇಷ್ಮೆಗೂಡು ಮಾರುಕಟ್ಟೆಗಳಲ್ಲಿ ಈ ಪಾವತಿ ಯೋಜನೆ ಸಹ ಪ್ರಗತಿಯಲ್ಲಿದೆ ಎಂದರು.

ಈ ವರ್ಷಾವಧಿಯಲ್ಲಿ ತುರ್ತು ಪ್ರಕರಣಗಳನ್ನು ನಿಭಾಯಿಸಲು 15 ಜಿಲ್ಲೆಗಳಲ್ಲಿ ಸುಸಜ್ಜಿತ ಪಶುವೈದ್ಯ ಸಂಚಾರಿ ವಾಹನಗಳನ್ನು ಜಾರಿಗೆ ತರಲಾಗುತ್ತಿದೆ. ದೇಶದಲ್ಲಿ ಕಡಲ ಮೀನು ಉತ್ಪಾದನೆಯಲ್ಲಿ ಆರನೇ ಸ್ಥಾನ ಮತ್ತು ಒಳನಾಡು ಮೀನು ಉತ್ಪಾದನೆಯಲ್ಲಿ 9 ನೇ ಸ್ಥಾನವನ್ನು ಹೊಂದಿದೆ ಎಂದು ತಿಳಿಸಿದ ರಾಜ್ಯಪಾಲರು, ಕಡಲು ಮತ್ತು ಒಳನಾಡು ಮೀನುಗಾರಿಕೆಯ ಸುಸ್ತಿರ ಅಭಿವೃದ್ಧಿಯತ್ತ ಗಮನಹರಿಸಲಾಗಿದೆ ಎಂದರು. ರಾಜ್ಯದ ಪ್ರಮುಖ ಅರಣ್ಯ ಪ್ರದೇಶವನ್ನು ಹೆಚ್ಚಿಸುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. 2019ರ ಡಿಸೆಂಬರ್ ಕೊನೆವರೆಗೆ 2.83 ಕೋಟಿ ಸಸಿಗಳನ್ನು ನೆಡುವ ಮೂಲಕ 41 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ನಡುತೋಪುಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಸಮರ್ಥನೆ ಮಾಡಿಕೊಂಡರು.

ರಾಜ್ಯ ಸರ್ಕಾರ ನೀರಾವರಿಗೆ ಒತ್ತು ನೀಡಿದ್ದು, ಪ್ರಸಕ್ತ ಹಣಕಾಸಿನ ವರ್ಷದಲ್ಲಿ 12 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ನೀರಾವರಿ ಸೌಲಭ್ಯವನ್ನು ಕಲ್ಪಿಸಲಾಗಿದೆ. 475 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಹೇಮಾವತಿ ನಾಲೆಯ ನೀರಾವರಿ ಯೋಜನೆಗಳ ಆಧುನೀಕರಣಕ್ಕೆ ಒತ್ತು ನೀಡಲಾಗಿದೆ. ರಾಜ್ಯದಲ್ಲಿರುವ 21 ನೀರಾವರಿ ಯೋಜನೆಗಳಿಗೆ 4050 ಕೋಟಿ ರೂ.ಹಣವನ್ನು ವೆಚ್ಚ ಮಾಡಲು ಆಡಳಿತ್ಮಾಕ ಒಪ್ಪಿಗೆ ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಕೆರೆಗಳಿಗೆ ನೀರು ತುಂಬಿಸುವ ಮೂಲಕ ಅಂತರ್ ಜಲ ಪುನಶ್ಚೇತನಕ್ಕೆ ಹೆಚ್ಚು ಪ್ರಾಧಾನ್ಯ ನೀಡಲಾಗಿದೆ. ಈ ನಿಟ್ಟಿನಲ್ಲಿ 196 ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯದ 41 ತಾಲೂಕುಗಳಲ್ಲಿ ಅಂತರ್ಜಲ ನಿರ್ವಹಣಾ ಕಾರ್ಯ ಕೈಗೊಳ್ಳಲು ಅಟಲ್ ಭೂಜಲ ಯೋಜನೆಯಡಿ ಕೇಂದ್ರ ಸರ್ಕಾರದಿಂದ ನೀಡಿರುವ ಅನುದಾನಕ್ಕೆ ಪೂರಕವಾಗಿ ಹೆಚ್ಚುವರಿ ಅನುದಾನ ನೀಡುವ ಮೂಲಕ ಬರ ಮುಕ್ತ ರಾಜ್ಯವನ್ನಾಗಿ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ರಾಜ್ಯಪಾಲ ವಜುಭಾಯ್ ವಾಲಾ ಸರ್ಕಾರವನ್ನು ಬಲವಾಗಿ ಸಮರ್ಥಿಸಿಕೊಂಡರು. ’ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ‘ ಯೋಜನೆಯ ಅಡಿಯಲ್ಲಿ ಕಳೆದ ಜುಲೈ ಅಂತ್ಯಕ್ಕೆ 3.30 ಲಕ್ಷ ಫಲಾನುಭವಿಗಳ ಚಿಕಿತ್ಸೆಗೆ ಒಪ್ಪಿಗೆ ನೀಡಲಾಗಿದೆ.

ನವೆಂಬರ್ ಅಂತ್ಯದ ವೇಳೆಗೆ ಜಾರಿಗೆ ಬರುವಂತೆ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವ ಧನವನ್ನು 3,500 ಸಾವಿರ ರೂ.ನಿಂದ 4 ಸಾವಿರ ರೂ.ಗೆ ಹೆಚ್ಚಿಸಲಾಗಿದೆ ಮತ್ತು ಸಂತಾನ್ಪೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ತಂತ್ರಾಂಶಕ್ಕೆ ಮಾಹಿತಿ ವರ್ಗಾವಣೆ ಮಾಡಲು ಪ್ರತಿ ಆಶಾ ಕಾರ್ಯಕರ್ತೆಯರಿಗೆ ಒಂದು ಬಾರಿ 3 ಸಾವಿರ ರೂ.ನಂತೆ ಪ್ರೋತ್ಸಾಹಧನ ನೀಡಲಾಗಿದೆ. ಚಿಕ್ಕಮಗಳೂರು, ಯಾದಗಿರಿ, ಹಾವೇರಿ, ಚಿಕ್ಕಬಳ್ಳಾಪುರ, ಕೊಡುಗು ಮತ್ತು ಕಾರಾವಾರ ಜಿಲ್ಲೆಗಳಲ್ಲಿ ಆರು ಹೊಸ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಕಲಬುರಗಿಯಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯ 300 ಹಾಸಿಗೆ ಆಸ್ಪತ್ರೆಯ ಘಟಕವನ್ನು ಹಾಗೂ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಕ್ಯಾನ್ಸರ್ ಘಟಕವನ್ನು ಸ್ಥಾಪಿಸಲಾಗುತ್ತಿದೆ. ಅಪೌಷ್ಠಿಕತೆ ಕೊರತೆ ಇರುವ ಮಕ್ಕಳಿಗೆ ಚಿಕಿತ್ಸೆ ನೀಡಲು 49 ತಾಲೂಕು ಆಸ್ಪತ್ರೆಗಳಲ್ಲಿ ಪೌಷ್ಠಿಕ ಪುನರ್ವಸತಿ ಕೇಂದ್ರ ಸ್ಥಾಪನೆ, ಕ್ಯಾನ್ಸರ್ ತಪಾಸಣೆ ಸೌಲಭ್ಯ ಇಲ್ಲದ ರಾಜ್ಯದ 10 ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಚಾರಿ ಮ್ಯಾಮೋಗ್ರಫಿ ಹಾಗೂ ಸರ್ವಿಕಲ್ ಕ್ಯಾನ್ಸರ್ ಡೈಯಾಗ್ನೋಸ್ಟಿಕ್ ಘಟಕ ಸ್ಥಾಪನೆಗೆ ಅನುಮತಿ ನೀಡಲಾಗಿದೆ.

ಅಂಗನವಾಗಿ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುಬ ಮಾಸಿಕ ಗೌರವಧನ 8 ರಿಂದ 10 ಸಾವಿರ ರೂ,ಗೆ ಹೆಚ್ಚಳ, ಸಹಾಯಕಿಯರ ಮಾಸಿಕ ಗೌರವಧನದಿಂದ 4 ಸಾವಿರ ರೂ.ನಿಂದ 5,250 ರೂ.ಗೆ ಹೆಚ್ಚಳ ಹಾಗೂ ಗ್ರಾಮಮಟ್ಟದಲ್ಲಿ ಪುನರ್ವಸತಿ ಕಾರ್ಯಕರ್ತ ಮತ್ತು ಬಹುಹಂತದ ಪುನರ್ವಸತಿ ಕಾರ್ಯಕರ್ತ ಮಾಸಿಕ ಗೌರವ ಧನ ದ್ವಿಗುಣಗೊಳಿಸಲಾಗಿದೆ. ಭಾಗ್ಯಲಕ್ಷ್ಮಿ ಬಾಂಡ್ ಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಸ್ವಸಹಾಯ ಗುಂಪುಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡುವ ಹಾಗೂ ಹೆಚ್ಚುವರಿಯಾಗಿ 10 ಸಾವಿರ ರೂ. ಸ್ವಸಹಾಯ ಗುಂಪುಗಳನ್ನು ರಚಿಸುವ ಮೂಲಕ ಮಹಿಳೆಯರ ಸ್ವಾವಲಂಬನೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ರಾಜ್ಯಪಾಲರು ತಿಳಿಸಿದರು.

ಡಿಸೆಂಬರ್ ಕೊನೆವೇಳೆಗೆ ರಾಜ್ಯ ಸರ್ಕಾರ 1.15 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿದ್ದು, 3,461 ನಿವೇಶನಗಳನ್ನು ಸಾವರ್ಜನಿಕರಿಗೆ ವಿತರಿಸಲಾಗಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 4,459 ಕೋಟಿ ರೂ.ವೆಚ್ಚದಲ್ಲಿ ಮೂಲಸೌಕರ್ಯಗಳಿಗೆ 83 ಸಾವಿರ ಕ್ಕೂ ಹೆಚ್ಚು ಮನೆಗಳ ನಿರ್ಮಾಣಕ್ಕೆ ಆಡಳಿತಾತ್ಮಕ ಒಪ್ಪಿಗೆ ನೀಡಿದೆ ಎಂದರು. ಜನವರಿ ಅಂತ್ಯದ ವೇಳೆಗೆ 1,752 ಕೋಟಿ ರೂ.ವೆಚ್ಚದಲ್ಲಿ 16 ಸಾವಿರ ಗ್ರಾಮೀಣ ನೀರು ಸರಬರಾಜು ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ 25 ಬಹು ಗ್ರಾಮಯೋಜನೆಯನ್ನು ಪೂರ್ಣಗೊಳಿಸಿದ್ದು, 7.54 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ನಮ್ಮ ಗ್ರಾಮ, ನಮ್ಮ ರಸ್ತೆ ಯೋಜನೆಯಡಿ 874 ಕಿ.ಮೀ. ಉದ್ದದ ರಸ್ತೆಯನ್ನು 695 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.

ಪೋಡಿ ಅಭಿಯಾನ ಯೋಜನೆಯಡಿ 2,452 ಗ್ರಾಮಗಳಲ್ಲಿ ಪೋಡಿ ಕಾರ್ಯ ಪೂರ್ಣಗೊಳಿಸಲಾಗಿದೆ. ಉಳಿದ ಗ್ರಾಮಗಳಲ್ಲಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಆಡಳಿತ ಯಂತ್ರವನ್ನು ಚುರುಕುಗೊಳಿಸಲು ಸರ್ಕಾರ ನಿರ್ಧರಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಸಾಮಾಜಿಕ,ಆರ್ಥಿಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದು, ಎಸ್ ಸಿಎಸ್ ಪಿ/ಟಿಎಸ್ ಪಿ ಯೋಜನೆಯಡಿ ಈ ವರ್ಗದ ಅನುಕೂಲಕ್ಕಾಗಿ 30,445 ಕೋಟಿ ರೂ. ಹಂಚಿಕೆ ಮಾಡಲಾಗಿದೆ ಎಂದು ಹೇಳಿದರು. ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ಣ ಮತ್ತು ನಂತರ ಹಾಸ್ಟೆಲ್, ವಸತಿ ಶಾಲೆ ಮತ್ತು ಕಾಲೇಜುಗಳ ಪ್ರವೇಶಕ್ಕೆ ಒಪ್ಪಿಗೆ ನೀಡಿದ್ದು, ವಸತಿ ಶಾಲೆಗಳ ನಿರ್ವಹಣೆ ಮತ್ತು ನಿರ್ಮಾಣಕ್ಕಾಗಿ 1,500 ಕೋಟಿ ರೂ. ಮೀಸಲಿರಿಸಲಾಗಿದೆ. ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಶಿಕ್ಷಣ ಸಾಲ ಮಂಜೂರಾತಿ, ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳಲ್ಲಿ 4,762 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಹೇಳಿದರು.

ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಧ್ಯೇಯೋದ್ದೇಶದಿಂದ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳನ್ನು ಒಗ್ಗೂಡಿಸುವ ಮೂಲಕ 1 ರಿಂದ 12 ನೇ ತರಗತಿಯವರೆಗ 276 ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗಿದೆ. ಈ ಶಾಲೆಯ ಮಕ್ಕಳ ನಿರ್ಜಲೀಕರಣಗೊಳಿಸುವುದನ್ನು ತಪ್ಪಿಸಲು ಪ್ರಸಕ್ತ ಶೈಕ್ಷಣೀಕ ವರ್ಷದಿಂದ ‘ವಾಟರ್ ಬೆಲ್ ‘ (ನೀರು ಸೇವೆ ಗಂಟೆ) ಎಂಬ ಹೊಸ ಯೋಜನೆಯನ್ನು ಪರಿಚಯಿಸಲಾಗುತ್ತಿದೆ. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶೈಕ್ಷಣಿಕ ಸೌಲಭ್ಯವನ್ನು ಒದಗಿಸಲು ರಾಯಚೂರು ವಿಶ್ವ ವಿದ್ಯಾನಿಲಯದ ಸ್ಥಾಪನೆಗೆ ಅನುಮೋದನೆ ನೀಡಿದೆ ಎಂದರು.

ರಾಯಚೂರಿನಲ್ಲಿ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಸ್ಥಾಪನೆಗೆ ಮಂಜೂರು ಮಾಡಲಾಗಿದೆ. ಮುಖ್ಯಮಂತ್ರಿ ಕೌಶಲ್ಯ ಯೋಜನೆ ಹಾಗೂ ಪ್ರಧಾನ ಮಂತ್ರಿ ಕೌಶಲ್ಯ ವಿಖಾಸ ಯೋಜನೆಯಡಿ 33 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಲಾಗಿದೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ನವೆಂಬರ್ ಅಂತ್ಯದವರೆಗೆ 71,475 ಕೋಟಿ ರೂ. ಹೂಡಿಕೆಗೆ ಒತ್ತು ನೀಡಿದ್ದು, ಇದು ದೇಶದಲ್ಲೇ 2 ನೇ ಸ್ಥಾನವಾಗಿದೆ ಎಂದು ರಾಜ್ಯಪಾಲರು ಸಂತಸ ವ್ಯಕ್ತಪಡಿಸಿದರು. 2 ಮತ್ತು 3 ನೇ ಹಂತದ ನಗರಗಳಲ್ಲಿ ಆದ್ಯತಾ ವಲಯಗಳಲ್ಲಿ ಸಮಗ್ರ ಕೈಗಾರಿಕೆ ಅಭಿವೃದ್ಧಿಯನ್ನು ಗಮನದಲ್ಲಿಟ್ಟು ಬಂಡವಾಳ ಆಕರ್ಷಿಸಲು ವಿನೂತನ ತಂತ್ರಜ್ಞಾನವನ್ನು ಪರಿಯಿಸುವುದು ಹಾಗೂ ಹೆಚ್ಚುವರಿ ಉದ್ಯೋಗ ಸೃಷ್ಟಿಸುವ ಸಲುವಾಗಿ ನೂತನ ಕೈಗಾರಿಕಾ ನೀತಿಯನ್ನು ಘೋಷಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ರಾಜ್ಯದಲ್ಲಿ ಸಿದ್ದ ಉಡುಪು ತಯಾರಿಕಾ ವಲಯದ ಅಭಿವೃದ್ಧಿಗಾಗಿ ನೂತನ ಸಿದ್ದ ಉಡುಪು ನೀತಿ ಘೋಷಿಸಲಾಗಿದೆ ಎಂದರು. ರಾಜ್ಯದ ನಾವೀನ್ಯತಾ ಪರಿಸರ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು 2019 ರ ನವೆಂಬರ್ ರಾಜ್ಯ ನಾವೀನ್ಯತಾ ಪ್ರಾಧಿಕಾರ ಸ್ಥಾಪಿಸಲಾಗಿದೆ. ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ ಸಹಯೋಗದೊಂದಿಗೆ ಬಯೋಫಾರ್ಮ ಕ್ಷೇತ್ರಗಳಲ್ಲಿ ನವೋದ್ಯಮಗಳನ್ನು ಘೋಷಿಸಲು ಮತ್ತು ಬೆಂಬಲಿಸಲು ಬಯೋ ಇನ್ಕ್ಯೂಬೇಟರ್ ಅನ್ನು ಪ್ರಾರಂಭಿಸಲಾಗಿದೆ ಎಂದರು. ಕಾರ್ಖಾನೆಗಳಲ್ಲಿ ಮಹಿಳೆಯರು ರಾತ್ರಿಪಾಳಿಯಲ್ಲಿ ಕೆಲಸ ನಿರ್ವಹಿಸಲು ಕಲ್ಪಿಸಿದೆ. ಅಂತಹ ಮಹಿಳೆಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಠಿಣ ನಿಬಂಧನೆ ಹಾಗೂ ಷರತ್ತುಗಳನ್ನು ವಿಧಿಸಿದೆ ಎಂದು ಹೇಳಿದರು.

ಎಲ್ಲಾ ನ್ಯಾಯಾಲಯಗಳಲ್ಲ ಮಹಿಳಾ ವಕೀಲರ ಬಳಕೆಗಾಗಿ ಸೌಲಭ್ಯಗಳೊಂದಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಸ್ಥಾಪಿಸಲಾಗಿದೆ. ಶಿವಮೊಗ್ಗ, ಹಾಸನ, ವಿಜಾಪುರ ಹಾಗೂ ಕಾರವಾರ ವಿಮಾನ ನಿಲ್ದಾಣ ಅಭಿವೃದ್ಧಿಗೆ ವಿಸ್ರುತ ಯೋಜನಾ ವರದಿ ಸಿದ್ದಪಡಿಸಲಾಗುತ್ತಿದೆ. ನವೀಕರಿಸಬಹುದಾದ ಇಂಧನ ವಲಯದಲ್ಲಿ ರಾಜ್ಯ ಮುಂಜೂಣಿಯಲ್ಲಿದೆ. ಪಾವಗಡದಲ್ಲಿ ಆಲ್ಟ್ರಾ ಮೆಗಾ ಸೋಲಾರ್ ಯೋಜನೆಯನ್ನು ಪೂರ್ಣಗೊಳಿಸಲಾಗಿದೆ. ತಲಾ 2,500 ಮೆಗಾವ್ಯಾಟ್ ಸಾಮರ್ಥ್ಯದ ಇನ್ನು ಮೂರು ಆಲ್ಟ್ರಾ ಮೆಗಾ ನವೀಕರಿಸಬಹುದಾದ ಇಂಧನ ಪವರ್ ಪಾರ್ಕ್ ಗಳನ್ನು ಕೊಪ್ಪಳ, ಬೀದರ್ ಹಾಗೂ ಗದಗದಲ್ಲಿ ಸ್ಥಾಪಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.